ಪತ್ರಿಕೋದ್ಯಮ ವಿಭಾಗಕ್ಕೆ ಕುಲಪತಿ ಭೇಟಿ

0
242

ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗಕ್ಕೆ ಭೇಟಿ ನೀಡಿದ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ದಯಾನಂದ ಅಗಸರ್ ಅವರು ವಿಭಾಗದ ಕುಂದು ಕೊರತೆ ಮತ್ತು ಸಿಬ್ಬಂದಿಗಳ, ವಿದ್ಯಾರ್ಥಿಗಳ ಹಾಜರಾತಿ, ತರಗತಿಗಳು ಹೇಗೆ ನಡೆಯುತ್ತಿದೆ ಎನ್ನುವುದನ್ನು ಪರಿಶೀಲನೆ ಮಾಡಿದರು.

ವಿಭಾಗದ ಶೈಕ್ಷಣಿಕ ಚಟುವಟಿಕೆ ಹಾಗೂ ಅಭಿವೃದ್ಧಿ ಕಾರ್ಯಕ್ರಮಗಳ ಯೋಜನೆಗಳ ಕುರಿತು ವಿಭಾಗದ ಸಂಯೋಜನಾಧಿಕಾರಿ ಡಾ. ಡಿ.ಬಿ ಪಾಟೀಲ್ ಅವರೊಂದಿಗೆ ಚರ್ಚಿಸಿ ಮಾತನಾಡಿದ ಅವರು ಪ್ರಸ್ತುತ ಸಂದರ್ಭದಲ್ಲಿ ಸಮೂಹ ಮಾಧ್ಯಮ ಕ್ಷೇತ್ರದಲ್ಲಿ ವಿಪುಲ ಅವಕಾಶಗಳಿವೆ ವಿದ್ಯಾರ್ಥಿಗಳಿಗೆ ಅಗತ್ಯವಿರುವ ಎಲ್ಲ ಸೌಲಭ್ಯಗಳನ್ನು ವಿಶ್ವವಿದ್ಯಾಲಯ ಪೂರೈಸಲಿದೆ.

Contact Your\'s Advertisement; 9902492681

ಪ್ರಾಯೋಗಿಕವಾಗಿ ಕಲಿಕೆಗೆ ಅಗತ್ಯವಿರುವ ಮಾನವ ಸಂಪನ್ಮೂಲ ಬಳಕೆ ಮಾಡಿಕೊಂಡು ತಾಂತ್ರಿಕ ಸೌಲಭ್ಯಗಳನ್ನು ಅಳವಡಿಸಿಕೊಂಡು ಗುಣಮಟ್ಟದ ಶಿಕ್ಷಣ ನೀಡಲು ಎಲ್ಲ ಸಿಬ್ಬಂದಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಅವರು ಹೇಳಿದರು.

ನಮ್ಮ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಗಳು ಮಾಧ್ಯಮ ಕ್ಷೇತ್ರದಲ್ಲಿ ಅಸಾಧ್ಯವಾದುದನ್ನು ಸಾಧಿಸಲು ಸ್ಥಳೀಯ ಹಾಗೂ ಪ್ರಾದೇಶಿಕ ಮಾಧ್ಯಮ ಸಂಸ್ಥೆಗಳೊಂದಿಗೆ ಒಡಂಬಡಿಕೆ ಮಾಡಿಕೊಳ್ಳಲು ಪತ್ರಿಕೋದ್ಯಮ ವಿಭಾಗದ ಸಂಯೋಜನಾಧಿಕಾರಿಗೆ ಸಲಹೆ ನೀಡಿದರು.

ಈ ವಿಭಾಗದಲ್ಲಿ ಕಲಿತ ವಿದ್ಯಾರ್ಥಿಗಳು ರಾಜ್ಯದ ಮುದ್ರಣ ಮಾಧ್ಯಮ ಮತ್ತು ವಿದ್ಯುನ್ಮಾನ ಮಾಧ್ಯಮ ಸಂಸ್ಥೆಗಳಲ್ಲಿ ಹಾಗೂ ರಾಷ್ಟ್ರೀಯ ಮಟ್ಟದ ಸಂವಹನ ಸಂಯೋಜಕರಾಗಿ ಕೆಲಸ ಮಾಡುತ್ತಿರುವುದು ನಮಗೆ ಬಹಳ ಸಂತೋಷ ಅನಿಸುತ್ತದೆ ಎಂದು ಕುಲಪತಿಗಳು ಮೆಚ್ಚುಗೆ ವ್ಯಕ್ತಪಡಿಸಿದರು.

ಪತ್ರಿಕೋದ್ಯಮ ವಿಭಾಗದ ಸಂಯೋಜನಾಧಿಕಾರಿ ಡಾ. ಡಿ.ಬಿ ಪಾಟೀಲ್, ಡಾ. ಕೆ. ಎಂ. ಕುಮಾರಸ್ವಾಮಿ, ಡಾ. ರಾಜಕುಮಾರ ಎಂ. ದಣ್ಣೂರ, ಡಾ. ಅಶೋಕ ದೊಡ್ಡಮನಿ, ವೆಂಕಟೇಶ್ ಕಡೂನ, ಶ್ರೀಮತಿ ರೀತು ತಲವಾರ, ಆನಂದ ಯಾತನೂರ ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here