ವಾಡಿ: ಕ್ರಾಂತಿಕಾರಿ ಸಂಘಟನೆಗಳಾದ ಎಐಡಿಎಸ್‌ಒ, ಎಐಡಿವೈಒ ಹಾಗೂ ಆರ್‌ಕೆಎಸ್ ಸಮಿತಿಗಳ ವತಿಯಿಂದ ಜ.೨೭ ರಂದು ಹಾಗೂ ೨೮ ರಂದು ಎರಡು ದಿನಗಳ ಕಾಲ ಪಟ್ಟಣದಲ್ಲಿ ಸ್ವಾತಂತ್ರ್ಯ ಸಂಗ್ರಾಮದ ಮಹಾನ್ ಕ್ರಾಂತಿಕಾರಿ ನೇತಾಜಿ ಸುಭಾಷಚಂದ್ರ ಬೋಸ್ ಅವರ ೧೨೫ನೇ ಜಯಂತಿ ಆಚರಿಸಲಾಗುತ್ತಿದೆ.
ಜ.೨೭ ರಂದು ಬೆಳಗ್ಗೆ ೧೧:೦೦ ಗಂಟೆಗೆ ನಗರದ ಡಾ.ಬಿ.ಆರ್.ಅಂಬೇಡ್ಕರ್ ಸ್ಮಾರಕ ಭವನದಲ್ಲಿ ಸಾರ್ವಜನಿಕ ಸಭೆ ಏರ್ಪಡಿಸಲಾಗಿದ್ದು, ಗುಲಬರ್ಗಾ ವಿವಿ ಜೈವಿಕ ತಂತ್ರಜ್ಞಾನ ವಿಭಾಗದ ಮುಖ್ಯಸ್ಥರಾದ ಡಾ.ರಮೇಶ ಲಂಡನಕರ ಉಪನ್ಯಾಸ ನೀಡುವರು. ಶಿಕ್ಷಣ ಪ್ರೇಮಿಗಳಾದ ಪ್ರಕಾಶ ಚಂದನಕೇರಿ, ಎಐಯುಟಿಯುಸಿ ಜಿಲ್ಲಾ ಕಾರ್ಯದರ್ಶಿ ಎಸ್.ಎಂ.ಶರ್ಮಾ, ಆರ್‌ಕೆಸ್ ಜಿಲ್ಲಾ ಉಪಾಧ್ಯಕ್ಷ ಗುಂಡಣ್ಣ ಎಂ.ಕೆ, ಎಐಡಿಎಸ್‌ಒ ಕಾರ್ಯದರ್ಶಿ ಗೋವಿಂದ ಯಳವಾರ ಅತಿಥಿಗಳಾಗಿ ಪಾಲ್ಗೊಳ್ಳುವರು.
ಪುಟ್ಟಕ್ಕನ ಹೈವೇ ಸಿನೆಮಾ ಪ್ರದರ್ಶನ: ನೇತಾಜಿ ಸುಭಾಷಚಂದ್ರ ಬೋಸ್ ಅವರ ಜನ್ಮ ಸಂಭ್ರಮದ ನೆನಪಿಗಾಗಿ ಜ.೨೮ ರಂದು ಸಂಜೆ ೫:೦೦ ಗಂಟೆಗೆ ಪಟ್ಟಣದ ಅಂಬೇಡ್ಕರ್ ಸ್ಮಾರಕ ಭವನದಲ್ಲಿ ಬಿ.ಸುರೇಶ ನಿದೇಶನದ ’ಪುಟ್ಟಕ್ಕನ ಹೈವೇ’ ಕನ್ನಡ ಸಿನೆಮಾ ಪ್ರದರ್ಶನ ಹಾಗೂ ಸಂವಾದ ಕಾರ್ಯಕ್ರಮ ಏರ್ಪಡಿಸಲಾಗಿದೆ. ರಂಗ ಸಂಘಟಕ ವಿ.ಜಿ.ದೇಸಾಯಿ ಮುಖ್ಯ ಅತಿಥಿಗಳಾಗಿ ಸಂವಾದ ನಡೆಸಿಕೊಡುವರು. ಎಐಡಿಎಸ್‌ಒ ಜಿಲ್ಲಾ ಉಪಾಧ್ಯಕ್ಷ ಅರುಣಕುಮಾರ ಹಿರೆಬಾನರ ಅಧ್ಯಕ್ಷತೆ ವಹಿಸುವರು ಎಂದು ಎಐಡಿವೈಒ ಮುಖಂಡ ಮಲ್ಲಿನಾಥ ಹುಂಡೇಕಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…