ರಾಷ್ಟ್ರ ನಿರ್ಮಾಣದಲ್ಲಿ ಶಿಕ್ಷಕರ ಸೇವೆ ಹಿರಿದು: ಸವಂತರಾಯ ಜಿಡ್ಡೆ

0
15

ಕಲಬುರಗಿ : ಮಕ್ಕಳ ಭವಿಷ್ಯ ರೂಪಿಸುವ ಮೂಲಕ ರಾಷ್ಟ್ರ ನಿರ್ಮಾಣದಲ್ಲಿ ಶಿಕ್ಷಕರ ಸೇವೆ ತುಂಬಾ ಹಿರಿದಾಗಿದೆ ಎಂದು ಭಾಲ್ಕಿ ಕ್ಷೇತ್ರ ಶಿಕ್ಷಾಣಾಧಿಕಾರಿ ಬಸವಂತರಾಯ ಜಿಡ್ಡೆ ಅವರು ಹೇಳಿದರು.

ನಗರದ ಜೇವರ್ಗಿ ಕಾಲೋನಿಯಲ್ಲಿನ ಸಮಗ್ರ ಕರ್ನಾಟಕ ಉಪಾಧ್ಯಾಯರ ಪ್ರಗತಿಪರ ಸಂಘದ (ಸ್ಕೂಪ್ಸ್) ರಾಜ್ಯ ಕಚೇರಿಯಲ್ಲಿ ಆಯೋಜಿಸಿದ ಸಾಧಕರ ಸತ್ಕಾರ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

Contact Your\'s Advertisement; 9902492681

ವಿಜ್ಞಾನ ಮತ್ತು ತಂತ್ರಜ್ಞಾನ ವ್ಯವಸ್ಥೆಯ ಮಧ್ಯೆಯೂ ಹೊಸ ಸಂಶೋಧನೆಗಳ ಮೂಲಕ ಅಧ್ಯಯನ ಕೈಗೊಂಡು ರಾಷ್ಟ್ರ ಕಟ್ಟುವ ಕೆಲಸದಲ್ಲಿ ತೊಡಗಿಸಿ ಕೊಳ್ಳಬೇಕಾಗಿದೆ. ಇಂದಿನ ಸಂಕೀರ್ಣ ಜೀವನದಲ್ಲಿ ಬದುಕು ರೂಪಿಸುವ ಜವಾಬ್ದಾರಿ ಶಿಕ್ಷಕರ ಮೇಲಿದೆ. ಅದನ್ನು ಸಮರ್ಥವಾಗಿ ನಿಭಾಯಿಸಬೇಕಾಗಿದೆ ಎಂದು ಅಭಿಪ್ರಾಯ ಪಟ್ಟರು.

ಗುವಿಕ ಸೂಕ್ಷ್ಮ ಜೀವಶಾಸ್ತ್ರ ವಿಭಾಗದ ಪ್ರಾಧ್ಯಾಪಕಿ ವಂದನಾ ರಾಠೋಡ ಅವರು, ದೇಶದಲ್ಲಿ ಜಾರಿಗೊಳಿಸಿದ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನದಲ್ಲಿ ಶಿಕ್ಷಕರ ಪಾತ್ರ ಮಹತ್ವದಾಗಿದೆ. ದೇಶದ ಸಂಸ್ಕೃತಿ ಮತ್ತು ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ. ಈ ಕುರಿತು ತರಬೇತಿ ಕಾರ್ಯಾಗಾರಗಳು ಕೈಗೊಳ್ಳಬೇಕಾಗಿದೆ ಎಂದರು.

ಸಮಗ್ರ ಕರ್ನಾಟಕ ಉಪಾಧ್ಯಾಯರ ಪ್ರಗತಿಪರ ಸಂಘದ ರಾಜ್ಯಾಧ್ಯಕ್ಷ ಗುರುಪಾದ ಕೋಗನೂರ ಅಧ್ಯಕ್ಷತೆ ವಹಿಸಿ, ಬರುವ ಫೆಬ್ರುವರಿ ತಿಂಗಳಲ್ಲಿ ರಾಜ್ಯ ಮಟ್ಟದ ಕಾರ್ಯಕ್ರಮ ಆಯೋಜಿಸಿ ಕ್ಯಾಲೆಂಡರ್ ಬಿಡುಗಡೆ, ಪದಗ್ರಹಣ ಕಾರ್ಯಕ್ರಮ ಆಯೋಜಿಸಲಾಗುತ್ತದೆ. ಸ್ಕೂಪ್ಸ್ ವತಿಯಿಂದ ಸಾಹಿತ್ಯ ಕಲೆ, ಸಾಂಸ್ಕೃತಿಕ ಚಟುವಟಿಕೆಗಳು ನಿರಂತರವಾಗಿ ಏರ್ಪಡಿಸಲಾಗುತ್ತದೆ ಎಂದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಸಾಹಿತಿ ಧರ್ಮಣ್ಣ ಎಚ್ ಧನ್ನಿ ಅವರು, ಶಿಕ್ಷಕರು ಕೂಡ ಸಮಾಜಮುಖಿ ಕಾರ್ಯ ಚಟುವಟಿಕೆಗಳಲ್ಲಿ ತೊಡಗಿಸಿ ಕೊಳ್ಳಬೇಕು. ಜೊತೆಗೆ ಸಮಾಜದಲ್ಲಿ ಪರಿವರ್ತನೆ ತರಲು ಶ್ರಮಿಸಬೇಕು ಎಂದು ಹೇಳಿದರು.

ನಿವೃತ್ತ ಶಿಕ್ಷಕ ಬಾಬುರಾವ ಕುಲಕರ್ಣಿ, ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ಜಿಲ್ಲಾಧ್ಯಕ್ಷೆ ಸೇವಂತಾ ಚವ್ಹಾಣ, ಸಮಗ್ರ ಕರ್ನಾಟಕ ಉಪಾಧ್ಯಾಯರ ಪ್ರಗತಿಪರ ಸಂಘದ ಖಜಾಂಚಿ ಸಾವಿತ್ರಿ ಪಾಟೀಲ, ಸ್ಕೂಪ್ಸ್ ಜಿಲ್ಲಾ ಸಂಘಟನಾ ಕಾರ್ಯದರ್ಶಿಗಳಾದ ನಾಗೇಂದ್ರಪ್ಪ ಮುಚ್ಚಟ್ಟಿ, ಲಲಿತಾ ದೇಸಾಯಿ, ರಾಜ್ಯ ತಂತ್ರಜ್ಞಾನ ಮುಖ್ಯಸ್ಥ ಭೀಮಾಶಂಕರ ಬಿರಾಳ, ಝಾಕೀರ ಹುಸೇನ ಕುಪನೂರ, ವೆಂಕಟರೆಡ್ಡಿ ಕರೆಡ್ಡಿ ಹಾಗೂ ಇತರರು ಉಪಸ್ಥಿತರಿದ್ದರು. ನಂತರ ಸಾಧಕರನ್ನು ಸತ್ಕರಿಸಲಾಯಿತು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here