ಚುನಾವಣಾ ವ್ಯವಸ್ಥೆಯಲ್ಲಿ ಸುಧಾರಣೆಗಳು ಅಗತ್ಯ : ವಿಶ್ವೇಶ್ವರ ಹೆಗಡೆ ಕಾಗೇರಿ

ಬೆಂಗಳೂರು: ಜಾತಿ ಬಲ, ಹಣ ಬಲ, ತೋಳ್ಬಲ ಹಾಗೂ ಪಕ್ಷಾಂತರ ಬಲಗಳಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಕುಸಿತಗೊಳ್ಳುತ್ತಿರುವುದನ್ನು ತಡೆಯಲು ಚುನಾವಣಾ ವ್ಯವಸ್ಥೆಯಲ್ಲಿ ಸುಧಾರಣೆಗಳು ಅಗತ್ಯವಾಗಿವೆ ಎಂದು ಅಭಿಪ್ರಾಯಪಟ್ಟ ರಾಜ್ಯ ವಿಧಾನ ಸಭೆಯ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು  ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಸದೃಢಗೊಳಿಸಲು ಎಲ್ಲೆಡೆ ವ್ಯಾಪಕ ಸಮಾಲೋಚನಾ ಸಭೆ ಮತ್ತು ಚರ್ಚೆಗಳು ಪ್ರಾರಂಭವಾಗಲಿ ಎಂದು ಆಶಿಸಿದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿನ ನೈತಿಕ ಅಧಃಪತನ ಕುರಿತು ಕೇವಲ ರಾಜಕಾರಣಿಗಳ ವಿರುದ್ಧ ಬೊಟ್ಟು ಮಾಡುವ ಸಂಸ್ಕøತಿ ದೂರವಾಗಬೇಕು.  ರಾಜಕೀಯದ ವಿವಿಧ ಮಜಲುಗಳಲ್ಲಿ ಅಧಿಕಾರವನ್ನು ಅನುಭವಿಸಿ ಉತ್ತುಂಗದಲ್ಲಿರುವ ಸಮಾಜದ ಹಿರಿಯರು ಮೌನ ಮುರಿಯಬೇಕು.   ನ್ಯಾಯಾಂಗ, ಕಾರ್ಯಾಂಗ, ಶಾಸಕಾಂಗ ಮಾತ್ರವಲ್ಲದೇ ಸಾಹಿತ್ಯ ಹಾಗೂ ಮಾಧ್ಯಮ ಕ್ಷೇತ್ರದ ಗಣ್ಯರೂ ಕೂಡಾ ನೈತಿಕ ಹೊಣೆಗಾರರಾಗಿ ಚುನಾವಣಾ ವ್ಯವಸ್ಥೆಯಲ್ಲಿ ಪ್ರಾಮಾಣಿಕತೆ ಹಾಗೂ ಪಾರದರ್ಶಕತೆಯನ್ನು ಕಾಯ್ದುಕೊಳ್ಳಲು ಮಾರ್ಗದರ್ಶನ ಹಾಗೂ ಸಲಹೆಗಳನ್ನು ದೊರಕಿಸಿಕೊಡಲು ಮುಂದಾಗಬೇಕು ಎಂದು ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದರು.

ಚುನಾವಣಾ ಪ್ರಕ್ರಿಯೆಗಳಲ್ಲಿನ ಲೋಪದೋಷಗಳು ಅರಾಜಕತೆಗೆ ಕಾರಣವಾಗುತ್ತವೆ. ಇದರ ವಿರುದ್ಧ ಜನಾಭಿಪ್ರಾಯ ರೂಪಿಸುವುದು ಹಾಗೂ ಪಾಲ್ಗೊಳ್ಳುವುದು ಯುವಜನರ ಕರ್ತವ್ಯ ಮತ್ತು ಜವಾಬ್ದಾರಿ. ಇಂದಿನ ಯುವ ಪೀಳಿಗೆ ಪ್ರಜಾಪ್ರಭುತ್ವ ವ್ಯವಸ್ಥೆಯ ಕಾವಲುಗಾರರಾಗದಿದ್ದಲ್ಲಿ ಇಡೀ ವ್ಯವಸ್ಥೆಯೇ ಕುಸಿತಕ್ಕೆ ಒಳಗಾಗುವ ಎಲ್ಲಾ ಲಕ್ಷಣಗಳು ಇವೆ ಎಂದು ಆತಂಕ ವ್ಯಕ್ತಪಡಿಸಿದ ಸಭಾಧ್ಯಕ್ಷರು ಪ್ರಜಾಪ್ರಭುತ್ವವನ್ನು ಸದೃಢಗೊಳಿಸಲು ಸವಾಲುಗಳನ್ನು ಪಟ್ಟಿ ಮಾಡಿ, ಅವುಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಈಗಲೇ ಕ್ರಮ ವಹಿಸಿದಲ್ಲಿ, ಭಾರತ ಸ್ವಾತಂತ್ರ್ಯದ ಶತಮಾನೋತ್ಸವ ಸಂಭ್ರಮದ ವೇಳೆಗೆ ದೇಶವು ಅತ್ಯುತ್ತಮ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಹೊಂದಿದ ರಾಷ್ಟ್ರವಾಗಲಿದೆ.  ಇಲ್ಲವಾದಲ್ಲಿ, ನಾವೆಲ್ಲರೂ ವಿಷವರ್ತುಲದ ಭಾಗವಾಗಿ ಸಮಸ್ಯೆಗಳ ಸುಳಿಯಲ್ಲಿ ಬದುಕುಳಿಯುವ ಪ್ರಯತ್ನ ಮಾಡಬೇಕಾದೀತು ಎಂದು ಎಚ್ಚರಿಸಿದರು.

ಕಾಲೋಚಿತವಾಗಿ ಹಾಗೂ ಯಾಂತ್ರಿಕವಾಗಿ ಚುನಾವಣೆಗಳನ್ನು ನಡೆಸುತ್ತಿರುವ ಚುನಾವಣಾ ಆಯೋಗವು ಕೂಡಾ ಮತ್ತಷ್ಟು ಕ್ರಿಯಾಶೀಲವಾಗಿ ಕಾರ್ಯ ನಿರ್ವಹಿಸಿ, ಜವಾಬ್ದಾರಿಯನ್ನು ಹೆಚ್ಚಿಸಿಕೊಳ್ಳುವ ಅವಶ್ಯಕತೆ ಇದೆ. ಪ್ರಜಾಪ್ರಭುತ್ವ ವ್ಯವಸ್ಥೆಯ ಸುಧಾರಣೆಗೆ ಸ್ವಯಂ ಪ್ರೇರಿತವಾಗಿ ಮತ್ತಷ್ಟು ಶ್ರಮಿಸಿ, ಮುನ್ನಡೆಯುವತ್ತ ದಾಪುಗಾಲು ಹಾಕಬೇಕಿದೆ.

ಸರ್ಕಾರದ ನೀತಿ ನಿರೂಪಣೆ ಮತ್ತು ವಿವೇಚನಾಧಿಕಾರವನ್ನು ಪ್ರಶ್ನಿಸುವ ಹಾಗೂ ಚುನಾವಣಾ ಆಯೋಗದ ಕಾರ್ಯಚಟುವಟಿಕೆ ಮತ್ತು ಕಾರ್ಯವ್ಯಾಪ್ತಿಯನ್ನು ವಿಮರ್ಶಿಸುವ ಹಕ್ಕು ಈ ದೇಶದ ಎಲ್ಲಾ ನಾಗರೀಕರಿಗೆ ಇದೆ.

ಚುನಾವಣಾ ಸಂದರ್ಭದಲ್ಲಿ ಮತ ಚಲಾಯಿಸದೆ ಅಥವಾ ಯಾವುದೇ ಒಂದು ಪಕ್ಷಕ್ಕೆ ಸ್ವಷ್ಟ ಬಹುಮತ ನೀಡದೇ ಇದ್ದರೆ, ಅದು ಮತದಾರರ ಕರ್ತವ್ಯ ಲೋಪವೇ ಎಂಬುದನ್ನು ಆತ್ಮಾವಲೋಕನ ಮಾಡಿಕೊಳ್ಳುವ ಕಾಲ ಸಮೀಪಿಸುತ್ತಿದೆ. ಸದನದ ಒಳಗೂ ಹೊರಗೂ ಎಲ್ಲಾ ಹಂತಗಳಲ್ಲೂ ಇಂತಹ ವಿಷಯಗಳ ಕುರಿತು ಸುದೀರ್ಘ ಚರ್ಚೆಗಳ ಆದಲ್ಲಿ ಮಾತ್ರ ಸಮಾಜದಲ್ಲಿ ಬದಲಾವಣೆ ಅಥವಾ ಪರಿವರ್ತನೆ ತರಲು ಸಾಧ್ಯ ಎಂದು ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ತಮ್ಮ ಅಭಿಪ್ರಾಯಗಳನ್ನು ಹೊರ ಹಾಕಿದರು.

ರಾಜ್ಯ ವಿಧಾನ ಸಭೆಯ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ ಮತ್ತು ವಿಧಾನ ಸಭಾ ಸಚಿವಾಲಯದ ಹಿರಿಯ ಅಧಿಕಾರಿಗಳು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

emedialine

Recent Posts

ಮಣಿಕಂಠ ರಾಠೋಡ ಆರೋಪ ಸತ್ಯಕ್ಕೆ ದೂರ | ಅಕ್ರಮ‌ವಾಗಿ ಅಕ್ಕಿ ಸಾಗಾಟವಾಗಿಲ್ಲ: ಆಹಾರ ಇಲಾಖೆ ಸ್ಪಷ್ಟನೆ

ಕಲಬುರಗಿ: ಕಳೆದ‌ ಅಕ್ಟೋಬರ್ 2 ರಂದು‌ ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…

3 hours ago

ರುಕ್ಮಾಪುರ: ಶ್ರೀ ದೇವಿ ಪಾರಾಯಣ ನಾಳೆಯಿಂದ

ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…

6 hours ago

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

10 hours ago

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

11 hours ago

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

13 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

1 day ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420