ಮತದಾನ ಎಂಬುದು ಸ್ವಾಭಿಮಾನದ ಸಂಕೇತವಾಗಿದೆ-ನ್ಯಾ :ಚಿದಾನಂದ ಬಡಿಗೇರ

0
10

ಸುರಪುರ: ಮತದಾನ ಎಂಬುದು ನಮ್ಮ ಸ್ವಾಭಿಮಾನದ ಸಂಕೇತವಾಗಿದೆ ಹೀಗಾಗಿ ಇದನ್ನು ಕಳೆದುಕೊಳ್ಳಬಾರದು ಒಂದು ವೇಳೆ ಮನುಷ್ಯ ತನ್ನ ಸ್ವಾಭಿಮಾನವನ್ನು ಮಾರಿಕೊಂಡಲ್ಲಿ ಸಮಾಜದಲ್ಲಿ ಗೌರವವನ್ನು ಕಳೆದುಕೊಳ್ಳುತ್ತಾನೆ ಎಂದು ಸ್ಥಳೀಯ ಜೆಎಂಎಫ್‌ಸಿ ನ್ಯಾಯಾಲಯದ ದಿವಾಣಿ ನ್ಯಾಯಾಧೀಶರಾದ ಚಿದಾನಂದ ಬಡಿಗೇರ ಹೇಳಿದರು.

ನಗರದ ಶ್ರೀ ಪ್ರಭು ಮಹಾವಿದ್ಯಾಲಯದಲ್ಲಿ ಮಂಗಳವಾರದಂದು ಚುನಾವಣಾ ಆಯೋಗ ತಾಲೂಕು ಆಡಳಿತ ವತಿಯಿಂದ ಆಯೋಜಿಸಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿ, ಸಂವಿಧಾನ ನಮ್ಮ ದೇಶದ ನಾಗರಿಕರಿಗೆ ಚುನಾವಣೆಗಳಲ್ಲಿ ಮತ ಚಲಾಯಿಸುವ ಅಧಿಕಾರ ನೀಡಿದ್ದು,ನಮಗೆ ಸಂವಿಧಾನ ನೀಡಿರುವ ಹಕ್ಕುಗಳು ಎಷ್ಟು ಮುಖ್ಯವೋ ಸಂವಿಧಾನದಲ್ಲಿ ಹೇಳಿರುವ ನಮ್ಮ ಕರ್ತವ್ಯಗಳನ್ನು ನಿರ್ವಹಿಸುವುದು ಕೂಡಾ ಅಷ್ಟೇ ಮುಖ್ಯ. ಹಕ್ಕು ಮತ್ತು ಕರ್ತವ್ಯ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ ಎಂದು ಅಭಿಪ್ರಾಯಪಟ್ಟರು.೧೮ವರ್ಷ ಮೇಲ್ಪಟ್ಟ ಎಲ್ಲರೂ ಕಡ್ಡಾಯವಾಗಿ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರುಗಳನ್ನು ನೊಂದಾಯಿಸಿಕೊಳ್ಳಬೇಕು ಮತ್ತು ಚುನಾವಣೆಗಳಲ್ಲಿ ಕಡ್ಡಾಯವಾಗಿ ಮತ ಚಲಾಯಿಸಿ ಅರ್ಹ ಅಭ್ಯರ್ಥಿಗಳಿಗೆ ಮತ ಚಲಾವಣೆ ಮಾಡುವಂತೆ ಅವರು ಈ ಸಂದರ್ಭದಲ್ಲಿ ಮನವಿ ಮಾಡಿದರು.

