ಬಿಸಿ ಬಿಸಿ ಸುದ್ದಿ

ಅಧಿಕಾರಿಗಳು ಬರುವ ಸಭೆಯೊಳಗೆ ಸಮಸ್ಯೆ ಪರಿಹರಿಸದಿದ್ದರೆ ಕ್ರಮ: ರಾಜುಗೌಡ

ಸುರಪುರ: ಇಂದಿನ ಸಭೆಯಲ್ಲಿ ಸಲ್ಲಿಕೆಯಾಗಿರುವ ಅರ್ಜಿಗಳಿಗೆ ಸಂಬಂಧಿಸಿದಂತೆ ಸಂಬಂಧಿಸಿದ ಅಧಿಕಾರಿಗಳು ಅರ್ಜಿ ವಿಲೇವಾರಿಗೆ ಕ್ರಮವಹಿಸಿ,ಮುಂಬರುವ ಸಭೆಯೊಳಗೆ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದಿದ್ದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ನರಸಿಂಹ ನಾಯಕ (ರಾಜುಗೌಡ) ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ನಗರದ ತಹಸೀಲ್ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಾರ್ವಜನಿಕರ ಕುಂದು ಕೊರತೆ ಸಭೆಯಲ್ಲಿ ಸಾರ್ವಜನಿಕರ ಅರ್ಜಿಗಳಿಗೆ ಸಂಬಂಧಿಸಿ ಮಾತನಾಡಿ,ಈ ಮುಂದೆ ಪ್ರತಿ ತಿಂಗಳು ಸಭೆಯನ್ನು ನಡೆಸಲಾಗುವುದು,ಅಧಿಕಾರಿಗಳು ಇಂದು ಸಲ್ಲಿಕೆಯಾಗಿರುವ ಅರ್ಜಿಗಳು ಆಯಾ ಇಲಾಖೆಗೆ ರವಾನಿಸಲಾಗುತ್ತದೆ,ಸಂಬಂಧಿಸಿದ ಅಧಿಕಾರಿಗಳು ಇದನ್ನು ಗಂಭೀರವಾಗಿ ಪರಿಗಣಿಸಿ ಮುಂಬರುವ ಸಭೆಯೊಳಗೆ ಅರ್ಜಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನಸಿ,ಒಂದು ವೇಳೆ ಸಾಧ್ಯವಾಗದ ಸಮಸ್ಯೆಗಳಿದ್ದರೆ ಅದಕ್ಕೆ ಕಾರಣ ತಿಳಿಸಿ ಹಿಂಬರ ನೀಡುವಂತೆ ತಿಳಿಸಿದರು.

ಇಂದಿನ ಸಭೆಯಲ್ಲಿ ಒಟ್ಟು ೭೦ ಅರ್ಜಿಗಳು ಸಲ್ಲಿಕೆಯಾಗಿದ್ದು ಅದರಲ್ಲಿ ಗಂಭೀರ ಸಮಸ್ಯೆಗಳ ಕುರಿತಾದ ಅರ್ಜಿಗಳನ್ನು ಬೇರೆಯಾಗಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು.ಅಲ್ಲದೆ ಕಂದಾಯ ಇಲಾಖೆಯಲ್ಲಿ ಹೆಚ್ಚು ಸರ್ವೇಗೆ ಸಂಬಂಧಿಸಿದ ಅರ್ಜಿಗಳಿದ್ದು ಸಾವಿರಕ್ಕೂ ಹೆಚ್ಚು ಸರ್ವೇ ಅರ್ಜಿಗಳು ಬಾಕಿಯಿದ್ದು ಕಂದಾಯ ಸಚಿವರನ್ನು ಭೇಟಿ ಮಾಡಿ ಹೆಚ್ಚಿನ ಸರ್ವೇಯರ್ ನೇಮಿಸಲು ಮನವಿ ಮಾಡುವುದಾಗಿ ತಿಳಿಸಿದರು.ಕಂದಾಯ ಮತ್ತು ಸಬ್ ರಿಜಿಸ್ಟ್ರಾರ್ ಇಲಾಖೆಯಲ್ಲಿ ಹೆಚ್ಚಿನ ಭ್ರಷ್ಟಾಚಾರದ ಮಾತುಗಳು ಕೇಳಿ ಬರುತ್ತಿವೆ,ಸೂಕ್ಷ್ಮವಾಗಿ ಪರಿಶೀಲನೆ ನಡೆಸಿ ತಪ್ಪು ಕಂಡುಬಂದಲ್ಲಿ ಕ್ರಿಮಿನಲ್ ಕೇಸ್ ದಾಖಲಿಸಲಾಗುವುದು ಎಂದರು.ಇನ್ನೂ ಅಂಗವಿಕರಿಗೆ ಗ್ರಾಮ ಪಂಚಾಯತಿ ಅನುದಾನದಲ್ಲಿ ಪ್ರತಿಶತ ೫ ರಷ್ಟು ಮೀಸಲಿರಿಸಲು ತಿಳಿಸಿದರು.

