೭೩ ನೇ ಗಣರಾಜ್ಯೋತ್ಸವದ ಆಚರಣೆ

0
7

ಕಲಬುರಗಿ: ನಗರದ ಕೆಪಿಇ ಶಿಕ್ಷಣ ಸಂಸ್ಥೆಯ ಡಾ. ಅಂಬೇಡ್ಕರ ಕಲಾ ವಾಣಿಜ್ಯ ಮತ್ತು ಸ್ನಾತಕೋತ್ತರ ಮಹಾವಿದ್ಯಾಲಯ ಕಲಬುರಗಿ ಯಲ್ಲಿ ೭೩ ನೇ ಗಣರಾಜ್ಯೋತ್ಸವ ಆಚರಿಸಲಾಯಿತು.

ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿರುವ ಕೆಪಿಇ ಸಂಸ್ಥೆಯ ಪ್ರಧಾನ ಕಾರ್ಯದರ್ಶಿಗಳಾದ ಡಾ. ಮಾರುತಿರಾವ ಡಿ. ಮಾಲೆಯವರು ಧ್ವಜಾರೋಹಣ ನೇರವೇರಿಸಿ ಮಾತನಾಡುತ್ತಾ ಸಂವಿಧಾನದ ವಿಚಾರಗಳನ್ನು ಇಂದು ವಿದ್ಯಾರ್ಥಿಗಳು ಆಳವಾಗಿ ಅಧ್ಯಯನ ಮಾಡಬೇಕು. ಅವುಗಳನ್ನು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಸಂವಿಧಾನದ ಮತ್ತು ಗಣರಾಜ್ಯೋತ್ಸದ ಆಚರಣೆ ಸಾರ್ಥಕವಾಗುತ್ತದೆ ಎಂದು ನುಡಿದರು.

Contact Your\'s Advertisement; 9902492681

ಈ ಸಂದರ್ಭದಲ್ಲಿ ಕೆಪಿಇ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿಗಳಾದ ಡಾ. ಚಂದ್ರಶೇಖರ ಶೀಲವಂತ, ಉಪಸ್ಥಿತರಿದ್ದರು. ಕಾಲೇಜಿನ ಪ್ರಾಂಶುಪಾಲರಾದ ಗೀರಿಶ ಮೀಶೆ ರವರು ಸ್ವಾಗತ ಮತ್ತು ಪ್ರಾಸ್ಥಾವಿಕವಾಗಿ ಮಾತನಾಡಿದರು. ಕೆಪಿಇ ಶಿಕ್ಷಣ ಸಂಸ್ಥೆಯ ಎಲ್ಲಾ ಅಂಗ ಸಂಸ್ಥೆಗಳ ಮುಖ್ಯೋಪಾಧ್ಯಾಯರು ಹಾಗೂ ಬೋಧಕ, ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು. ಈ ಕಾರ್ಯಾಕ್ರಮವನ್ನು ಡಾ. ರಾಜು ಮಾಳಗೆ ನಿರೂಪಿಸಿದರು ಹಾಗೂ ವಂದಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here