ಉಡುಪಿ : ಉಡುಪಿ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಿಜಾಬ್ ಗೆ ನಿರ್ಭಂದಿಸಿದ್ದು, ಸುಮಾರು ಒಂದು ತಿಂಗಳಿನಿಂದ ಹೋರಾಟನಿರತ ವಿದ್ಯಾರ್ಥಿಗಳು ಇಂದು ಮತ್ತೆ ಹಿಜಾಬ್ ಧರಿಸಿಯೇ ಕಾಲೇಜು ಪ್ರವೇಶಿಸಿದ್ದಾರೆ.
ನಿನ್ನೆಯ ದಿನ ಶಾಸಕ ರಘುಪತಿ ಭಟ್ ಮಾಧ್ಯಮದವರ ಮುಂದೆ “ಹಿಜಾಬ್ ಧರಿಸಿ ಕಾಲೇಜು ಆವರಣದೊಳಗೆ ವಿದ್ಯಾರ್ಥಿಗಳು ಬರಬಾರದು” ಎಂದು ಹೇಳಿಕೆ ನೀಡಿದ್ದರು. ಇದನ್ನೇ ಸವಾಲಾಗಿ ಸ್ವೀಕರಿಸಿ ನಿನ್ನೆಯ ದಿನವೇ ಹೋರಾಟ ನಿರತ ವಿದ್ಯಾರ್ಥಿನಿ ಆಲಿಯಾ ಅಸ್ಸಾದಿ ಟ್ವೀಟ್ ಮಾಡಿ “ಧಾರ್ಮಿಕ, ಸಾಂವಿಧಾನಿಕ ಹಕ್ಕಾದ ಹಿಜಾಬ್ ಧರಿಸಿಯೇ ಕಾಲೇಜಿಗೆ ಬರುತ್ತೇವೆ.
ಅದು ನಾವು ತೆರಿಗೆ ಪಾವತಿಸುವ ಸರ್ಕಾರಿ ಕಾಲೇಜು. ಯಾರು ಕೂಡ ಹಸ್ತಕ್ಷೇಪ ಮಾಡುವ ಅವಶ್ಯಕತೆಯಿಲ್ಲ. ಬೆದರಿಕೆಗಳಿಂದ ನಮ್ಮ ನ್ಯಾಯಪರ ಹೋರಾಟವನ್ನು ಹತ್ತಿಕ್ಕಲು ಸಾಧ್ಯವಿಲ್ಲ.” ಎಂದು ತಿರುಗೇಟು ನೀಡಿದ್ದರು. ಅದರಂತೆಯೇ ಇಂದು ಕಾಲೇಜಿಗೆ ಬಂದ ಆರು ವಿದ್ಯಾರ್ಥಿನಿಯರನ್ನು ಮತ್ತೆ ತರಗತಿಗಳಿಂದ ಹೊರ ಹಾಕಿದ್ದಾರೆ.
ನಾವು ಮಾನಸಿಕವಾಗಿ ತೀರ ನೊಂದು ಕೊಂಡಿದ್ದೇವೆ, ಒಂದು ತಿಂಗಳಿನಿಂದ ಹೋರಾಟ ನಿರತರಾಗಿದ್ದೇವೆ, ನ್ಯಾಯದ ಭರವಸೆಯಲ್ಲಿದ್ದೇವೆ. ನಿನ್ನೆಯ ದಿನ ಶಾಸಕ ರಘುಪತಿ ಭಟ್ ರವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಮ್ಮನ್ನು ಹೀಯಾಳಿಸಿ, ಬೈದು ನಮ್ಮ ಕಣ್ಣಲ್ಲಿ ಕಣ್ಣೀರು ಬರಿಸಿದ್ದಾರೆ. ಎಲ್ಲದಕ್ಕೂ ಕಾನೂನಿನ ಮುಖಾಂತರ ಉತ್ತರ ನೀಡಲಿದ್ದೇವೆ” ಎಂದು ವಿದ್ಯಾರ್ಥಿನಿಯರು ತಿಳಿಸಿದ್ದಾರೆ.
ಕಾಲೇಜು ಆವರಣದೊಳಗೆ ಮಾಧ್ಯಮಗಳಿಗೆ ನಿರ್ಭಂದ ವಿಧಿಸಿದ್ದು, ಪೋಲಿಸ್ ಬಂದೋಬಸ್ತು ಬಿಗಿಗೊಳಿಸಲಾಗಿದೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…