ಕಲಬುರಗಿ: ಮಕ್ಕಳಿಗೆ ಕ್ಷಯರೋಗ (ಟಿಬಿ) ಲಕ್ಷಣಗಳು ಇರುವ ಯಾವುದೇ ವ್ಯಕ್ತಿ ಕಂಡು ಬಂದರೆ ಅವರಿಗೆ ಕ್ಷಯರೋಗ ಪರೀಕ್ಷೆಗೆ ಒಳಪಡಿಸುವಂತೆ ತಿಳಿಸಬೇಕು ಗುಣಮುಖವಾಗುವಂತಹ ರೋಗವಾಗಿದೆ ಇದರ ಬಗ್ಗೆ ಭಯ ಪಡದೆ ಕ್ಷಯ ಖಚಿತವಾಗಿರುವ ರೋಗಿಯು ಸರಿಯಾದ ರೀತಿಯಲ್ಲಿ ಚಿಕಿತ್ಸೆಯನ್ನು ಪಡೆದು ಗುಣಮುಖವಾದಗ ಕ್ಷಯರೋಗ ಮುಕ್ತ ಕರ್ನಾಟಕ ಮಾಡಲು ಸಾಧ್ಯವಿದೆ ಕ್ಷಯ ರೋಗ ಮುಕ್ತ ಕರ್ನಾಟಕಕ್ಕೆ ಗ್ರಾಮದ ಜನರು ಕೈ ಜೋಡಿಸಬೇಕೆಂದು ಡಾಟ್ಸ್ ಪ್ಲಾಸ್ ಕ್ಷಯರೋಗ ಮೇಲ್ವಿಚಾರಕ ಸುರೇಶ್ ದೊಡ್ಡಮನಿ ಹೇಳಿದರು.
ಅವರು ಚಿಂಚೋಳ್ಳಿ ಪಟ್ಟಣದ ಚಂದಪುರ ಶ್ರೀಮತಿ ಸಿ ಬಿ ಪಾಟೀಲ್ ಕಲಾ ಮತ್ತು ವಾಣಿಜ್ಯ ಪದವಿ ಮಹಾವಿದ್ಯಾಲಯದಲ್ಲಿ, ಜಿಲ್ಲಾ ಪಂಚಾಯತ ಮತ್ತು ಜಿಲ್ಲಾ ಕ್ಷಯರೋಗ ನಿರ್ಮೂಲನಾ ಕೇಂದ್ರ ಹಾಗೂ ತಾಲ್ಲೂಕ ಆರೋಗ್ಯ ಕೇಂದ್ರ ಚಂದಾಪುರ ಚಿಂಚೋಳ್ಳಿ ಇವರ ಸಂಯೋಗದಲ್ಲಿ ಹಮ್ಮಿಕೊಳ್ಳಲಾಯಿತು.
ಆಜಾದಿಕಾ ಅಮೃತ ಮಹೋತ್ಸವ ಕಾರ್ಯಕ್ರಮದಡಿ ಟಿಬಿ ಸೋಲಿಸಿ ಕರ್ನಾಟಕದಲ್ಲಿ ಗೆಲ್ಲಿಸಿ ಅಭಿಯಾನ ಕಾರ್ಯಕ್ರಮದಲ್ಲಿ ಕ್ಷಯರೋಗ ನಿರ್ಮೂಲನೆ ಮಾಡಲು ಕ್ಷಯರೋಗ ನಿರ್ಮೂಲನೆ ಮಾಡಲು ಪ್ರತಿಯೊಬ್ಬರು ವಿದ್ಯಾರ್ಥಿಗಳಲ್ಲಿ ಹಾಗೆ ಸಾಮಾನ್ಯ ಪ್ರಜೆಗಳು ಕೈ ಜೋಡಿಸುವುದರ ಜೊತೆಗೆ ನಿಮ್ಮ ಊರಿನ ಸಮುದಾಯದ ಜನರಿಗೆ ಕ್ಷಯರೋಗ ಕುರಿತು ಅರಿವು ಮಾಹಿತಿ ನೀಡಬೇಕು ಅಂದಾಗ ಮಾತ್ರ ರೋಗ ತಡೆಯಲು ಸಾಧ್ಯವೆಂದರು ಅವರು ಸರ್ಕಾರ ಕೈಗೊಂಡಿರುವ ಮಹತ್ವದ ಕಾರ್ಯಕ್ರಮ ವಿದ್ಯಾರ್ಥಿಗಳಲ್ಲಿ ಹೆಚ್ಚು ಟಿಬಿ ಲಕ್ಷಣ ಕಂಡುಬರುತ್ತಿದೆ ಇದರಿಂದ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲು ಟಿಬಿ ಸೋಲಿಸಿ ಕರ್ನಾಟಕ ಗೆಲ್ಲಿಸಿ 2025 ರ ಒಳಗೆ ಎಂಬ ಘೋಷವಾಕ್ಯದಂತೆ ಸಮುದಾಯದ ಜನರು ಕ್ಷಯರೋಗ ನಿರ್ಮೂಲನಗೆ ಪಣ ತೊಡಬೇಕೆಂದರು.
ನಂತರ ಜಿಲ್ಲಾ ಕ್ಷಯರೋಗ ಡಿ ಆರ್ ಟಿಬಿ ಸಮಾಲೋಚಕ ಮಂಜುನಾಥ ಕಂಬಾಳಿಮಠ ಅವರು ಮಾತನಾಡುತ್ತ ಪ್ರತಿ ಒಬ್ಬರು ತಮ್ಮ ಆರೋಗ್ಯದ ಕಡೆ ಲಕ್ಷವಹಿಸಬೇಕು, ಹಾಗೆ ಕ್ಷಯರೋಗ ಲಕ್ಷಣ ಬಂದರು. ಹೇದರ ಬೇಕಿಲ್ಲ ಈ ಕ್ಷಯರೋಗ ಗುಣಪಡಿಸಲು ಸಾಧ್ಯ, ಪ್ರತಿ ಗ್ರಾಮದ ಗ್ರಾಮ ಪಂಚಾಯತ್ ಸದಸ್ಯರಿಗೆ ತಾಲ್ಲೂಕಿನ ದಂತ್ಯ ಗ್ರಾಮದ ಜನರಿಗೆ ಮಾಹಿತಿ ನೀಡುವುದು ಬಹಳ ಮುಖ್ಯವಾಗಿದೆ ಅದರಿಂದ ಶಾಲಾ-ಕಾಲೇಜಿನಲ್ಲಿ ಕ್ಷಯರೋಗದ ಬಗ್ಗೆ ಅರಿವು ಮೂಡಿಸುತ್ತಿದೆವೆ ಹಾಗೆ ಕ್ಷಯರೋಗ ಗಾಳಿ ಮೂಲಕ ಒಬ್ಬರಿಂದ ಇನ್ನೊಬ್ಬರಿಗೆ ಹರಡುವಂತ ರೋಗವಾಗಿದ್ದು ಪ್ರತಿ ಒಬ್ಬರು ಎಚ್ಚರವಹಿಸಬೇಕು ಸರ್ಕಾರದ ಸೌಲಭ್ಯಗಳ ಸದುಪಯೋಗ ಪಡಿಸಿಕೊಳ್ಳಬೇಕು ಕ್ಷಯರೋಗ ಪರೀಕ್ಷೆ ಮತ್ತು ಚಿಕಿತ್ಸೆ ಸಂಪೂರ್ಣವಾಗಿ ಉಚಿತ ಇರುತ್ತದೆ. ಮತ್ತು ಆರು ತಿಂಗಳ ಚಿಕಿತ್ಸೆಯ ಸಂಧರ್ಬದಲ್ಲಿ ರೋಗಿಗಳಿಗೆ ಪೌಷ್ಟಿಕ ಆಹಾರ ಸಂಬಂದ ಮಾಸಿಕ ೫೦೦ ರೂ, ಗಳನ್ನು ಕೊಡಲಾಗುತ್ತದೆ ಇದರ ಉಪಯೋಗ ಪ್ರತಿ ರೋಗಿಯು ಪಡೆದುಕೊಳ್ಳತ್ತಿದ್ದರೆ, ಎಂದು ತಿಳಿಸಿದರು.
