ಬಿಸಿ ಬಿಸಿ ಸುದ್ದಿ

ಗ್ರಂಥಾಲಯದಿಂದ ಜ್ಞಾನ ವೃದ್ಧಿಸಿಕೊಳ್ಳಬಹದು: ಸಚಿವ ಡಾ.ಮುರುಗೇಶ ನಿರಾಣಿ

ಕಲಬುರಗಿ: ಗ್ರಮಥಾಲಯಗಳು ಜ್ಞಾನ ವೃದ್ಧಿಯ ಕೇಂದ್ರಗಳಿದ್ದಂತೆ. ಪುಸ್ತಕ ಖರೀದಿಸಲು ಸಾಧ್ಯವಿಲ್ಲದ ಜನ ಗ್ರಂಥಾಲಯಗಳ ಮೂಲಕ ತಮ್ಮ ಜ್ಞಾನ ವೃದ್ಧಿಸಿಕೊಳ್ಳಬಹದು ಎಂದು ಬೃಹತ್ ಹಾಗೂ ಮಧ್ಯಮ ಕೈಗಾರಿಕೆ ಇಲಾಖೆ ಖಾತೆ ಸಚಿವರೂ ಆದ ಜಿಲ್ಲಾ ಉಸ್ತುವಾರಿ ಸಚಿವ ಡಾ.ಮುರುಗೇಶ ನಿರಾಣಿ ಹೇಳಿದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಸಾರ್ವಜನಿಕ ಗ್ರಂಥಾಲಯ ಇಲಾಖೆ ಸಹಯೋಗದೊಂದಿಗೆ ನಗರದ ಕನ್ನಡ ಭವನದಲ್ಲಿ ಏರ್ಪಡಿಸಿದ ಕಾರ್ಯಕ್ರಮದಲ್ಲಿ ‘ಸಾರ್ವಜನಿಕ ಗ್ರಂಥಾಲಯವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕಲಬುರಗಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯ ಚಟುವಟಿಕೆಗಳು ಇನ್ನಷ್ಟು ಕ್ರಿಯಾಶೀಲತೆಯಿಂದ ಕೂಡಿರಲು ಪರಿಷತ್ತಿನ ಅಧ್ಯಕ್ಷರಿಗೆ ಶಾಸ್ವತ ಅನುಕೂಲಕ್ಕಾಗಿ ಒಂದು ವಾಹನದ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಇದೇ ಸಂದರ್ಭದಲ್ಲಿ ಭರವಸೆ ನೀಡಿದರು. ಪರಿಷತ್ತಿನ ನೂತನ ಪದಾಧಿಕಾರಿಗಳು ಸಾಂಸ್ಕೃತಿಕ ಸಂಘಟನೆಯಿಂದ ಬಂದಿರುವುದರಿಂದ ಪರಿಷತ್ತಿಗೆ ಹೊಸ ಸ್ಪರ್ಶ ನೀಡಿ ಜಿಲ್ಲೆಯಲ್ಲಿ ಸಾಂಸ್ಕೃತಿಕ ವಾತಾವರಣ ಮೂಡಿಸುತ್ತಾರೆ ಎಂಬ ವಿಶ್ವಾಸವೂ ವ್ಯಕ್ತಪಡಿಸಿದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಮಾತನಾಡಿ, ಜ್ಞಾನ ಹೆಚ್ಚಿಸಿಕೊಳ್ಳಬೇಕಾದರೆ ಗ್ರಂಥಾಲಯಗಳು ಅತೀ ಅವಶ್ಯಕವಾಗಿದ್ದು, ಶಿಕ್ಷಣದಲ್ಲಿ ಗ್ರಂಥಾಲಯವು ತನ್ನದೇ ಆದ ಮಹತ್ವ ಹೊಂದಿದೆ. ಪುಸ್ತಕಗಳು ಹಾಗೂ ಗ್ರಂಥಾಲಯಗಳು ಜೀವಂತ ದೇವಾಲಯಗಳಿದ್ದಂತೆ. ಹಾಗಾಗಿ, ಈ ಭಾಗದ ಜನರ ಬಹು ದಿನದ ಬೇಡಿಕೆಯನ್ನು ಗ್ರಂಥಾಲಯ ಇಲಾಖೆಯ ಸಹಯೋಗದೊಂದಿಗೆ ಕನ್ನಡ ಭವನದಲ್ಲಿ ಸಾರ್ವಜನಿಕ ಗ್ರಂಥಾಲಯವನ್ನು ಸ್ಥಾಪಿಸಲಾಗಿದೆ. ಪರಿಷತ್ತಿನಲ್ಲಿನ ಇನ್ನುಳಿದ ಕಾಮಗಾರಿಗಳಿಗಾಗಿ ಕೆ.ಕೆ.ಆರ್.ಡಿ.ಬಿ. ಹಾಗೂ ಕರ್ನಾಟಕ ಸರ್ಕಾರ ಅನುದಾನ ನೀಡಿ ಅಭಿವೃದ್ಧಿಪಡಿಸಬೇಕೆಂದು ಇದೇ ಸಂದರ್ಭದಲ್ಲಿ ಮನವಿ ಮಾಡಿಕೊಂಡರು.

