ಆಳಂದ: ಪ್ರತಿಯೊಬ್ಬರಲ್ಲಿ ರಾಷ್ಟ್ರಾಭಿಮಾನ ಮನೋಭಾವನೆಗಳು ತಂದುಕೊಳ್ಳಬೇಕು ಎಂದು ಶಾಸಕ ಸುಭಾಷ ಗುತ್ತೇದಾರ ಅವರು ಹೇಳಿದರು.
ಪಟ್ಟಣದ ಶ್ರೀರಾಮ ಮಾರುಕಟ್ಟೆಯಲ್ಲಿ ತಾಲೂಕು ಆಡಳಿತ ಆಯೋಜಿಸಿದ್ದ ೭೩ನೇ ಗಣರಾಜ್ಯೋತ್ಸವ ನಿಮಿತ್ತ ಸಾರ್ವಜನಿಕ ಧ್ವಜಾರೋಹಣ ನೆರವೇರಿಸಿದ್ದರು ಅಲ್ಲದೆ, ಸಮಾಜ ಕಲ್ಯಾಣ ಇಲಾಖೆಯಿಂದ ಅಂತರಜಾತಿ ವಿವಾಹ ಕೈಗೊಂಡ ದಂಪತಿಗಳಿಗೆ ಪ್ರೋತ್ಸಾಹಧನ ಚೆಕ್ ಬಾಂಡ್‌ಗಳನ್ನು ವಿತರಿಸಿ ಅವರು ಮಾತನಾಡಿದರು.
ಭಾರತ ರತ್ನ ಸಂವಿಧಾನ ಶಿಲ್ಪಿ ಡಾ| ಬಿ.ಆರ್. ಅಂಬೇಡ್ಕರ್ ಅವರ ನೇತೃತ್ವದ ಸಮಿತಿ ಸಿದ್ಧಪಡಿಸಸಿದ ನಮ್ಮ ರಾಷ್ಟ್ರದ ಸಂವಿಧಾನವನ್ನು ೨೬, ೧೯೫೦ರಂದು ಜಾರಿಗೆ ಬಂದಿತು. ನಮ್ಮ ಸಂವಿಧಾನದ ಮೇಲಿನ ಪ್ರಜೆಗಳ ವಿಶ್ವಾಸವನ್ನು ಮರುದೃಢಪಡಿಸುವ ಮೂಲಕ ಹಾಗೂ ಸಂವಿಧಾನದ ಸಮಗ್ರತೆಯನ್ನು ಎತ್ತಿಹಿಡಿಯುವ ಮೂಲಕ ಈ ಗಣರಾಜ್ಯೋತ್ಸವ ದಿನವನ್ನು ಆಚರಣೆಗೆ ಅರ್ಥ ಕಲ್ಪಿಸಲು ಇದರ ತತ್ವಸಿದ್ಧಾಂತಗಳಿಗೆ ಬದ್ಧರಾಗಿ ನಡೆದುಕೊಳ್ಳಬೇಕಾಗಿದೆ. ಭಾರತೀಯರ ಸಾಧನೆ ಸಾಕಷ್ಟಾದರು ಸಾಧಿಸಬೇಕಾಗಿರುವುದು ಇನ್ನೂ ಬಹಳಷ್ಟಿದೆ. ಇದಕ್ಕಾಗಿ ಜನ ಸಾಮಾನ್ಯರು ಕಠಿಣ ಪರಿಶ್ರಮ, ಶಿಕ್ಷಣ ಜ್ಞಾನ ತಂತ್ರಜ್ಞಾನ ಪಡೆಯುವುದು ಅಗತ್ಯವಾಗಿದೆ ಎಂದು ಅವರು ಹೇಳಿದರು.
ಪುರಸಭೆ ಅಧ್ಯಕ್ಷೆ ರಾಜಶ್ರೀ ಎಸ್. ಖಜೂರಿ, ಉಪಾಧ್ಯಕ್ಷ ಈರಣ್ಣಾ ಹತ್ತರಕಿ, ತಹಸೀಲ್ದಾರ ಯಲ್ಲಪ್ಪ ಸುಬೇದಾರ, ಗ್ರೇಡ್-೨ ತಹಸೀಲ್ದಾರ ಬಸವರಾಜ ರಕ್ಕಸಗಿ, ತಾಪಂ ಇಒ ಡಾ| ಸಂಜಯ ರೆಡ್ಡಿ, ಮುಖಂಡ ಮಲ್ಲಣ್ಣಾ ನಾಗೂರೆ, ಸೂರ್ಯಕಾಂತ ತಟ್ಟಿ, ಅಶೋಕ ಗುತ್ತೇದಾರ, ಮಲ್ಲಿಕಾರ್ಜುನ ಕಂದಗುಳೆ, ರಾಜ್ಯ ಸರ್ಕಾರಿ ನೌಕರ ಸಂಘದ ಅಧ್ಯಕ್ಷ ಸಿದ್ಧರಾಮ ಪಾಟೀಲ, ಶಿಕ್ಷಕರ ಸಂಘದ ಅಧ್ಯಕ್ಷ ನರಸಪ್ಪ ಬಿರಾದಾರ, ಪಿಎಸ್‌ಐ ತಿರುಮಲ್ಲೇಶ, ಸಮಾಜ ಕಲ್ಯಾಣಾಧಿಕಾರಿ ಮೋನಮ್ಮ ಸುತಾರ, ರೇಷ್ಮೆ ಅಧಿಕಾರಿ ಡಿ.ಬಿ.ಪಾಟೀಲ, ಸಹಾಯಕ ಕೃಷಿ ನಿರ್ದೇಶಕ ಶರಣಗೌಡ ಪಾಟೀಲ, ಬಿಸಿಎಂ ಅಧಿಕಾರಿ ಬಸವರಾಜ ಕಾಳೆ ಸೇರಿದಂತೆ ನಾಗರಿಕ ಗಣ್ಯರು, ಅಧಿಕಾರಿಗಳು ಶಾಲಾ ಮಕ್ಕಳು ಉಪಸ್ಥಿತರಿದ್ದರು.
ಈ ಮೊದಲು ತಹಸೀಲ್ದಾರ ಕಚೇರಿಯ ಆವರಣದಲ್ಲಿ ನಡೆದ ರಾಷ್ಟ್ರಧ್ವಜಾರೋಹಣವನ್ನು ತಹಸೀಲ್ದಾರ ಯಲ್ಲಪ್ಪ ಸುಬೇದಾರ ನೆರವೇರಿಸಿದರು. ಶಾಸಕ ಸುಭಾಷ ಗುತ್ತೇದಾರ ಸೇರಿದಂತೆ ಇನ್ನಿತರ ಅಧಿಕಾರಿಗಳು ಮತ್ತು ನಾಗರಿಕ ಮುಖಂಡರು ಪಾಲ್ಗೊಂಡಿದ್ದರು. ಅಂತರಜಾತಿ ವಿವಾಹ ಕೈಗೊಂಡ ದಂಪತಿಗಳಿಗೆ ಸಮಾಜ ಕಲ್ಯಾಣ ಇಲಾಖೆಯಂದ ಶಾಸಕರು ಪ್ರೋತ್ಸಾಹಧನ ಚೆಕ್ ವಿತರಿಸಿದರು. ಅಧಿಕಾರಿ ಮೊನಮ್ಮಾ ಸುತಾರ ಇತರು ಇದ್ದರು.