ರಾಜ್ಯ

ಎಸ್ಎಲ್ಎಸ್ಎಸ್ ಉತ್ಪನ್ನಗಳಿಗೆ ಅನಿಲ್ ಕುಂಬ್ಳೆ ಬ್ರ್ಯಾಂಡ್ ಅಂಬಾಸಿಡರ್

ಬೆಂಗಳೂರು: ಶ್ರೀ ಲಕ್ಷ್ಮಿ ಸ್ಟೀಲ್ ಸಪ್ಲೈಯರ್ಸ್ (ಎಸ್ಎಲ್ಎಸ್ಎಸ್) ಕಳೆದ 40 ವರ್ಷಗಳಿಂದ ದೇಶಾದ್ಯಂತ ಡ್ಯುರಾಸ್ಟ್ರಾಂಗ್ ಬ್ರ್ಯಾಂಡ್ ಅಡಿ ಭರವಸೆಯ ಗುಣಮಟ್ಟದ ಉತ್ಪನ್ನಗಳೊಂದಿಗೆ ಗ್ರಾಹಕರಿಗೆ ಸೇವೆ ಸಲ್ಲಿಸುತ್ತಾ ಬಂದಿದೆ. ಪ್ರಸ್ತುತ ಸಂಸ್ಥೆಯು 1,500 ವಿತರಕರ ಮೂಲಕ ಕಾರ್ಯನಿರ್ವಹಣೆ ಮಾಡುತ್ತಿದ್ದು, ಒಳಾಂಗಣ ಮತ್ತು ಶ್ರೇಣಿ 2 & 3 ನಗರಗಳಲ್ಲಿ ಹೆಚ್ಚು ಗುಣಮಟ್ಟದ ಜಾಗೃತ *ಗ್ರಾಹಕಾರನ್ನು* ತಲುಪುವ ನಿಟ್ಟಿನಲ್ಲಿ ಜಾಲವನ್ನು ಮತ್ತಷ್ಟು ವಿಸ್ತರಣೆ ಮಾಡುವ ಯೋಜನೆಗಳನ್ನು ಹೊಂದಿದೆ.

ತನ್ನ ಉತ್ಪನ್ನಗಳಿಗೆ ಗ್ರಾಹಕರಿಂದ ಅತ್ಯುತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಎಸ್ಎಲ್ಎಸ್ಎಸ್ ತನ್ನ ಮಾರುಕಟ್ಟೆಯ ಜಾಲವನ್ನು ಇನ್ನಷ್ಟು ವಿಸ್ತರಿಸಿಕೊಳ್ಳುವತ್ತ ಗಮನ ಹರಿಸಿದೆ. ತನ್ನ ಸದೃಢವಾದ ಬ್ರ್ಯಾಂಡ್ ಮೌಲ್ಯಗಳನ್ನು ಪರಿಣಾಮಕಾರಿಯಾಗಿ ಗ್ರಾಹಕರಿಗೆ ತಲುಪಿಸುವ ನಿಟ್ಟಿನಲ್ಲಿ ಎಸ್ಎಲ್ಎಸ್ಎಸ್ ತನ್ನ ಡ್ಯುರಾಸ್ಟ್ರಾಂಗ್ ಶ್ರೇಣಿಯ ಉತ್ಪನ್ನಗಳಿಗೆ ತನ್ನ ಬ್ರ್ಯಾಂಡ್ ಅಂಬಾಸಿಡರ್ ಆಗಿ ಅನಿಲ್ ಕುಂಬ್ಳೆ ಅವರನ್ನು ನೇಮಕ ಮಾಡಿಕೊಳ್ಳುವ ಒಪ್ಪಂದಕ್ಕೆ ಸಹಿ ಮಾಡಿದೆ.

ಈ ಬಗ್ಗೆ ಮಾತನಾಡಿದ ಸಂಸ್ಥೆಯ ಅಧ್ಯಕ್ಷ ವಿನೋದ್ ಸಿಂಘಾಲ್ ಅವರು, “ಒಂದು ಬ್ರ್ಯಾಂಡ್ ಆಗಿ ನಾವು ಗ್ರಾಹಕರಿಗೆ ಶ್ರೇಷ್ಠವಾದ ಉತ್ಪನ್ನಗಳನ್ನು ನೀಡಲು ನಿರಂತರವಾಗಿ ಶ್ರಮಿಸುತ್ತಿದ್ದೇವೆ. ವಿಶೇಷವಾಗಿ ನಮ್ಮ ಗ್ರಾಹಕರಿಗೆ ನಮ್ಮ ಬದ್ಧತೆಗೆ ಸಂಬಂಧಿಸಿದಂತೆ ಮತ್ತು ಇದು ಅನಿಲ್ ಕುಂಬ್ಳೆ ಅವರು ತಮ್ಮ ವೃತ್ತಿ ಜೀವನದುದ್ದಕ್ಕೂ ಹಾಗೂ ವೈಯಕ್ತಿಕ ಜೀವನದಲ್ಲಿ ಪ್ರದರ್ಶಿಸಿದ ಸಾಧನೆಯ ಪ್ರತೀಕವಾಗಿದೆ. ಈ ನಮ್ಮ ಬದ್ಧತೆಯ ಸಂದೇಶವನ್ನು ಗ್ರಾಹಕರಿಗೆ ತಲುಪಿಸುವ ನಿಟ್ಟಿನಲ್ಲಿ ಅವರು ನಮ್ಮ ಬ್ರ್ಯಾಂಡ್ ಅಂಬಾಸಿಡರ್ ಆಗಿರುವುದು ನಮಗೆ ಹೆಮ್ಮೆ ತಂದಿದೆ’’ ಎಂದರು.

ಅನಿಲ್ ಕುಂಬ್ಳೆ ಅವರು ಮಾತನಾಡಿ, “ಡ್ಯುರಾಸ್ಟ್ರಾಂಗ್ ಜೊತೆಗೆ ಸಹಯೋಗ ಹೊಂದುತ್ತಿರುವುದು ಮತ್ತು ಮೇಕ್ ಇನ್ ಇಂಡಿಯಾ ಪರಿಕಲ್ಪನೆಯನ್ನು ಉತ್ತೇಜಿಸಲು ನನಗೆ ಸಂತಸ ತಂದಿದೆ. ಡ್ಯುರಾಸ್ಟ್ರಾಂಗ್ ಕಳೆದ ನಲವತ್ತು ವರ್ಷಗಳಿಂದ ಉತ್ತಮ ಗುಣಮಟ್ಟದ ಉತ್ಪನ್ನವನ್ನು ನೀಡುವ ಕಂಪನಿಯಾಗಿದೆ. ಈ ಮೂಲಕ ಗ್ರಾಹಕರ ಅಭಿರುಚಿಗೆ ತಕ್ಕಂತೆ ಗುಣಮಟ್ಟದ ಉತ್ಪನ್ನಗಳನ್ನು ನೀಡುತ್ತಿರುವ ಎಸ್ಎಲ್ಎಸ್ಎಸ್ ಗೆ ಅಭಿನಂದನೆ ಸಲ್ಲಿಸುತ್ತೇನೆ’’ ಎಂದು ತಿಳಿಸಿದರು.

emedialine

Recent Posts

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

13 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

13 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

15 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

15 hours ago

ವಾಡಿ: ಶ್ಯಾಮ್‌ ಪ್ರಸಾದ್ ಮುಖರ್ಜಿ ಜಯಂತಿ, ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…

15 hours ago

ನಾಳೆ ವಾಡಿಯಲ್ಲಿ ಕವಿಗೋಷ್ಠಿ

ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…

16 hours ago