ಕಲಬುರಗಿ: ಗಣರಾಜ್ಯೋತ್ಸ ದಿನದಂದು ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಅವಮಾನ ಮಾಡಿರುವ ಜಿಲ್ಲಾ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಗೌಡ ಅವರನ್ನು ಸೇವೆಯಿಂದ ವಜಾಗೊಳಿಸಬೇಕು ಎಂದು ಅನನ್ಯ ಪದವಿ ಮಹಾವಿದ್ಯಾಲಯದ ಪ್ರಾಂಶುಪಾಲ ಶರಣು.ಬಿ.ಹೊನ್ನಗೆಜ್ಜಿ ಅವರು ಒತ್ತಾಯಿಸಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ಅವರು, ನ್ಯಾಯಾಂಗ ಹುದ್ದೆಯಲ್ಲಿ ಇರುವ ಅವರು ಸಂವಿಧಾನ ಶಿಲ್ಪಿ ಅವರ ಭಾವಚಿತ್ರಕ್ಕೆ ಅವ ಮಾನಿಸುವ ಮೂಲಕ ವಿಕೃತಿ ಮನಸ್ಥಿತಿ ಮೆರೆದಿದ್ದಾರೆ. ಅಂಬೇಡ್ಕರ್ ಅವರ ಭಾವಚಿತ್ರವಿದ್ದರೆ ಧ್ವಜಾರೋಹಣ ಮಾಡುವುದಿಲ್ಲ ಎಂದು ಉಡಾಫೆಯಾಗಿ ಮಾತನಾಡಿರುವುದು ನಾಗರಿಕ ಸಮಾಜ ತಲೆತಗ್ಗಿಸಬೇಕಾದ ಸಂಗತಿ ಯಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ದೇಶಕ್ಕೆ ಸಂವಿಧಾನ ಬರೆದವರ ಬಗ್ಗೆ ಈ ರೀತಿ ಮಾಡಿರುವುದು ನಾಡಿನೆಲ್ಲೆಡೆ ಆಕ್ರೋಶಕ್ಕೆ ಕಾರಣವಾಗಿದೆ.
ಇದು ಅತ್ಯಂತ ನೋವಿನ ಸಂಗತಿಯಾಗಿದ್ದು ಮಾನವ ಕುಲಕ್ಕೆ ಅವಮಾನದ ವಿಚಾರ. ಹೀಗಾಗಿ ತಕ್ಷಣವೇ ಹೈಕೋರ್ಟ್ ನ್ಯಾಯಮೂರ್ತಿಗಳು ಮಧ್ಯ ಪ್ರವೇಶಿಸಿ ಇಂದಿನ ಆಧುನಿಕ ಕಾಲಘಟ್ಟದಲ್ಲೂ ಅಸ್ಪೃಶ್ಯತೆಯ ಮನೋಭಾವ ಉಳಿಸಿಕೊಂಡಿರುವ ಇವರನ್ನು ನ್ಯಾಯಾಂಗ ಇಲಾಖೆ ಯಿಂದ ವಜಾ ಮಾಡಬೇಕು ಎಂದು ಹೊನ್ನಗೆಜ್ಜಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.