ರಬಕವಿ-ಬನಹಟ್ಟಿ: ರಾಯಚೂರಿನ ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನಿಸಿದ್ದು ಖಂಡಿಸಿ ಇದೇ 31 ರಂದು ರಬಕವಿ ಬನಹಟ್ಟಿ ತಾಲ್ಲೂಕು ಸಂಪೂರ್ಣ ಬಂದ್ ಗೆ ಕರೆಯನ್ನು ನೀಡಲಾಗಿದೆ ಎಂದು ಮುಖಂಡರಾದ ಶಿವಲಿಂಗ ಗೊಂಬಿಗುಡ್ಡ ಮತ್ತು ರಾಜು ಸರಿಕರ್ ತಿಳಿಸಿದರು.
ಅವರು ಭಾನುವಾರ ಬನಹಟ್ಟಿಯ ನಿರೀಕ್ಷಣಾ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡರನ್ನು ಕೂಡಲೇ ಸೇವೆಯಿಂದ ವಜಾ ಮಾಡಬೇಕು ಎಂದು ಆಗ್ರಹಿಸಿ ರಬಕವಿಯ ಹೊಸ ಬಸ್ ನಿಲ್ದಾಣದಿಂದ ಬನಹಟ್ಟಿಯ ಗಾಂಧಿ ಸರ್ಕಲ್ ವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗುವುದು. ಬೆಳಗ್ಗೆ 7 ರಿಂದ ಸಂಜೆ 5 ರವರೆಗೆ ಎಲ್ಲ ಅಂಗಡಿ ಮುಗ್ಗಟ್ಟಗಳನ್ನು ಬಂದ್ ಮಾಡಲಾಗುವುದು. ಅದೇ ರೀತಿಯಾಗಿ ಸಂಚಾರವನ್ನು ಕೂಡಾ ಬಂದ್ ಮಾಡಲಾಗುವುದು ಎಂದು ಮುಖಂಡರು ತಿಳಿಸಿದರು.
ಈ ಸಂದರ್ಭದಲ್ಲಿ ದಲಿತ ಸಂಘರ್ಷ ಸಮಿತಿಗಳು, ಪ್ರಗತಿಪರ ಸಂಘಟನೆಗಳ ಒಕ್ಕೂಟ, ಕರವೇ, ಅಟೊ ಚಾಲಕರ ಸಂಘ, ಅಲ್ಪ ಸಂಖ್ಯಾತರ ಘಟಕ ಸೇರಿದಂತೆ ಅನೇಕ ಸಂಘಟನೆಗಳು ಪ್ರತಿಭಟನೆಯಲ್ಲಿ ಭಾಗವಹಿಸಲಿವೆ ಶಿವಲಿಂಗ ಗೊಂಬಿಗುಡ್ಡ ತಿಳಿಸಿದರು.
ಈ ಸಂದರ್ಭದಲ್ಲಿ ಪ್ರಭಾಕರ ಚಲಾವಾದಿ, ಸುನೀಲ ಹರಿಜನ, ಶಿವಾನಂದ ಕಾಂಬಳೆ ಮತ್ತು ಶ್ರೀಧರ ಕಿತ್ತೂರ ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…