ಸುರಪುರ: ತಹಸೀಲ್ ಕಚೇರಿಯ ಸಭಾಂಗಣದಲ್ಲಿ ಇದೇ ೨೫ ರಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷರು ಹಾಗು ಶಾಸಕರಾದ ನರಸಿಂಹ ನಾಯಕ (ರಾಜುಗೌಡ) ಅವರ ಅಧ್ಯಕ್ಷತೆಯಲ್ಲಿ ಹಮ್ಮಿಕೊಂಡಿದ್ದ ಸಾರ್ವಜನಿಕರ ಕುಂದು ಕೊರತೆ ಜನಸ್ಪಂದನ ಸಭೆಯನ್ನು ಮುಂದೂಡಲಾಗಿದೆ ಎಂದು ತಹಸೀಲ್ದರ್ ಸುಬ್ಬಣ್ಣ ಜಮಖಂಡಿ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ತಹಸೀಲ್ದಾರರು,ಶಾಸಕರಾದ ನರಸಿಂಹ ನಾಯಕ (ರಾಜುಗೌಡ) ಅವರಿಗೆ ಕೊರೊನಾ ಸೊಂಕು ದೃಢವಾದ ಹಿನ್ನೆಲೆಯಲ್ಲಿ ಶಾಸಕರು ಸಭೆಯಲ್ಲಿ ಭಾಗವಹಿಸುವುದು ಸಾಧ್ಯವಾಗದ ಕಾರಣ ಸಭೆಯನ್ನು ಮುಂದೂಡಲಾಗಿದ್ದು, ಮುಂದಿನ ಸಭೆಯ ದಿನಾಂಕವನ್ನು ನಂತರದಲ್ಲಿ ತಿಳಿಸಲಾಗುವುದು ಎಂದು ಅವರು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಶಹಾಬಾದ: ಮಾನವೀಯ ಮೌಲ್ಯಗಳು ವಿದ್ಯಾರ್ಥಿ ಯುವಜನರ ಬೆಳೆಸಿಕೊಂಡು ಉತ್ತಮ ನಾಗರಿಕರಾಗಬೇಕೆಂದು ಎಸ್ಎಸ್ ಮರುಗೋಳ ಕಾಲೇಜಿನ ಪ್ರಾಚಾರ್ಯರಾದ ಪ್ರೊ. ಕೆ.ಬಿ. ಬಿಲ್ಲವ…
ಶಹಾಪುರ : 26 : ಚಿಕ್ಕ ವಯಸ್ಸಿನಲ್ಲಿಯೆ ಹಿರಿದಾದ ಜ್ಞಾನವನ್ನು ಹೊಂದಿದ್ದ ಚೆನ್ನಬಸವಣ್ಣ ಷಟಸ್ಥಲ ಜ್ಞಾನಿ ಎಂದು ಕರೆಯಿಸಿಕೊಂಡರು. ಬಸವಣ್ಣನವರ…
ಶಹಾಬಾದ: ನಗರಸಭೆಯ ವಾರ್ಡ ನಂ.3 ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಾಜೀದ್ ಖಾನ್ ಜಮಾದಾರ ಅವರು ಗೆಲುವು ಸಾಧಿಸಿದ್ದಾರೆ. ನಗರದ…
ಶಹಾಬಾದ: ಜಾತಿ-ಬೇಧ ಎನ್ನದೇ ಸರ್ವರಿಗೂ ಮೂಲಭೂತ ಹಕ್ಕನ್ನು ಒದಗಿಸಿ, ಬದುಕುವ ವಾತಾವರಣ ಸೃಷ್ಠಿಸಿದ್ದೇ ಡಾ. ಬಿ .ಆರ್. ಅಂಬೇಡ್ಕರ್ ಬರೆದ…
ಶಹಾಬಾದ: ಸಂವಿಧಾನದ ಆಶೋತ್ತರಗಳು, ಮೌಲ್ಯಗಳನ್ನು ಅರಿತು ಅದರಂತೆ ಎಲ್ಲರೂ ನಡೆದರೆ ನಮ್ಮ ದೇಶ ಜಗತ್ತಿನಲ್ಲಿಯೇ ಉನ್ನತ ಸ್ಥಾನದಲ್ಲಿರುತ್ತದೆ ಎಂದು ಬಿಜೆಪಿ…
ಕಲಬುರಗಿ: ನಗರದ ಆಳಂದ ರಸ್ತೆಯಲ್ಲಿರುವ ಇ.ಪಿ.ಎಫ್ ಕ್ಷೇತ್ರೀಯ ಕಾರ್ಯಾಲಯದಲ್ಲಿ ಮಂಗಳವಾರ 69ನೇ ಕನ್ನಡ ರಾಜ್ಯೋತ್ಸವವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮವನ್ನು ಕಲ್ಯಾಣ…