ಬಿಸಿ ಬಿಸಿ ಸುದ್ದಿ

ಪಂಚ ರಾಜ್ಯಗಳ ಚುನಾವಣೆ ಭಯದಿಂದ ಕೇಂದ್ರ ಕಾಯ್ದೆ ಹಿಂಪಡೆದಿದೆ: ಸತೀಶ್ ಜಾರಕಿಹೊಳಿ

ಗೋಕಾಕ : ‘ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಹೊಡೆತ ಬೀಳುವುದು ನಿಶ್ಚಿತ ಎನ್ನುವುದನ್ನು ಅರಿತು ಕೇಂದ್ರ ಸರ್ಕಾರವು ರೈತ ವಿರೋಧಿಯಾಗಿದ್ದ ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯಿತು’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಆರೋಪಿಸಿದರು.

ಇಲ್ಲಿನ ಅವರ ಗೃಹ ಕಚೇರಿ ‘ಹಿಲ್ ಗಾರ್ಡನ್’ ಆವರಣದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಪುಣ್ಯಸ್ಮರಣೆ ನಿಮಿತ್ತ ಭಾನುವಾರ ಹಮ್ಮಿಕೊಂಡಿದ್ದ ಅಲ್ಪಸಂಖ್ಯಾತರ ಸಮಾವೇಶದಲ್ಲಿ ಗಾಂಧೀಜಿ ಫೋಟೊಗೆ ಪೂಜೆ ಸಲ್ಲಿಸಿ ಅವರು ಮಾತನಾಡಿದರು.

‘ಉತ್ತರ ಪ್ರದೇಶದಲ್ಲಿ ಬಿಜೆಪಿ ಜನಪ್ರಿಯತೆ ಕುಸಿದಿರುವ ಬಗ್ಗೆ ತಿಳಿದು ಕಾಯ್ದೆಗಳನ್ನು ರದ್ದುಪಡಿಸಿದರೂ ಮತ್ತೆ ಕುತಂತ್ರ ನಡೆಸುವ ಮೂಲಕ ಬಿಜೆಪಿ ಸರ್ಕಾರ ಮತ್ತೆ ಮಾಡಬಹುದು. ಹೀಗಾಗಿ ಎಚ್ಚರ ವಹಿಸಬೇಕು’ ಎಂದು ತಿಳಿಸಿದರು.

‘ಮುಸ್ಲಿಮರನ್ನು ಕೆರಳಿಸುವ ಕೆಲಸ ಸಾಮಾಜಿಕ ಜಾಲತಾಣದಲ್ಲಿ ಮುಂದುವರಿದಿದೆ. ಅದಕ್ಕೆ ಪ್ರತಿಕ್ರಿಯಿಸದೆ ಪರಿಶೀಲನೆ ನಡೆಸಬೇಕು. ಸಮಾಜದಲ್ಲಿ ಶಾಂತಿ ಕದಡುವ ಕೆಲಸಕ್ಕೆ ಸಮಯ ವ್ಯರ್ಥ ಮಾಡದೆ ಆರ್ಥಿಕವಾಗಿ ಪ್ರಗತಿ ಸಾಧಿಸಲು ನಿರಂತರ ಯತ್ನಗಳನ್ನು ಮುಂದುವರಿಸಬೇಕು’ ಎಂದು ಕಿವಿಮಾತು ಹೇಳಿದರು.

‘ಬಿಜೆಪಿಯು ಸದಾ ಶ್ರೀಮಂತರ ಪರ ಕೆಲಸ ಮಾಡುತ್ತಿದೆ. ಹಿಂದುಳಿದವರು, ಅಲ್ಪಸಂಖ್ಯಾತರು ಆ ಪಕ್ಷದ ಕುತಂತ್ರಕ್ಕೆ ಬಲಿಯಾಗಬಾರದು. ಈ ಬಗ್ಗೆ 3-4 ದಿನಗಳ ತರಬೇತಿ ನೀಡಿ ಕಾಂಗ್ರೆಸ್‌ನಿಂದ ಜಾಗೃತಿ ಮೂಡಿಸಲಾಗುವುದು’ ಎಂದರು.

ಕಾಂಗ್ರೆಸ್ ಮುಖಂಡ ಆಶೋಕ ಪೂಜಾರಿ, ‘ಧರ್ಮ ಇದ್ದರೆ ಮಾತ್ರ ದೇಶ ಎನ್ನುವ ವಾತಾವರಣವನ್ನು ನಾವಿಂದು ಕಾಣುತ್ತಿದ್ದೇವೆ. ಇದು ಅಪಾಯಕಾರಿ ಬೆಳವಣಿಗೆ. ಇದನ್ನು ತಡೆಯಲು ಜನರು ಕಾಂಗ್ರೆಸ್ ಬೆಂಬಲಿಸಬೇಕು’ ಎಂದು ಕೋರಿದರು.

ಮುಖಂಡರಾದ ಪ್ರಕಾಶ ಹುಕ್ಕೇರಿ, ಯುವ ನಾಯಕ ರಾಹುಲ ಜಾರಕಿಹೊಳಿ, ಕಲ್ಪನಾ ಜೋಶಿ, ನಜೀರ ಶೇಖ್, ತನ್ವೀರ್ ಶೇಮಶೇರ್, ಅಮೀದ್ ನಾಡವಾಲೆ, ಇಮ್ರಾನ್ ತಪಕೀರ್, ಮುಂಜುರ್ ಶಮ್ಮಶೇರ, ಶಬ್ಬೀರ ಮುಜಾವರ, ಮೊಹಶೀನ ಖೋಜಾ, ತೌಫೀಕ್ ಮುಲ್ಲಾ, ತಬಸುಮ್ ಮುಲ್ಲಾ, ನಶೀಮಾ ಬುಡ್ಡನ್ನವರ, ಎಚ್.ಡಿ. ಮುಲ್ಲಾ, ಇಮ್ರಾನ್ ಶೇಖ, ತಾಹೀರ ಪೀರಜಾದೆ, ಆರೀಫ್ ಪೀರಜಾದೆ, ಪ್ರಕೃತಿ ದೊಡಮನಿ ಪಾಲ್ಗೊಂಡಿದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

5 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

15 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

15 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

15 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago