ಬಿಸಿ ಬಿಸಿ ಸುದ್ದಿ

ಪ್ರಜೆಗಳಲ್ಲಿ ರಾಷ್ಟ್ರಾಭಿಮಾನ ಮನೋಬಲ ಹೆಚ್ಚಲಿ: ಶಾಸಕ ಗುತ್ತೇದಾರ

ಆಳಂದ: ಪ್ರತಿಯೊಬ್ಬರಲ್ಲಿ ರಾಷ್ಟ್ರಾಭಿಮಾನ ಮನೋಭಾವನೆಗಳು ತಂದುಕೊಳ್ಳಬೇಕು ಎಂದು ಶಾಸಕ ಸುಭಾಷ ಗುತ್ತೇದಾರ ಅವರು ಹೇಳಿದರು.

ಪಟ್ಟಣದ ಶ್ರೀರಾಮ ಮಾರುಕಟ್ಟೆಯಲ್ಲಿ ತಾಲೂಕು ಆಡಳಿತ ಆಯೋಜಿಸಿದ್ದ ೭೩ನೇ ಗಣರಾಜ್ಯೋತ್ಸವ ನಿಮಿತ್ತ ಸಾರ್ವಜನಿಕ ಧ್ವಜಾರೋಹಣ ನೆರವೇರಿಸಿದ್ದರು ಅಲ್ಲದೆ, ಸಮಾಜ ಕಲ್ಯಾಣ ಇಲಾಖೆಯಿಂದ ಅಂತರಜಾತಿ ವಿವಾಹ ಕೈಗೊಂಡ ದಂಪತಿಗಳಿಗೆ ಪ್ರೋತ್ಸಾಹಧನ ಚೆಕ್ ಬಾಂಡ್‌ಗಳನ್ನು ವಿತರಿಸಿ ಅವರು ಮಾತನಾಡಿದರು.

ಭಾರತ ರತ್ನ ಸಂವಿಧಾನ ಶಿಲ್ಪಿ ಡಾ| ಬಿ.ಆರ್. ಅಂಬೇಡ್ಕರ್ ಅವರ ನೇತೃತ್ವದ ಸಮಿತಿ ಸಿದ್ಧಪಡಿಸಸಿದ ನಮ್ಮ ರಾಷ್ಟ್ರದ ಸಂವಿಧಾನವನ್ನು ೨೬, ೧೯೫೦ರಂದು ಜಾರಿಗೆ ಬಂದಿತು. ನಮ್ಮ ಸಂವಿಧಾನದ ಮೇಲಿನ ಪ್ರಜೆಗಳ ವಿಶ್ವಾಸವನ್ನು ಮರುದೃಢಪಡಿಸುವ ಮೂಲಕ ಹಾಗೂ ಸಂವಿಧಾನದ ಸಮಗ್ರತೆಯನ್ನು ಎತ್ತಿಹಿಡಿಯುವ ಮೂಲಕ ಈ ಗಣರಾಜ್ಯೋತ್ಸವ ದಿನವನ್ನು ಆಚರಣೆಗೆ ಅರ್ಥ ಕಲ್ಪಿಸಲು ಇದರ ತತ್ವಸಿದ್ಧಾಂತಗಳಿಗೆ ಬದ್ಧರಾಗಿ ನಡೆದುಕೊಳ್ಳಬೇಕಾಗಿದೆ. ಭಾರತೀಯರ ಸಾಧನೆ ಸಾಕಷ್ಟಾದರು ಸಾಧಿಸಬೇಕಾಗಿರುವುದು ಇನ್ನೂ ಬಹಳಷ್ಟಿದೆ. ಇದಕ್ಕಾಗಿ ಜನ ಸಾಮಾನ್ಯರು ಕಠಿಣ ಪರಿಶ್ರಮ, ಶಿಕ್ಷಣ ಜ್ಞಾನ ತಂತ್ರಜ್ಞಾನ ಪಡೆಯುವುದು ಅಗತ್ಯವಾಗಿದೆ ಎಂದು ಅವರು ಹೇಳಿದರು.