Contact Your\'s Advertisement; 9902492681

ಮುಖ್ಯ ಅತಿಥಿಗಳಾದ ತಹಶೀಲ್ದಾರ ಸುಬ್ಬಣ್ಣ ಜಮಖಂಡಿ ಮಾತನಾಡಿ ೧೮ ವರ್ಷ ಪೂರ್ಣಗೊಂಡ ಯುವಕ ಯುವತಿಯರು ಕಡ್ಡಾಯವಾಗಿ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ಸೇರ್ಪಡೆಗೊಳಿಸಬೇಕು ಮತದಾರರ ಪಟ್ಟಿಯಲ್ಲಿ ಸೇರಿಸಲು ಆಯಾ ವಾರ್ಡುಗಳಲ್ಲಿರುವ ಬಿಎಲ್‌ಓಗಳಾಗಿರುವ ಶಿಕ್ಷಕರು ಹಾಗೂ ಅಂಗನವಾಡಿ ಕಾರ್ಯಕರ್ತೆಯರ ಬಳಿ ತಮ್ಮ ಹೆಸರನ್ನು ನೊಂದಾಯಿಸಲು ಫಾರಂ-೬ ಭರ್ತಿ ಮಾಡುವ ಮೂಲಕ ನೊಂದಾಯಿಸಿಕೊಳ್ಳಬಹುದಾಗಿದ್ದು ನೇರವಾಗಿ ತಹಶೀಲ್ ಕಚೇರಿಗೆ ತಮ್ಮ ಅರ್ಜಿಯನ್ನು ಸಲ್ಲಿಸಬಹುದು ಅಥವಾ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು ಎಂದು ತಿಳಿಸಿದರು, ಅಲ್ಲದೆ ಸ್ಥಳಾಂತರಗೊಂಡ, ಮದುವೆ ಮಾಡಿಕೊಂಡು ಹೋದವರು, ಮರಣ ಹೊಂದಿದವರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕಲು ಫಾರಂ-೭ ಅರ್ಜಿ ಸಲ್ಲಿಸಬೇಕು ಎಂದು ಹೇಳಿದರು.

ಪ್ರಭು ಕಾಲೇಜಿನ ಉಪ ಪ್ರಾಚಾರ್ಯ ವೇಣುಗೋಪಾಲ ಜೇವರ್ಗಿ ಹಾಗೂ ಅಧ್ಯಕ್ಷತೆ ವಹಿಸಿದ್ದ ಪದವಿ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ಎಸ್.ಹೆಚ್.ಹೊಸಮನಿ ಅಧ್ಯಕ್ಷತೆ ವಹಿಸಿ ರಾಷ್ಟ್ರೀಯ ಮತದಾರರ ದಿನಾಚರಣೆ ಮಹತ್ವ ಕುರಿತು ಮಾತನಾಡಿದರು.ಹುಣಸಗಿ ತಹಸೀಲ್ದಾರ್ ಅಶೋಕ ಸುರಪುರಕರ್, ಕ್ಷೇತ್ರ ಶಿಕ್ಷಣಾಧಿಕಾರಿ ಮಹಾದೇವರೆಡ್ಡಿ, ಸರಕಾರಿ ಅಭಿಯೋಜಕ ರಾಘವೇಂದ್ರ ಜಾಗೀರದಾರ್, ಪದವಿ ಪೂರ್ವ ವಿಭಾಗದ ಪ್ರಾಚಾರ್ಯ ಎಂ.ಡಿ.ವಾರಿಸ್ ಕುಂಡಾಲೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ತಾ ಪಂ ಕಾರ್ಯ ನಿರ್ವಾಹಕ ಅಧಿಕಾರಿ ಅಮರೇಶರವರು ಉಪಸ್ಥಿತರಿದ್ದ ಎಲ್ಲರಿಗೆ ಮತದಾರರ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು, ಇದೇ ಸಂದರ್ಭದಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸಿದ ಮತಗಟ್ಟೆ ಹಂತದ ಅಧಿಕಾರಿಗಳಾದ (ಬಿಎಲ್‌ಓ) ಶಿಕ್ಷಕ ಶಕೀಲ್ ಅಹ್ಮದ ಹಾಗೂ ಅಂಗನವಾಡಿ ಕಾರ್ಯಕರ್ತೆ ಮಹಾಲಕ್ಷ್ಮೀ ಅವರನ್ನು ಸನ್ಮಾನಿಸಲಾಯಿತು ಮತ್ತು ೧೮ವರ್ಷ ಪೂರ್ಣಗೊಂಡ ಹೊಸ ಯುವ ಮತದಾರರಿಗೆ ಸಾಂಕೇತಿಕವಾಗಿ ಮತದಾರರ ಗುರುತಿನ ಚೀಟಿಗಳನ್ನು ವಿತರಿಸಲಾಯಿತು ಹಾಗೂ ದಿನಾಚರಣೆ ಪ್ರಯುಕ್ತ ವಿವಿಧ ಏರ್ಪಡಿಸಿದ್ದ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದ ವಿವಿಧ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಬಿಆರ್‌ಪಿ ಹಣಮಂತ ಪೂಜಾರಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಶಿರಸ್ತೇದಾರ ಗುರುಬಸಪ್ಪ ಪಾಟೀಲ ಹಾಗೂ ಕಂದಾಯ ಇಲಾಖೆಯ ಸಿಬ್ಬಂದಿ ಮತ್ತು ಕಾಲೇಜಿನ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here