ಕಲಬುರಗಿ: ಕೋವಿಡ್ ೩ ನೇ ಅಲೆಯ ಸಂದರ್ಭದಲ್ಲಿ ಜೀವ ರಕ್ಷಿಸಿ – ಜೀವನ ಉಳಿಸಿ – ಜೀವಿಸಲು ಬಿಡಿ ಎಂಬ ಅಭಿಯಾನದ ಭಾಗವಾಗಿ ರಾಜ್ಯವ್ಯಾಪಿ ಇಂದು ಮನೆ ಮನೆ ಮುಂದೆ ಪ್ರತಿಭಟನೆಯ ಅಂಗವಾಗಿ ಕಲಬುರಗಿ ಜಿಲ್ಲೆಯ ಅPI (ಒ), SUಅI (ಅ), ಅPI, ಖPI, ಸ್ವರಾಜ್ ಇಂಡಿಯಾ ಪಕ್ಷಗಳ ನಾಯಕರು, ಕಾರ್ಯಕರ್ತರು ಹಾಗೂ ಬೆಂಬಲಿಗರು ಸಾವಿರಾರು ಸಂಖ್ಯೆಯಲ್ಲಿ ತಮ್ಮ ಮನೆ ಮನೆಗಳಲ್ಲಿ ಪ್ರತಿಭಟನೆಯನು ಮಾಡಿ ಸರ್ಕಾರವನ್ನು ಒತ್ತಾಯಿಸಿದರು.
ರಾಜ್ಯದ ವಿವಿಧ ವರ್ಗಗಳ ಜನತೆ ಎದುರಿಸುತ್ತಿರುವ ಸಮಸ್ಯೆಗಳನ್ನು ಸಮಗ್ರವಾಗಿ ಪರಿಹರಿಸಬೇಕೆಂದು ಒತ್ತಾಯಿಸಿ ರಾಜ್ಯದ ಏಳು ಎಡ ಹಾಗೂ ಪ್ರಜಾಸತ್ತಾತ್ಮಕ ಪಕ್ಷಗಳು ಇಂದು ರಾಜ್ಯವ್ಯಾಪಿ ಮನೆ ಮನೆ ಮುಂದೆ ಪ್ರತಿಭಟನೆಗೆ ಕರೆ ನೀಡಿದ್ದ ಆಧಾರದಲ್ಲಿ ಇಂದು ಕಲಬುರಗಿ ಜಿಲ್ಲೆಯಾದ್ಯಂತ ಸಾವಿರಾರು ಜನರು ತಮ್ಮ ಮನೆ ಮನೆಗಳಲ್ಲಿ ಪ್ರತಿಭಟನೆಯನ್ನು ನಡೆಸಿ ಈ ಕೆಳಕಂಡ ಬೇಡಿಕೆಗಳಿಗಾಗಿ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
ಕೋವಿಡ್ ಸೋಂಕಿನ ೩ನೇ ಅಲೆ ಇಡೀ ದೇಶವನ್ನೇ ವ್ಯಾಪಿಸಿದೆ. ನಮ್ಮ ರಾಜ್ಯದಲ್ಲೂ ದೊಡ್ಡ ಸಂಖ್ಯೆಯಲ್ಲಿ ಸೋಂಕಿತರಾಗುತ್ತಿದ್ದಾರೆ. ಮೊದಲ ಎರಡು ಅಲೆಗಳಲ್ಲಿ ಸಾವೀಗೀಡಾದ, ಆರ್ಥಿಕವಾಗಿ ಸಂಕಷ್ಟಕ್ಕೆ ಒಳಗಾದ, ಉದ್ಯೋಗ, ಆದಾಯ ಮೂಲ ಕಳೆದುಕೊಂಡ ಜನರ ಬದುಕು ಇನ್ನೂ ಸಹಜ ಸ್ಥಿತಿಗೆ ಮರಳಿಲ್ಲ. ಈಗ ಮತ್ತೆ ಲಾಕ್‌ಡೌನ್, ಕರ್ಫ್ಯೂಗಳ ಮೂಲಕ ರೋಗ ನಿಯಂತ್ರಣಕ್ಕೆ ಸರ್ಕಾರ ಮುಂದಾಗಿದೆ.
ಇಂತಹ ಪರಿಸ್ಥಿತಿಯಲ್ಲಿ ಕಲಬುರಗಿ ಜಿಲ್ಲೆಯಾದ್ಯಂತವು ಪರಿಸ್ಥಿತಿಯು ದಿನದಿಂದ ದಿನಕ್ಕೆ ಬಿಗಡಾಯಿಸುತ್ತಿದ್ದು ಸೋಂಕಿತರ ಸಂಖ್ಯೆಯೂ ಹೆಚ್ಚಾಗುತ್ತಿದೆ. ಕಳೆದ ಎರಡು ಹಂತದ ಅಲೆಗಳಲ್ಲೂ ಜಿಲ್ಲೆಯ ಜನತೆ ಗಂಭೀರವಾಗಿ ತೊಂದರೆಗೀಡಾಗಿದ್ದರು. ಆರ್ಥಿಕವಾಗಿಯೂ ಕಂಗಾಲಾಗಿ ಸಾವಿರಾರು ಜನ ಕೆಲಸಗಳನ್ನು ಕಳೆದುಕೊಂಡು ವಲಸೆ ಮಾರ್ಗವನ್ನು ತುಳಿದಿದ್ದರು. ಈಗಲೂ ಆ ಎಲ್ಲಾ ಕುಟುಂಬಗಳ ಸ್ಥಿತಿಯು ಸುಧಾರಿಸಿಲ್ಲ.
ಆದ್ದರಿಂದ, ಸರ್ಕಾರವು ಇಂತಹ ಕಠಿಣ ಪರಿಸ್ಥಿತಿಯಲ್ಲಿ ಸಮರ್ಪಕವಾದ ಮತ್ತು ಸೂಕ್ತವಾದ ಕ್ರಮಗಳನ್ನು ಕೈಗೊಂಡು ಯುದ್ಧೋಪಾಧಿಯಲ್ಲಿ ಕೆಲಸಗಳನ್ನು ಆರಂಭಿಸಲು ಒತ್ತಾಯಿಸಿದರು.
ಅದರಂತೆ ಕಲಬುರಗಿಯಲ್ಲೂ ಇಂದು ಈ ಒಕ್ಕೂಟದ ಕಾರ್ಯಕರ್ತರು, ಬೆಂಬಲಿಗರು ಮತ್ತು ಜನಸಾಮಾನ್ಯರು ತಮ್ಮ ಮನೆಗಳ ಮುಂದೆ ಹಕ್ಕೋತ್ತಾಯಗಳನ್ನು ಹಿಡಿದು ಪ್ರತಿಭಟನೆ ನಡೆಸಿ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರ ಮಾಡಲಾಯಿತು. ಪಕ್ಷಗಳ ಮುಖಂಡರು ತಮ್ಮ ಕಛೇರಿಗಳ ಮುಂದೆ ಪ್ರತಿಭಟನೆ ನಡೆಸಲಾಯಿತು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…