ಪ್ರಮುಖರಾದ ಕ್ಷಯರೋಗ ನಿರ್ಮೂಲನ ಕೇಂದ್ರದ ತಾಲ್ಲೂಕ ಹಿರಿಯ ಕ್ಷಯರೋಗ ಮೇಲ್ವಿಚಾರಕ ದಿನೇಶ್ ವಾಡೆಕರ್ ಅವರು ರಸ ಪ್ರಶ್ನೆ ಕಾರ್ಯಕ್ರಮ ವಿದ್ಯಾರ್ಥಿಗಳಿಗೆ ನಡೆಸಿಕೊಟ್ಟರು ಹಾಗೆ ಕ್ಷಯರೋಗ ಕುರಿತು ಮುಪನ್ಯಾಸಕರುದರು. ನಿರ್ಣಾಯಕರಾಗಿ ಕಾಲೇಜಿನ ಉಪನ್ಯಾಸಕರು, ರಸ ಪ್ರಶ್ನೆಯ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಪ್ರಥಮ ದ್ವೀತಿಯ ತೃತೀಯ ಬಹುಮಾನ ನೀಡಿ ಹುರಿದುಂಬಿಸಲಾಯಿತು. ನಂತರ ವಿದ್ಯಾರ್ಥಿಗಳಿಗೆ ನೀಡಿ ಬಿತ್ತಿ ಪತ್ರ ಮೂಲಕ ಜಾಗೃತಿ ಮೂಡಿಸಲಾಯಿತು.
ವೇದಿಕೆ ಮೇಲೆ ಪ್ರಮುಖರಾದ, ಸಿ ಬಿ ಪಾಟೀಲ್ ಪದವಿ ಮಹಾವಿದ್ಯಾಲಯದ ಪ್ರಾಚಾರ್ಯರ ಡಾ. ಮಣಿಕಮ್ಮ ಎನ್ ಸುಲ್ತಾನಪುರಕರ್ ಅವರು ಅಧ್ಯಕ್ಷತೆವಹಿಸಿದ್ದರು. ಪ್ರಾಧ್ಯಾಪಕರಾದ ಡಾ. ಲಕ್ಷ್ಮಣ ಥಾವೂರು, ಪ್ರೋ ಕಾಶಿನಾಥ ಹುಣಜೆ, ಪ್ರೋ ಸಿದ್ದಣ್ಣ ಕೋಳ್ಳಿ ವೇದಿಕೆ ಮೇಲೆ ಉಪಸ್ಥಿತರಿದ್ದರು. ಮೊದಲಿಗೆ ನೇತಾಜಿ ಸುಭಾಷ್ ಚಂದ್ರ ಭೊಸ್ ಅವರ ಪೋಟೋ ಗೆ ಪೂಜೆ ಸಲ್ಲಿಸಿ ನಂತರ ವಿದ್ಯಾರ್ಥಿ ಉಷಾ ಪ್ರಾಥನೆ ಗೀತೆ ಮೂಲಕ ಚಲನೆ ಮಾಡಲಾಯಿತು. ಕಾಶಿನಾಥ ಅವರು ನಿರೂಪಿಸಿದರು. ವೀರಯ್ಯ ಸ್ವಾಮಿ ವಂದಿಸಿದ್ದರು.
ಈ ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ರೂಪಕಲಾ ನಾಲವಾರ್, ಗೀತಾ, ಪರಮೇಶ್ವರ, ಗುರುನಾಥ ವಾಲಿಕರ್, ಪ್ರೋ ಸುನೀತಾ, ಕಾಲೇಜಿನ ವಿದ್ಯಾರ್ಥಿಗಳು .ಹಾಗೂ ಉಪನ್ಯಾಸಕರು, ಇತರರು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಯಾಗಿ ನಡೆಸಿಕೊಟ್ಟರು.
ವಾಡಿ (ಕಲಬುರಗಿ): ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಅವರ ವೃತ್ತದಲ್ಲಿರುವ ಬಾಬಾಸಾಹೇಬರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಸಂವಿಧಾನ ಪೂರ್ವ ಪೀಠಿಕೆ ಓದುವ ಮೂಲಕ…
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…