ಕಲ್ಯಾಣ ಕರ್ನಾಟಕ ಪ್ರಾದೇಶಿಕ ಅಭಿವೃದ್ಧಿ ಮಂಡಳಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ ಅಧ್ಯಕ್ಷತೆ ವಹಿಸಿದ್ದರು. ಶಾಸಕ ಬಸವರಾಜ ಮತ್ತಿಮೂಡ, ಎಂಎಲ್ಸಿಗಳಾದ ಬಿ.ಜಿ.ಪಾಟೀಲ, ಶಶೀಲ್ ಜಿ.ನಮೋಶಿ, ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ರಾಜು ಲೇಂಗಟಿ, ಬಿಜೆಪಿ ಜಿಲ್ಲಾಧ್ಯಕ್ಷ ಶಿವರಾಜ ಪಾಟೀಲ ರದ್ದೇವಾಡಗಿ, ಎಂ.ಎಸ್.ಐ.ಎಲ್. ಮಾಜಿ ಅಧ್ಯಕ್ಷ ಡಾ.ವಿಕ್ರಮ್ ಪಾಟೀಲ. ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿಗಳಾದ ಶಿವರಾಜ ಅಂಡಗಿ, ಪ್ರೊ.ಯಶವಂತರಾಯ ಅಷ್ಠಗಿ, ಕೋಶಾಧ್ಯಕ್ಷ ಡಾ.ಶರಣರಾಜ್ ಛಪ್ಪರಬಂದಿ, ಶಕುಂತಲಾ ಪಾಟೀಲ ಜಾವಳಿ, ಡಾ.ಕೆ.ಗಿರಿಮಲ್ಲ, ಶಿವಲೀಲಾ ತೆಗನೂರ, ರಾಜೇಂದ್ರ ತೆಗನೂರ, ಪ್ರಭವ ಪಟ್ಟಣಕರ್, ವಿಶ್ವನಾಥ ತೊಟ್ನಳ್ಳಿ, ವಿವಿಧ ತಾಲೂಕುಗಳ ಅಧ್ಯಕ್ಷರಾದ ಸುಮಾ ಚಿಮ್ಮನಚೋಡಕರ್, ಸುರೇಶ ದೇಶಪಾಂಡೆ, ಹಣಮಂತ ಶೇರಿ, ಪ್ರಭು ಫುಲಾರಿ, ನಾಗಪ್ಪ ಸಜ್ಜನ್, ಎಸ್.ಕೆ.ಬಿರಾದಾರ, ಗುರುಬಸಪ್ಪ ಸಜ್ಜನಶೆಟ್ಟಿ, ಶರಣಬಸಪ್ಪ ಕೋಬಾಳ, ರಾಮಕೃಷ್ಣ ಖಡಕೆ, ಸಂತೋಷ ಕುಡಳ್ಳಿ, ಪ್ರಭುಲಿಂಗ ಮೂಲಗೆ, ಪ್ರಮುಖರಾದ ವಿದ್ಯಾಸಾಗರ ದೇಶಮುಖ, ಮಂಜುನಾಥ ಕಂಬಾಳಿಮಠ, ಜಗದೀಶ ಮರಪಳ್ಳಿ, ದಯಾನಂದ ಚೌಲ್, ಹೆಚ್.ಎಸ್.ಬರಗಾಲಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಹುಟ್ಟು ಹಬ್ಬ, ಮದುವೆ ಇನ್ನಿತರ ಸಮಾರಂಭಗಳ ಸಂದರ್ಭದಲ್ಲಿ ಪುಸ್ತಕಗಳನ್ನು ಉಡುಗೊರೆಯಾಗಿ ನೀಡುವ ಅಭ್ಯಾಸವನ್ನು ಎಲ್ಲರೂ ಬೆಳೆಸಿಕೊಳ್ಳುವ ಮೂಲಕ ಪುಸ್ತಕ ಓದಲು ಪ್ರೇರೇಪಿಸಬೇಕು. – ದತ್ತಾತ್ರೇಯ ಪಾಟೀಲ ರೇವೂರ, ಅಧ್ಯಕ್ಷರು, ಕೆ.ಕೆ.ಆರ್.ಡಿ.ಬಿ. ಕಲಬುರಗಿ.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

13 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

23 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

23 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

23 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago