ಬಿಸಿ ಬಿಸಿ ಸುದ್ದಿ

ಅಂಬೇಡ್ಕರ್‌ಗೆ ಅವಮಾನ: ನ್ಯಾಯಾದೀಶರ ವಜಾಗೆ ಆಗ್ರಹ

ಶಹಾಬಾದ: ರಾಯಚೂರಿನಲ್ಲಿ ಗಣರಾಜ್ಯೋತ್ಸವ ಆಚರಣೆ ವೇಳೆ ಸಂವಿಧಾನಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಫೋಟೋ ಅವಮಾನ ಮಾಡಿರುವ ಆರೋಪ ಎದುರಿಸುತ್ತಿರುವ ಅಲ್ಲಿನ ಪ್ರಧಾನ ಜಿಲ್ಲಾ ಹಾಗೂ ಸೆಷನ್ಸ್ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಅವರನ್ನು ಸೇವೆಯಿಂದ ವಜಾ ಮಾಡಬೇಕು’ ಎಂದು ದಸಂಸ ಜಿಲ್ಲಾ ಸಂಚಾಲಕ ಭರತ್ ಧನ್ನಾ ಆಗ್ರಹಿಸಿದ್ದಾರೆ.

ಡಾ. ಬಿ.ಆರ್ . ಅಂಬೇಡ್ಕರ್ ಅವರ ಭಾವಚಿತ್ರ ಇಟ್ಟರೆ ನಾನು ಕಾರ್ಯಕ್ರಮಕ್ಕೆ ಬರುವುದಿಲ್ಲ ಎಂದು ಹೇಳಿದ ವೃತ್ತಿ ಗೌರವಕ್ಕೆ ಅವಮಾನ ಮಾಡಿದಲ್ಲದೆ ಸಂವಿಧಾನಕ್ಕೆ ಮತ್ತು ಭಾರತ ರತ್ನ ಮಹಾನಾಯಕ ಸಂವಿಧಾನ ಶಿಲ್ಪಿ ಡಾ . ಬಿ.ಆರ್ . ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ್ದಾರೆ. ಈ ನ್ಯಾಯಾಧೀಶ ದೇಶ ದ್ರೋಹ ಕೃತ್ಯ ಮಾಡಿದ್ದು ಇವರ ಮೇಲೆ ರಾಷ್ಟ್ರ ದ್ರೋಹ ಪ್ರಕರಣವನ್ನು ದಾಖಲಿಸಬೇಕು.ಉಚ್ಚ ನ್ಯಾಯಾಲಯವು ಸ್ವಯಂ ಪ್ರೇರಿತವಾಗಿ ಇವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು & ವೃತ್ತಿಯಿಂದ ವಜಾ ಮಾಡಬೇಕು. ಒಂದು ವೇಳೆ ಅವರಿಗೆ ವೃತ್ತಿಯಿಂದ ವಜಾಗೊಳಿಸುವಲ್ಲಿ ವಿಫಲವಾದಲ್ಲಿ ರಾಜ್ಯಾದ್ಯಂತ ದಸಂಸ ಸಂಘಟನೆಯಿಂದ ಉಗ್ರವಾದ ಹೋರಾಟವನ್ನು ಮಾಡಬೇಕಾಗುತ್ತದೆ ಎಂದು ಎಚ್ಚರಿಕೆನೀಡಿದ್ದಾರೆ.

emedialine

Recent Posts

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

35 mins ago

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

2 hours ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

5 hours ago

ಶರಣ ಮಾರ್ಗಕ್ಕೆ ನಿಮ್ಮೆಲ್ಲರ ಸಹಾಯ ಸಹಕಾರ ಅಗತ್ಯ: 10ನೇ ವರ್ಷದ ಹೊಸ್ತಿಲಲ್ಲಿ ನಿಂತು ನಿಮ್ಮೊಂದಿಗಿಷ್ಟು

ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀ ಕುಟುಂಬದ ಬಂಧು ಬಾಂಧವರಿಗೆ ಒಂದೆಡೆ ದುಃಖ, ತಳವಳ,…

6 hours ago

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

19 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

19 hours ago