ಸುರಪುರ: ನಗರಸಭೆಯಿಂದ ೭೩ನೇ ಗಣರಾಜ್ಯೋತ್ಸವ ಆಚರಿಸಲಾಯಿತು.ಕಾರ್ಯಕ್ರಮದ ಅಂಗವಾಗಿ ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ಪ್ರತಿವರ್ಷದಂತೆ ಹಮ್ಮಿಕೊಂಡಿದ್ದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಮೊದಲಿಗೆ ನಗರಸಭೆ ಅಧ್ಯಕ್ಷರಾದ ಸುಜಾತಾ ವೇಣುಗೋಪಾಲ ಜೇವರ್ಗಿಯವರು ಮಹಾತ್ಮ ಗಾಂಧಿ ಪುತ್ಥಳಿಗೆ ಹಾಗು ಡಾ:ಬಾಬಾ ಸಾಹೇಬ್ ಅಂಬೇಡ್ಕರರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಿದರು.
ಉಪಾಧ್ಯಕ್ಷ ಮಹೇಶ ಪಾಟೀಲ್ ಅವರು ಮಾಲಾರ್ಪಣೆ ಮಾಡಿ ವಂದಿಸಿದರು.ನಂತರ ಅಧ್ಯಕ್ಷೆ ಧ್ವಜಾರೋಹಣ ನೆರವೇರಿಸಿದರು.ನಂತರ ನಗರಸಭೆ ಕಾರ್ಯಾಲಯದ ಮುಂದೆ ನಡೆದ ಕಾರ್ಯಕ್ರಮದಲ್ಲಿ ಮಹಾತ್ಮ ಗಾಂಧಿ ಮತ್ತು ಡಾ:ಬಿ.ಆರ್ ಅಂಬೇಡ್ಕರರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ನಂತರ ಧ್ವಜಾರೋಹಣ ನೆರವೇರಿಸಿದರು.
ಈ ಸಂದರ್ಭದಲ್ಲಿ ಭಾಗವಹಿಸಿದ್ದ ಮಾಜಿ ಪುರಸಭೆ ಸದಸ್ಯ ಅಹ್ಮದ್ ಪಠಾಣ್ ಮಾತನಾಡಿ,ಭಾರತಕ್ಕೆ ಡಾ: ಬಾಬಾ ಸಾಹೇಬ್ ಅಂಬೇಡ್ಕರರು ಸಂವಿಧಾನವನ್ನು ಬರೆದುಕೊಟ್ಟ ಸಂವಿಧಾನ ಇಂದು ಜಾರಿಗೊಂಡ ದಿನ ಅಲ್ಲದೆ ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಜಾರಿಗೆ ಬಂದ ದಿನವನ್ನು ಗಣರಾಜ್ಯೋತ್ಸವ ದಿನವನ್ನಾಗಿ ಆಚರಿಸಲಾಗುತ್ತಿದೆ ಎಂದರು.ಈ ದೇಶದ ಎಲ್ಲರಿಗೆ ಸ್ವಾತಂತ್ರ್ಯ ದಿನ ಎಷ್ಟು ಮುಖ್ಯವೊ ಅಷ್ಟೆ ಮುಖ್ಯವಾದ ದಿನ ಗಣರಾಜ್ಯೋತ್ಸವ ದಿನವಾಗಿದೆ ಎಂದರು.
ನಂತರ ಡಾ: ಬಾಬಾ ಸಾಹೇಬ್ ಅಂಬೇಡ್ಕರರ ಪುತ್ಥಳಿಗೆ ತೆರಳಿ ಮಾಲಾರ್ಪಣೆ ಮಾಡಿ ಧ್ವಜಾರೋಹಣ ನೆರವೇರಿಸಿದರು.ಈ ಸಂದರ್ಭದಲ್ಲಿ ನಗರಸಭೆ ಉಪಾಧ್ಯಕ್ಷ ಮಹೇಶ ಪಾಟೀಲ್,ಜಿ.ಪಂ ಮಾಜಿ ಅಧ್ಯಕ್ಷ ರಾಜಾ ಹನುಮಪ್ಪ ನಾಯಕ (ತಾತಾ),ವೇಣುಗೋಪಾಲ ನಾಯಕ ಜೇವರ್ಗಿ,ನಯೋಪ್ರಾ ಅಧ್ಯಕ್ಷ ಪ್ರಕಾಶ ಸಜ್ಜನ್ ಸೇರಿದಂತೆ ನಗರಸಭೆಯ ಎಲ್ಲಾ ಸದಸ್ಯರು ಹಾಗು ಮಾಜಿ ಸದಸ್ಯರು ಮತ್ತು ಪೌರಾಯುಕ್ತ ಜೀವನಕುಮಾರ ಕಟ್ಟಿಮನಿ ಸೇರಿದಂತೆ ಕಚೇರಿಯ ಎಲ್ಲಾ ಸಿಬ್ಬಂದಿಗಳಿದ್ದರು.