ನೇತಾಜಿ ಎಂದೇ ಪ್ರಸಿದ್ಧರಾದ ಭಾರತದ ಸ್ವಾತಂತ್ರ್ಯ ಸಂಗ್ರಾಮದ ಪ್ರಮುಖ ಜನನಾಯಕರಲ್ಲಿ ಒಬ್ಬರು : ಹೊನ್ನಗೆಜ್ಜೆ

0
9

ಕಲಬುರಗಿ: ನಗರದ ಅನನ್ಯ ಪದವಿ ಮತ್ತು ಸಮಾಜಕಾರ್ಯ ಸ್ನಾತಕೋತ್ತರ ಪದವಿ ಮಹಾವಿದ್ಯಾಲಯದಲ್ಲಿ ನೇತಾಜಿ ಸುಭಾಷಚಂದ್ರ ಭೋಸ್ ಅವರ ೧೨೫ನೇ ಜಯಂತಿಯನ್ನು ಆಚರಿಸಲಾಯಿತು.

ಈ ಸಂಧರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಶರಣು ಬಿ ಪೂಜಾರಿ ಹೊನ್ನಗೆಜ್ಜೆ ಅವರು ಮಾತನಾಡುತ್ತಾ ಸುಭಾಷ್ ಚಂದ್ರ ಬೋಸ್ ಜನನ: ಜನವರಿ ೨೩, ೧೮೯೭ ಮರಣ (ಮಾಹಿತಿ ಇಲ್ಲ) ನೇತಾಜಿ ಎಂದೇ ಪ್ರಸಿದ್ಧರಾದ ಭಾರತದ ಸ್ವಾತಂತ್ರ್ಯ ಸಂಗ್ರಾಮದ ಪ್ರಮುಖ ಜನನಾಯಕರಲ್ಲಿ ಒಬ್ಬರು. ಸ್ವಾಮಿ ವಿವೇಕಾನಂದರ ವಿಚಾರಗಳಿಂದ ಪ್ರಭಾವಿತರಾದ ಇವರು ಭಾರತ ಸ್ವಾತಂತ್ರ ಹೋರಾಟದಲ್ಲಿ ಅತ್ಯಂತ ವಿಶಿಷ್ಟ ಪಾತ್ರವಹಿಸಿದವರು. ಅವರು ಭಾರತದ ಮಹಾನ್ ವ್ಯಕ್ತಿಯಾಗಿದ್ದರು.

Contact Your\'s Advertisement; 9902492681

ಅವರು ಭಾರತೀಯ ಸ್ವಾತಂತ್ರ್ಯದ ಕಾರಣಕ್ಕಾಗಿಯೇ ಹೋರಾಡಿದ್ದರು. ಭಾರತವು ಸ್ವಾತಂತ್ರ್ಯ ಪಡೆಯಲು ಭಾರತಕ್ಕೆ ಸಹಾಯ ಮಾಡಿದ ಜರ್ಮನಿ, ಜಪಾನ್, ರಷ್ಯಾಗಳಂತಹ ದೇಶಗಳು ಬ್ರಿಟಿಷ್ ವಿರುದ್ಧ ಹೋರಾಡಲು ಮತ್ತು ಸ್ವಾತಂತ್ರ್ಯ ಪಡೆಯಲು ಬೋಸರಿಗೆ ಸಹಾಯ ಮಾಡಲು ಸಿದ್ಧವಾಗಿದ್ದವು ಎಂದು ಭಾವಿಸಲಾಗಿವೆ. ಗಾಂಧಿಯವರು ಸ್ವಾತಂತ್ರ್ಯ ಪಡೆಯುವ ಬಗೆಗೆ ಒಂದೇ ಮಾರ್ಗದಲ್ಲಿದ್ದರು. ಆದರೆ ಬೋಸ್ ಸ್ವಾತಂತ್ರ್ಯಕ್ಕೆ ಸಶಸ್ತ್ರ ಹೋರಾಟವನ್ನೂ ಒಪ್ಪಿದ್ದರು. ಅವರ ಹೋರಾಟವು ವಿಫಲವಾದರೂ, ಭಾರತ ಸ್ವಾತಂತ್ರ ಪಡೆಯುವಲ್ಲಿ ಜನರನ್ನು ಉತ್ತೇಜಿಸಿ ತನ್ನದೇ ಆದ ಕೊಡಿಗೆ ನೀಡಿದೆ ಎಂದು ಹೊನ್ನಗೆಜ್ಜೆ ಹೇಳಿದರು.

ಈ ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ವೀರಯ್ಯ ಹಿರೇಮಠ, ಆಶಾರಾಣಿ ಕಲ್ಕೋರಿ, ಗೌರಿ ಬೆಟಿಗೇರಿ, ಸರಿತಾ ಕರಿಗುಡ್ಡ, ಭಾಗ್ಯಶ್ರೀ ಪಾಟೀಲ್, ಅಶ್ವಿನಿ ಗೌಳಿ, ರಾಜೇಶ್ವರಿ ಕಿರಣಗಿ. ಪ್ರೀತಿ ಸಜ್ಜನ್. ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here