ಡಾ. ಅಂಬೇಡ್ಕರ್ ಭಾವಚಿತ್ರ ತೆಗೆಸಿದ ಜಿಲ್ಲಾ ನ್ಯಾಯಾಧೀಶರ ವಿರುದ್ಧ ಕ್ರಮಕ್ಕೆ ಆಗ್ರಹ

0
36

ಶಹಾಬಾದ: ರಾಯಚೂರು ಜಿಲ್ಲಾ ನ್ಯಾಯಾಲಯದ ಗಣರಾಜ್ಯೋತ್ಸವ ಸಂದರ್ಭ ಡಾ. ಬಿ.ಆರ್.ಅಂಬೇಡ್ಕರ್ ಭಾವಚಿತ್ರ ತೆಗೆಸಿದ ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿ ಶುಕ್ರವಾರ ದಲಿತ ಮಾದಿಗ ಸಮನ್ವಯ ಸಮಿತಿಯಿಂದ ಪ್ರತಿಭಟನೆ ನಡೆಸಿ ಬೆಂಗಳೂರಿನ ಉಚ್ಛನ್ಯಾಲಯದ ನ್ಯಾಯಾಧೀಶರಿಗೆ ಮನವಿ ಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಪ್ರತಿಭಟನಾಕಾರರು, ೭೩ನೇ ಗಣರಾಜ್ಯೋತ್ಸವ ಸಂದರ್ಭದಲ್ಲಿ ಜಿಲ್ಲಾ ರಾಯಚೂರ ಕೋರ್ಟ್ ಆವರಣದಲ್ಲಿ ಧ್ವಜಾರೋಹಣಕ್ಕಾಗಿ ಸಕಲ ಸಿದ್ದತೆ ಮಾಡಿಕೊಳ್ಳಲಾಗಿತ್ತು. ಈ ವೇಳೆ ಧ್ವಜಾರೋಹಣಕ್ಕೆ ಬರಲು ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಜಿಲ್ಲಾ ನ್ಯಾಯಾಲಯದಲ್ಲಿ ಅಂಬೇಡ್ಕರ್ ಪೋಟೋ ತೆಗೆದು ಧ್ವಜಾರೋಹಣ ಮಾಡಿದ್ದಕ್ಕೆ ನ್ಯಾಯಾಧೀಶರ ವಿರುದ್ಧ ಆಕ್ರೋಶ ಹೊರಹಾಕಿದರು.

Contact Your\'s Advertisement; 9902492681

ಈ ರೀತಿ ಒಬ್ಬ ಜವಾಬ್ದಾರಿಯುತ ವ್ಯಕ್ತಿ ಮಾಡಿರುವುದು ಅಕ್ಷಮ್ಯ ಅಪರಾಧ, ತಕ್ಷಣ ನ್ಯಾಯಾಧೀಶರನ್ನು ಅಮಾನತು ಮಾಡಬೇಕು ಎಂದು ಒತ್ತಾಯಿಸಿದರು. ನ್ಯಾಯಾಧೀಶರು ಸಂವಿಧಾನವನ್ನು, ಶಿ?ಚಾರವನ್ನು ಪಾಲನೆ ಮಾಡಿ ಇತರರಿಗೆ ಮಾದರಿಯಾಗಬೇಕು. ಆದರೆ ಇಂಥ ಹೆಜ್ಜೆ ಇಟ್ಟು ಸಂವಿಧಾನನ ಶಿಲ್ಪಿಗೆ ಅಪಮಾನ ಮಾಡಲಾಗಿದೆ.ಕೂಡಲೇ ಇವರ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿ ಗ್ರೇಡ್-೨ ತಹಸೀಲ್ದಾರ ಗುರುರಾಜ ಸಂಗಾವಿ ಮುಖಾಂತರ ಬೆಂಗಳೂರಿನ ಉಚ್ಛನ್ಯಾಲಯದ ನ್ಯಾಯಾಧೀಶರಿಗೆ ಮನವಿ ಪತ್ರ ಸಲ್ಲಿಸಿದರು.

ಡಿಎಮ್‌ಎಸ್‌ಎಸ್ ತಾಲೂಕಾಧ್ಯಕ್ಷ ಶಿವರಾಜ ಕೋರೆ, ಕಾರ್ಯಾಧ್ಯಕ್ಷ ಶರಣು ಪಗಲಾಪೂರ, ಪ್ರಧಾನ ಕಾರ್ಯದರ್ಶಿ ರವಿ ಬೆಳಮಗಿ, ರಾಜೇಶ ಯನಗುಂಟಿಕರ್, ನಾಗಪ್ಪ ರಾಯಚೂರಕರ್, ಪ್ರಕಾಶ ಕುಸಾಳೆ, ಯಲ್ಲಪ್ಪ ಭೋಸಗಿ, ಪರಶುರಾಮ ಚಂದ್ರು ಉದಯಕರ್ ಸೇರಿದಂತೆ ಇತರರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here