ಇದೇ ಸಂದರ್ಭದಲ್ಲಿ ವಿವಿಧ ಗ್ರಾಮಗಳಿಂದ ಅನೇಕ ಜನರು ಆಗಮಿಸಿ ಜೆಸ್ಕಾಂ ಇಲಾಖೆ,ಕಂದಾಯ ಇಲಾಖೆ,ನೀರಾವರಿ,ಉದ್ಯೋಗ ಖಾತ್ರಿ ಕೂಲಿ ಹಣ,ಆಶ್ರಯ ಮನೆ ಸೇರಿದಂತೆ ೭೦ ಅರ್ಜಿಗಳು ಸಲ್ಲಿಕೆಯಾದವು.ಇದೇ ಸಂದರ್ಭದಲ್ಲಿ ರೈತ ಹೋರಾಟಗಾರ ಮಲ್ಲಿಕಾರ್ಜುನ ಸತ್ಯಂಪೇಟೆ ಶಾಸಕರನ್ನು ಭೇಟಿ ಮಾಡಿ ತಹಸೀಲ್ ಕಚೇರಿಯಲ್ಲಿ ವಿದ್ಯುತ್ ಇಲ್ಲದಾಗ ಪಹಣಿ ಪಡೆಯಲು ತೊಂದರೆಯಿದೆ.ಆದ್ದರಿಂದ ಜನರೇಟರ್ ವ್ಯವಸ್ಥೆ ಹಾಗು ಪಹಣಿ ವಿತರಣೆಗೆ ಮತ್ತು ಆಧಾರ ಕಾರ್ಡ್ ಮಾಡಿಕೊಡಲು ಇನ್ನೊಂದು ಕೌಂಟರ್ ಆರಂಭಿಸುವಂತೆ ಮತ್ತು ನಗರಸಭೆಯಲ್ಲಿ ಕೆಲಸಗಳು ವಿಳಂಭವಾಗುತ್ತಿದ್ದು ಕ್ರಮಕ್ಕೆ ಮನವಿ ಮಾಡಿದರು.

ವೇದಿಕೆ ಮೇಲೆ ತಹಸೀಲ್ದಾರ್ ಸುಬ್ಬಣ್ಣ ಜಮಖಂಡಿ,ಹುಣಸಗಿ ತಹಸೀಲ್ದಾರ್ ಅಶೋಕ ಸುರಪುರಕರ್,ತಾ.ಪಂ ಇಒ ಅಮರೇಶ ಮೂಡಲದಿನ್ನಿ ಹಾಗು ಸಭೆಯಲ್ಲಿ ಟಿಹೆಚ್‌ಒ ಡಾ:ಆರ್.ವಿ.ನಾಯಕ,ನಗರಸಭೆ ಪೌರಾಯುಕ್ತ ಜೀವನಕುಮಾರ್ ಕಟ್ಟಿಮನಿ,ಬಿಇಒ ಮಹಾದೇವರಡ್ಡಿ,ಅಕ್ಷರದಾಸೋಹ ಎಡಿ ಮೌನೇಶ ಕಂಬಾರ,ಸಿಡಿಪಿಒ ಲಾಲಸಾಬ್ ಪೀರಾಪುರ,ಸಮಾಜ ಕಲ್ಯಾಣ ಇಲಾಖೆ ಎಡಿ ಸತ್ಯನಾರಾಯಣ ದರಬಾರಿ,ಬಿಸಿಎಮ್ ಅಧಿಕಾರಿ ತಿಪ್ಪಾರಡ್ಡಿ ಸೇರಿದಂತೆ ಎಲ್ಲಾ ಇಲಾಖೆಗಳು ಅಧಿಕಾರಿಗಳು ಹಾಜರಿದ್ದರು.

ಅಂಗವಿಕಲರಿಗಾಗಿ ಗ್ರಾಮ ಪಂಚಾಯತಿ ಹಾಗು ಇತರೆ ಸ್ಥಳಿಯ ಸಂಸ್ಥೆಗಳಲ್ಲಿ ಮನೆಗಳ ಹಂಚಿಕೆ ಮಾಡುವಾಗ ಪ್ರತಿಶತ ೫ ರಷ್ಟು ಮನೆಗಳು ಮೀಸಲಿರಿಸಲು ಕ್ರಮ ಕೈಗೊಳ್ಳಲು ವಸತಿ ಸಚಿವರಾದ ವಿ.ಸೋಮಣ್ಣ ಅವರಿಗೆ ಮನವಿ ಸಲ್ಲಿಸಲಾಗುವುದು- ರಾಜುಗೌಡ ಶಾಸಕ
emedialine

Recent Posts

ಸಂವಿಧಾನ ಸಮರ್ಪಣಾ ದಿನದ ಅಂಗವಾಗಿ ಸಂವಿಧಾನ ಓದು ಕಾರ್ಯಕ್ರಮ

ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…

2 hours ago

ಶೋಷಿತ ಜನಜಾಗೃತಿ ವೇದಿಕೆ ವತಿಯಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ಮನವಿ

ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…

2 hours ago

ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರು: ಡಾ. ಎಸ್.ಎಸ್. ಗುಬ್ಬಿ ಬೇಸರ

ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…

2 hours ago

ಹಣೆಯ ಮೇಲೆ ಹಚ್ಚಿದ ವಿಭೂತಿ ಆತ್ಮವಿಶ್ವಾಸ ಹೆಚ್ಚಿಸುತ್ತದೆ: ಅರ್ಪಿತಾ ಪಾಟೀಲ

ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…

2 hours ago

ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಸಂವಿಧಾನ ದಿನ ಆಚರಣೆ

ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…

2 hours ago

ಸಂವಿಧಾನವನ್ನು ರಕ್ಷಿಸಲು ಜವಾಬ್ದಾರಿ ಯುವಕರು ಮೇಲಿದೆ : ಹಿರಿಯ ವಕೀಲ ವೈಜನಾಥ ಎಸ್ ಝಳಕಿ

ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…

2 hours ago