ಪುರಸಭೆ ಅಧ್ಯಕ್ಷೆ ರಾಜಶ್ರೀ ಎಸ್. ಖಜೂರಿ, ಉಪಾಧ್ಯಕ್ಷ ಈರಣ್ಣಾ ಹತ್ತರಕಿ, ತಹಸೀಲ್ದಾರ ಯಲ್ಲಪ್ಪ ಸುಬೇದಾರ, ಗ್ರೇಡ್-೨ ತಹಸೀಲ್ದಾರ ಬಸವರಾಜ ರಕ್ಕಸಗಿ, ತಾಪಂ ಇಒ ಡಾ| ಸಂಜಯ ರೆಡ್ಡಿ, ಮುಖಂಡ ಮಲ್ಲಣ್ಣಾ ನಾಗೂರೆ, ಸೂರ್ಯಕಾಂತ ತಟ್ಟಿ, ಅಶೋಕ ಗುತ್ತೇದಾರ, ಮಲ್ಲಿಕಾರ್ಜುನ ಕಂದಗುಳೆ, ರಾಜ್ಯ ಸರ್ಕಾರಿ ನೌಕರ ಸಂಘದ ಅಧ್ಯಕ್ಷ ಸಿದ್ಧರಾಮ ಪಾಟೀಲ, ಶಿಕ್ಷಕರ ಸಂಘದ ಅಧ್ಯಕ್ಷ ನರಸಪ್ಪ ಬಿರಾದಾರ, ಪಿಎಸ್‌ಐ ತಿರುಮಲ್ಲೇಶ, ಸಮಾಜ ಕಲ್ಯಾಣಾಧಿಕಾರಿ ಮೋನಮ್ಮ ಸುತಾರ, ರೇಷ್ಮೆ ಅಧಿಕಾರಿ ಡಿ.ಬಿ.ಪಾಟೀಲ, ಸಹಾಯಕ ಕೃಷಿ ನಿರ್ದೇಶಕ ಶರಣಗೌಡ ಪಾಟೀಲ, ಬಿಸಿಎಂ ಅಧಿಕಾರಿ ಬಸವರಾಜ ಕಾಳೆ ಸೇರಿದಂತೆ ನಾಗರಿಕ ಗಣ್ಯರು, ಅಧಿಕಾರಿಗಳು ಶಾಲಾ ಮಕ್ಕಳು ಉಪಸ್ಥಿತರಿದ್ದರು.

ಈ ಮೊದಲು ತಹಸೀಲ್ದಾರ ಕಚೇರಿಯ ಆವರಣದಲ್ಲಿ ನಡೆದ ರಾಷ್ಟ್ರಧ್ವಜಾರೋಹಣವನ್ನು ತಹಸೀಲ್ದಾರ ಯಲ್ಲಪ್ಪ ಸುಬೇದಾರ ನೆರವೇರಿಸಿದರು. ಶಾಸಕ ಸುಭಾಷ ಗುತ್ತೇದಾರ ಸೇರಿದಂತೆ ಇನ್ನಿತರ ಅಧಿಕಾರಿಗಳು ಮತ್ತು ನಾಗರಿಕ ಮುಖಂಡರು ಪಾಲ್ಗೊಂಡಿದ್ದರು. ಅಂತರಜಾತಿ ವಿವಾಹ ಕೈಗೊಂಡ ದಂಪತಿಗಳಿಗೆ ಸಮಾಜ ಕಲ್ಯಾಣ ಇಲಾಖೆಯಂದ ಶಾಸಕರು ಪ್ರೋತ್ಸಾಹಧನ ಚೆಕ್ ವಿತರಿಸಿದರು. ಅಧಿಕಾರಿ ಮೊನಮ್ಮಾ ಸುತಾರ ಇತರು ಇದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

9 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

19 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

19 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

19 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago