ಬಿಸಿ ಬಿಸಿ ಸುದ್ದಿ

ಪಂಚಮಸಾಲಿ ಸಮಾಜದ 3ನೇ ಪೀಠ ಸ್ಥಾಪನೆಗೆ ದಿನಾಂಕ ನಿಗದಿ

ಬಾಗಲಕೋಟೆ: ಪಂಚಮಸಾಲಿ ಸಮಾಜದ 3ನೇ ಗುರುಪೀಠ ಸ್ಥಾಪನೆಗೆ ದಿನಾಂಕ ನಿಗದಿಯಾಗಿದೆ.

ಮುಂದಿನ ತಿಂಗಳು ಅಂದರೆ ಫೆಬ್ರುವರಿ 14ರಂದು ಪಂಚಮಸಾಲಿ ಸಮಾಜದ 3ನೇ ಪೀಠ ಸ್ಥಾಪನೆಯಾಗಲಿದೆ. ವಚನಾನಂದಶ್ರೀಗಳ ಸಾನ್ನಿಧ್ಯದಲ್ಲಿ ಅಲಗೂರು ಗ್ರಾಮದಲ್ಲಿ 3ನೇ ಗುರುಪೀಠಾರೋಹಣ ಕಾರ್ಯಕ್ರಮಗಳು ನಡೆಯಲಿವೆ. ಪೀಠಾಧಿಪತಿಗಳಾಗಿ ಬಬಲೇಶ್ವರ ಬೃಹನ್ಮಠದ ಮಹಾದೇವ ಶಿವಾಚಾರ್ಯ ಸ್ವಾಮೀಜಿ ಅವರಿಗೆ ಪಟ್ಟಾಭಿಷೇಕ ನಡೆಯಲಿದೆ. ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಹನಗವಾಡಿ ಬಳಿ ಇರುವ ಪಂಚಮಸಾಲಿ ಗುರುಪೀಠಕ್ಕೆ ಮೂರನೇ ಗುರುಪೀಠದ ಸಂಘಟಕರು ಆಗಮಿಸಿದ್ದಾರೆ.

ಮೂರನೇ ಪೀಠ ಸ್ಥಾಪನೆಗೆ ಸ್ವಾಗತ ಕೋರಿದ ಮಠಾಧೀಶರರು
ಪಂಚಮಸಾಲಿ ಸಮಾಜದ 3ನೇ ಪೀಠ ಸ್ಥಾಪನೆ‌ ವಿಚಾರವಾಗಿ ಹುಬ್ಬಳ್ಳಿಯಲ್ಲಿ ಪಂಚಮಸಾಲಿ ಸಮಾಜದ ಮುಖಂಡರ ಸಭೆ ಈಚೆಗೆ ನಡೆಯಿತು. ಹುಬ್ಬಳ್ಳಿಯ ನೀಲಕಂಠ ಅಸೂಟಿ ನಿವಾಸದಲ್ಲಿ ನಡೆದ ಸಭೆಯಲ್ಲಿ ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದ ಮೂರನೇ ಪೀಠ ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲಿ ಸ್ಥಾಪನೆಯಾಗುವುದಕ್ಕೆ ವಿವಿಧ ಮಠಾಧೀಶರು ಸ್ವಾಗತ ಕೋರಿದರು. ಬಂಡಿವಾಡ ವಿರಕ್ತಮಠದ ರೇವಣಸಿದ್ದೇಶ್ವರ ಮಹಾಸ್ವಾಮಿ, ಮನಗೂಳಿಯ ಹಿರೇಮಠದ ಶ್ರೀ ಸಂಗನಬಸವ ಮಹಾಸ್ವಾಮಿ, ಕುಚನೂರಿನ ಸಿದ್ಧಲಿಂಗ ಮಹಾಸ್ವಾಮಿಗಳು ಈ ಸಭೆಯಲ್ಲಿ ಭಾಗಿಯಾಗಿದ್ದರು.

