ಸುರಪುರ: ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಇತ್ತಿಚಿಗೆ ನಡೆದ ೭ನೇ ಘಟಿಕೊತ್ಸವದಲ್ಲಿ ಸಾಮಾಜಿಕ, ಧಾರ್ಮಿಕ ಸೇವೆಗಾಗಿ ಗೌರವ ಡಾಕ್ಟರೆಟ್ ಪುರಸ್ಕಾರಕ್ಕೆ ಭಾಜನರಾದ ಸಿಂಧಗಿ ಸಾರಂಗಮಠದ ಪೂಜ್ಯ ಶ್ರೀ. ಪ್ರಭು ಸಾರಂಗದೇವ ಶಿವಾಚಾರ್ಯರನ್ನು ಸಗರನಾಡು ಸೇವಾ ಪ್ರತಿಷ್ಠಾನ ವತಿಯಿಂದ ಶ್ರೀಮಠದಲ್ಲಿ ಶುಕ್ರವಾರ ಸನ್ಮಾನಿಸಿ ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ಮಾನತಾನಾಡಿದ ಪ್ರತಿಷ್ಠಾನ ಅಧ್ಯಕ್ಷ ಪ್ರಕಾಶ ಅಂಗಡಿ ಕನ್ನೆಳ್ಳಿ ಮಾತನಾಡಿ, ಸಿಂಧಗಿಯ ಸಾರಂಗ ಮಠದ ಪೂಜ್ಯರು ಕಳೆದ ಹಲವು ದಶಕಗಳಿಂದ ಸಮಾಜೊ ಧಾರ್ಮಿಕ ಕ್ಷೇತ್ರದಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದ್ದು, ಸಾಹಿತ್ಯ ಮತ್ತು ಸಾಂಸ್ಕೃತಿಕ ಆಸಕ್ತಿಯುಳ್ಳವರಾಗಿದ್ದಾರೆ ಅನೇಕ ಪುಸ್ತಕಗಳನ್ನು ಶ್ರೀ ಮಠದ ಮೂಲಕ ಪ್ರಕಟಿಸುವುದರ ಜೊತೆಗೆ ಅನೇಕ ಸಾಹಿತಿಕ ಮತ್ತು ಸಾಂಸ್ಕೃತಿಕ ಸಮ್ಮೇಳನ ಹಾಗೂ ಸಮಾವೇಶಗಳನ್ನು ಸಂಘಟಿಸಿದ್ದಾರೆ. ಶ್ರೀಗಳ ಸೇವೆ ಗುರುತಿಸಿ ಬೆಳಗಾವಿಯ ವಿಶ್ವವಿದ್ಯಾಲಯ ಗುರಿತಿಸಿರುವುದು ಅಭಿನಂದನಿಯ ಎಂದು ಹೇಳಿದರು. ಇದೆ ಸಂದರ್ಭದಲ್ಲಿ ಬರುವ ಫೆಬ್ರವರಿಯಲ್ಲಿ ಆಯೊಜಿಸುತ್ತಿರುವ ಸಗರನಾಡು ಸೇವಾ ಪ್ರತಿಷ್ಠಾನದ ದಶಮಾನೊತ್ಸವದಲ್ಲಿ ಪಾಲ್ಗೊಳ್ಳುವಂತೆ ಆವ್ಹಾನ ನಿಡಲಾಯಿತು.
ಈ ಸಂದರ್ಭದಲ್ಲಿ ಜಾನಪದ ಸಾಹಿತಿ ಬಿ.ಎನ್.ಪಾಟೀಲ್ ಇಬ್ರಾಹಿಂಪುರ, ಕವಿ ಈರಣ್ಣಗೌಡ ಹಂದಿಗನುರು, ಗಾಯಕ ಮಹಾಂತೇಶ ನಾಗೊಜಿ,ಬಸವರಾಜ ಚೆನ್ನಪಟ್ಟಣ ಸೇರಿದಂತೆ ಅನೇಕರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…