ಕಲಬುರಗಿ: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಕೊಟ್ಟಮಾತಿನಂತೆ ಇಂದು ತಳವಾರ ಸಮುದಾಯಕ್ಕೆ ಪರಿಶಿಷ್ಟ ಪಂಗಡದ ಪ್ರಮಾಣಪತ್ರ ನೀಡುವಂತೆ ಆದೇಶ ಮಾಡಿದ್ದಾರೆ. ಸರಕಾರಕ್ಕೆ ತಳವಾರ್ ಸಮಾಜದ ಮುಖಂಡರಾದ ಡಾ. ಸರ್ದಾರ ರಾಯಪ್ಪ ಅಭಿನಂದನೆ ವ್ಯಕ್ತಪಡಿಸಿದ್ದಾರೆ.
ಇದಕ್ಕೆ ಪೂರಕವಾಗಿ ಸಮಾಜಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಎಂಎಲ್ಸಿಗಳಾದ ಎನ್ ರವಿಕುಮಾರ ಅವರು ಸಹಕಾರದಿಂದ ಇಂದು ನಮಗೆ ಪರಿಶಿಷ್ಟ ಪಂಗಡ ಜಾತಿ ಪ್ರಮಾಣ ಪತ್ರ ಸಿಕ್ಕಿದೆ.
ಕೆಲ ಪಟ್ಟಭದ್ರ ಹಿತಾಸಕ್ತಿಗಳ ಕಾರಣದಿಂದಾಗಿ ನಮಗೆ ಪರಿಶಿಷ್ಟ ಪಂಗಡ ಜಾತಿ ಪ್ರಮಾಣಪತ್ರ ಸಿಗುವಲ್ಲಿ ಅನ್ಯಾಯವಾದಾಗ, ಕೇಂದ್ರ ಸರ್ಕಾರ ಆದೇಶದಂತೆ ತಳವಾರರಿಗೆ ಪರಿಶಿಷ್ಟ ಪಂಗಡ ಜಾತಿ ಪ್ರಮಾಣ ಪತ್ರ ನೀಡಬೇಕೆಂದು ಜಿಲ್ಲಾಧಿಕಾರಿ ಕಚೇರಿ ಎದುರುಗಡೆ ಮೂರು ತಿಂಗಳುಗಳ ಧರಣಿ ಸತ್ಯಾಗ್ರಹ ಮಾಡಿದ್ದೆವು ಅದರ ಪ್ರತಿಫಲದಿಂದ ಇಂದು ನಮಗೆ ಜಯ ಸಿಕ್ಕಿದೆ. ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಕೊತ್ಲಪ್ಪಮುತ್ತೆ, ರಾಜೇಂದ್ರ ರಾಜವಾಳ, ಶಿವಪ್ಪ ಗಾಣೂರ, ಮಹಾರಾಯ ಅಗಸಿ, ಬೆಳ್ಯಪ್ಪ ಖಣದಾಳ, ರವಿ ಗೊಳಾ ಶಾಬಾದ್, ಬಾಬು ಗೌಡ ಮಾಲಿ ಪಾಟೀಲ್ ಸೇರಿದಂತೆ ಹಲವರು ಹರ್ಷ ವ್ಯಕ್ತಪಡಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…