ಆರೋಪ ಪ್ರತ್ಯಾರೋಪಗಳಿಗೆ ಸಾಕ್ಷಿಯಾದ ಮೂರನೇ ಪೀಠ ಅಖಿಲ ಭಾರತ ಪಂಚಮಸಾಲಿ ಮಠಾಧೀಶರ ಒಕ್ಕೂಟ ಮೂರನೇ ಪೀಠ ಸ್ಥಾಪನೆ ವಿಚಾರವನ್ನು ಬಹಿರಂಗಪಡಿಸುತ್ತಿದ್ದಂತೆ ಪರ ವಿರೋಧ ಹೇಳಿಕೆಗಳು ಕೇಳಿ ಬಂದಿದ್ದವು. ವಿವಿಧ ಮಠಾಧೀಶರು, ಸಚಿವರು, ಶಾಸಕರು, ಇತರೆ ರಾಜಕಾರಣಿಗಳು ಪರ ವಿರೋಧ ಹೇಳಿಕೆಗಳನ್ನು ನೀಡಿದರು. ಇದರ ಮದ್ಯೆ ಅಖಿಲ ಭಾರತ ಪಂಚಮಸಾಲಿ ಮಠಾಧೀಶರ ಒಕ್ಕೂಟ ನಮ್ಮ ಮೂರನೇ ಪೀಠಕ್ಕೂ ರಾಜಕೀಯಕ್ಕೂ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದೆ. ಜೊತೆಗೆ ಮೂರು ಪೀಠ ಮಾತ್ರವಲ್ಲ ಐದು ಪೀಠಗಳಾದರೂ ನಮ್ಮ ಅಭ್ಯಂತರವಿಲ್ಲ ಅಂತ ಹೇಳಿದೆ. ಆದರೆ ಸದ್ಯ ಆರೋಪ ಪ್ರತ್ಯಾರೋಪಗಳು ಮಾತ್ರ ನಿಲ್ಲುವ ಸೂಚನೆಗಳು ಕಾಣುತ್ತಿಲ್ಲ.

ಮೂರನೇ ಪೀಠಾಧಿಪತಿಯಾಗಿ ಡಾ.ಮಹಾದೇಶ ಶಿವಾಚಾರ್ಯ ಸ್ವಾಮೀಜಿ ಪ್ರಸ್ತುತ ಅಸ್ತಿತ್ವದಲ್ಲಿರುವ ಎರಡು ಪೀಠಗಳ ಹೊರತಾಗಿಯೂ ಪಂಚಮಸಾಲಿ ಸಮುದಾಯದ ಮೂರನೇ ಪೀಠ ಮುಂಬರುವ ಫೆಬ್ರವರಿ 14 ಕ್ಕೆ ಅಸ್ತಿತ್ವಕ್ಕೆ ಬರಲಿದೆ. ರಾಜ್ಯದ ಪಂಚಮಸಾಲಿ ಸಮುದಾಯದ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠ ಜಮಖಂಡಿ (ಆಲಗೂರ) ಪೀಠಾಧಿಪತಿಯಾಗಿ ಷ. ಭ್ರ. ಡಾ ಮಹಾದೇಶ ಶಿವಾಚಾರ್ಯ ಸ್ವಾಮೀಜಿ ಗದ್ದುಗೆ ಏರಲಿದ್ದಾರೆ.

ಮೂಲತಃ ವಿಜಯಪುರ ಜಿಲ್ಲೆಯವರಾದ ಡಾ. ಮಹಾದೇಶ ಶಿವಾಚಾರ್ಯ ಸ್ವಾಮೀಜಿ ಸದ್ಯ ವಿಜಯಪುರ ಜಿಲ್ಲೆಯ ಬಬಲೇಶ್ವರ ಪಟ್ಟಣದ ಗುರುಪಾದೇಶ್ವರ ಭ್ರಹನ್ಮಠದ ಪೀಠಾಧಿಪತಿಯಾಗಿದ್ದಾರೆ. ಈ ಮಠದ ಉಸ್ತುವಾರಿ ಜೊತೆಗೆ ಡಾ. ಮಹಾದೇಶ ಶಿವಾಚಾರ್ಯ ಸ್ವಾಮೀಜಿ ಪಂಚಮಸಾಲಿ ಮೂರನೇ ಪೀಠದ ಪೀಠಾಧಿಪತಿಗಳಾಗಿದ್ದಾರೆ.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

6 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

6 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

6 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

23 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago