ಚಿಂಚೋಳಿ: ಬಡ, ಹಾಗೂ ಪ್ರಗತಿಪರ ರೈತ ಮಕ್ಕಳ ವಿದ್ಯಾರ್ಥಿಗಳಿಗೆ ತಾಲ್ಲೂಕಿನ ಹಲಚೆರ ಗ್ರಾಮ ಪಂಚಾಯಿತಿ ಎದುರುಗಡೆ ಇಂದು ಸನ್ಮಾನ ಸಮಾರಂಭವನ್ನು ಆಯೋಜಿಸಲಾಗಿತ್ತು.
ಚಿಂಚೋಳಿ ಎ.ಎಸ್.ಪಿ ಅಕ್ಷಯ ಕುಮಾರ್ ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು, ಹಲಚೇರಾ ಗ್ರಾಮ ಪಂಚಾಯಿತ ಅಧ್ಯಕ್ಷ ಶರಣಪ್ಪ ಬೆಳಗುಂಪಿ ಸಮಾರಂಭದ ಅಧ್ಯಕ್ಷತೆವಹಿಸಿದರು. ಕರ್ನಾಟಕ ಪ್ರಾಂತ ರೈತ ಸಂಘದ ಅಧ್ಯಕ್ಷ ಶರಣಬಸಪ್ಪಾ ಮಮಶೆಟ್ಟಿ ಪ್ರಾಸ್ತಾವಿಕ ಮಾತನಾಡಿದ್ದು, ಕರ್ನಾಟಕ ಗ್ರಾಮೀಣ ಬ್ಯಾಂಕ್ ಬ್ಯಾಂಕ್ ರಿಜನಲ್ ಮ್ಯಾನೇಜರ್ ಗಿರೀಶ್ ಹೆಬ್ಬಾರ ಮತ್ತು ಲೀಡ್ ಬ್ಯಾಂಕ್ ಚೀಫ್ ಮ್ಯಾನೇಜರ್ ಸಿ. ಎಚ್ ಹವಲ್ದಾರ್ ಉಪಸ್ಥಿತರಿದ್ದು, ಸಂತೋಷ್ ಮಾಳಗೆ ಕಾರ್ಯಕ್ರಮ ನಿರೂಪಣೆ ಮಾಡಿದ್ದು, ಗುರು ನಂದೇಶ ಕೊಣಿನ ಅವರು ಸ್ವಾಗತತಿಸಿದ್ದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರು ಸೇರಿದಂತೆ ಗ್ರಾಮದ ಮುಖಂಡರು ಇದ್ದರು.
ಕಾರ್ಯಕ್ರಮದ ಪ್ರಸ್ತಾವಿಕ ಮಮಶೆಟ್ಟಿ ಮಾತನಾಡಿ, ಮಕ್ಕಳಿಗಾಗಿ ಆಸ್ತಿ ಮಾಡಬೇಡಿ. ಮಕ್ಕಳನ್ನೆ ಆಸ್ತಿಯನ್ನಾಗಿ ಮಾಡಿ ಎಂದು ಕರೆ ನೀಡಿ, ಇಂದಿನ ಯುವಕರು ಮುಂದಿನ ಒಳ್ಳೆಯ ಪ್ರಜೆಗಳಾಗಬೆಕು ಎಂದು ವಿದ್ಯಾರ್ಥಿಗಳಿಗೆ ಹುರಿದುಂಬಿಸಿದ್ದರು. ವಿಧ್ಯಾರ್ಥಿಗಳು ಶಿಕ್ಷಣದಲ್ಲಿ ಮುಂಚೂಣಿಯಾಗಿರಬೇಕು,ದುಶ್ಚಟಗಳಿಂದ ದೂರವಿರಬೇಕೆಂದು ಅಕ್ಷಯ ಕುಮಾರ ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.
ಕಾರ್ಯಕ್ರಮದಲ್ಲಿ 28 ಜನ ಪ್ರತಿಭಾವಂತ ವಿಧ್ಯಾರ್ಥಿಗಳಿಗೆ ಪ್ರಶಸ್ತಿ ಹಾಗೂ 18 ಜನ ಪ್ರಗತಿಪರ ರೈತರಿಗೆ ಸನ್ಮಾನಿಸಲಾಯಿತು.
ನಿವೃತ್ತ ಶಿಕ್ಷಕ ರಾದ ಹಣಮಂತ್ರಾವ ಕುಲಕರ್ಣಿ. ಸಿದ್ದು ಹಲಚೆರ, ನರಸಯ್ಯಾ ಗುತ್ತೇದಾರ ಸೇರಿದಂತೆ ನೂರಾರು ಜನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…