ಬಿಸಿ ಬಿಸಿ ಸುದ್ದಿ

ಶ್ರೀಗಿರಿ ಮಠದ ಕಾರ್ಯ ಶ್ಲಾಘನೀಯವಾಗಿದೆ: ರಾಜುಗೌಡ ಶಾಸಕ

ಸುರಪುರ: ನಮ್ಮ ಭಾಗದಲ್ಲಿನ ಸಮಾಜಮುಖಿ ಕಾರ್ಯ ಮಾಡುತ್ತಿರುವ ಮಠಗಳಲ್ಲಿ ಶ್ರೀಗಿರಿ ಮಠವು ಒಂದಾಗಿದ್ದು,ಶ್ರೀ ಮಠದ ಕಾರ್ಯಗಳು ಶ್ಲಾಘನೀಯವಾಗಿವೆ ಎಂದು ಕರ್ನಾಟಕ ನಗರ ನೀರು ಸರರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷರು ಹಾಗು ಶಾಸಕರಾದ ನರಸಿಂಹ ನಾಯಕ (ರಾಜುಗೌಡ) ಮೆಚ್ಚುಗೆ ವ್ಯಕ್ತಪಡಿಸಿದರು.

ಲಕ್ಷ್ಮೀಪುರ ಬಿಜಾಸಪುರ ಮರಡಿ ಮಲ್ಲಿಕಾರ್ಜುನ ದೇವಸ್ಥಾನದ ಜಾತ್ರಾ ಮಹೋತ್ಸವದ ಅಂಗವಾಗಿ ಶ್ರೀಗಿರಿ ಮಠದ ಆವರಣದಲ್ಲಿ ಹಮ್ಮಿಕೊಂಡಿರುವ ಅಬ್ಬೆತುಮಕೂರ ಸಿದ್ಧಿ ಪುರುಷ ವಿಶ್ವರಾಧ್ಯರ ಪುರಾಣ ಪ್ರವಚನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ,ಶ್ರೀಮಠದ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ನಿರಂತರವಾಗಿ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಭಕ್ತರ ಜಾಗೃತಿ ಹಾಗು ಸಮಾಜದ ಅಭಿವೃಧ್ಧಿಗೆ ಶ್ರಮಿಸುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದರು.ಅಲ್ಲದೆ ಇದೇ ಸಂದರ್ಭದಲ್ಲಿ ಶ್ರೀಮಠಕ್ಕೆ ೧ ಲಕ್ಷ ರೂಪಾಯಿಗಳ ದೇಣಿಗೆ ನೀಡುವುದಾಗಿ ತಿಳಿಸಿದರು.

ಕಾರ್ಯಕ್ರಮದ ಸಾನಿಧ್ಯವಹಿಸಿದ್ದ ಶ್ರೀಮಠದ ಚೆನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ,ಶ್ರೀಮಠದ ಎಲ್ಲಾ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮೂಲಕ ಶಾಸಕರು ನಮ್ಮೆಲ್ಲ ಕಾರ್ಯಕ್ರಮಗಳಿಗೆ ಬೆಂಬಲವಾಗಿದ್ದಾರೆ.ಅಲ್ಲದೆ ಕೋವಿಡ್ ಸಂದರ್ಭದಲ್ಲಿ ಶಾಸಕರು ಉತ್ತಮವಾಗಿ ಕೆಲಸ ಮಾಡುವ ಮೂಲಕ ಜನರ ಮೆಚ್ಚುಗೆಯನ್ನೂ ಗಳಿಸಿದ್ದಾರೆ.ಅವರ ಕಾರ್ಯಗಳು ಹಾಗೆಯೇ ಮುಂದುವರೆಸಲು ಮರಡಿ ಮಲ್ಲಿಕಾರ್ಜುನ ಹಾಗು ಮೂಕಪ್ಪಜ್ಜನವರ ಆಶೀರ್ವಾದ ಸದಾ ಅವರ ಮೇಲಿರಲಿ ಎಂದು ಆಶಿಸುವುದಾಗಿ ತಿಳಿಸಿದರು.

ನಂತರ ಇದೇ ಸಂದರ್ಭದಲ್ಲಿ ಶ್ರೀಮಠದ ಜಿ.ಪಂ ಮಾಜಿ ಅಧ್ಯಕ್ಷ ರಾಜಾ ಹನುಮಪ್ಪ ನಾಯಕ (ತಾತಾ) ೨೫ ಸಾವಿರ,ಆರ್.ಎಮ್.ರೇವಡಿ ೨೧ ಸಾವಿರ, ಬಾಬುಗೌಡ ಪಾಟೀಲ್ ಅಗತೀರ್ಥ ೧೧ ಸಾವಿರ ರೂಪಾಯಿಗಳ ದೇಣಿಗೆ ನೀಡುವುದಾಗಿ ತಿಳಿಸಿದರು.ನಂತರ ಹೋರಾಟಗಾರ್ತಿ ರೂಪಾ ಶ್ರೀನಿವಾಸ ನಾಯಕ ಮಾತನಾಡಿ ಶ್ರೀಮಠದ ಕಾರ್ಯಗಳನ್ನು ಶ್ಲಾಘೀಸಿ ಮಾತನಾಡಿದರು.ವೇದಿಕೆ ಮೇಲೆ ವಿವಿಧ ಮಠಾಧೀಶರು ಹಾಗು ಟಿಹೆಚ್‌ಓ ಡಾ:ಆರ್.ವಿ.ನಾಯಕ,ಮುಖಂಡರಾದ ಬಿ.ಎಮ್.ಹಳ್ಳಿಕೋಟಿ,ಬಸವರಾಜ ಬೂದಿಹಾಳ,ಮಲ್ಲಿಕಾರ್ಜುನರಡ್ಡಿ ಅಮ್ಮಾಪುರ ಸೇರಿದಂತೆ ಅನೇಕ ಮುಖಂಡರು ಹಾಗು ಭಕ್ತರು ಭಾಗವಹಿಸಿದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

13 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

23 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

23 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

23 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago