ಕಲಬುರಗಿ: ಜಿಲ್ಲೆಯಲ್ಲೂ ಗ್ರಾಮ ಒನ್ ಕೇಂದ್ರಗಳನ್ನು ಆರಂಭಿಸಬೇಕು ಎಂಬ ಶಾಸಕ ಬಸವರಾಜ ಮತ್ತಿಮಡು ಅವರ ಮನವಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ಪಂದಿಸಿದ್ದು, ಮುಖ್ಯಮಂತ್ರಿಗಳ ಉಪ ಕಾರ್ಯದರ್ಶಿ ಅವರು ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದು, ಕಲಬುರಗಿಯಲ್ಲಿ ಗ್ರಾಮ ಒನ್ ಕೇಂದ್ರ ಆರಂಭಕ್ಕೆ ಕ್ರಮ ಕೈಗೊಳ್ಳಲು ನಿರ್ದೇಶಿಸಿದ್ದಾರೆ.
ರಾಜ್ಯದ ೧೨ ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಆರಂಭಿಸಲು ಗಣರಾಜ್ಯೋತ್ಸವದಂದು ಮುಖ್ಯಮಂತ್ರಿ ಚಾಲನೆ ನೀಡಿದ್ದರು. ಆದರೆ ಕಲಬುರಗಿ ಜಿಲ್ಲೆಯಲ್ಲಿ ಇದು ಅತ್ಯವಶ್ಯವಾಗಿದ್ದು, ಕೂಡಲೇ ಜಿಲ್ಲೆಗೂ ಈ ಯೋಜನೆಯನ್ನು ವಿಸ್ತರಿಸಬೇಕು ಎಂದು ಜ.೨೦ರಂದು ಶಾಸಕ ಬಸವರಾಜ ಮತ್ತಿಮಡು ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.
ಸ್ಪಂದಿಸಿರುವ ಮುಖ್ಯಮಂತ್ರಿಗಳು ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ನಿರ್ದೇಶನ ನೀಡಿದ್ದು, ಶೀಘ್ರದಲ್ಲಿ ಜಿಲ್ಲೆಯಲ್ಲೂ ಗ್ರಾಮ ಒನ್ ಕೇಂದ್ರ ಆರಂಭವಾಗಲಿದೆ. ಮನವಿಗೆ ಸ್ಪಂದಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಶಾಸಕ ಬಸವರಾಜ ಮತ್ತಿಮಡು ಧನ್ಯವಾದಗಳನ್ನು ತಿಳಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…