ಸಾವಿತ್ರಿಬಾಯಿ ಫುಲೆ ಅಧ್ಯಯನ ಪೀಠ ಸ್ಥಾಪನೆಗೆ ಒತ್ತಾಯ

0
114

ಕಲಬುರಗಿ: ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ಅಕ್ಷರದವ್ವ ಮಾತೆ ಸಾವಿತ್ರಾಬಾಯಿ ಫುಲೆ ಅವರ ಅಧ್ಯಯನ ಪೀಠ ಸ್ಥಾಪಿಸಬೇಕು ಎಂದು ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ರಾಜ್ಯಧ್ಯಕ್ಷೆ ಡಾ ಲತಾ ಮುಳ್ಳೂರ ಅವರು ಸರ್ಕಾರಕ್ಕೆ ಒತ್ತಾಯಿಸಿದರು.

ನಗರದ ಜೇವರ್ಗಿ ಕಾಲೋನಿಯ ಸಮಗ್ರ ಕರ್ನಾಟಕ ಉಪಾಧ್ಯಾಯರ ಪ್ರಗತಿಪರ ಸಂಘದ(ಸ್ಕೂಪ್ಸ್) ಕಚೇರಿಯಲ್ಲಿ ಏರ್ಪಡಿಸಿದ ಕಾರ್ಯಕ್ರಮದಲ್ಲಿ ಸತ್ಕಾರ ಸ್ವೀಕರಿಸಿ ಅವರು ಮಾತನಾಡಿದರು.

Contact Your\'s Advertisement; 9902492681

ಈ ಹಿಂದೆ ಅನೇಕ ಸಲ ಅಧ್ಯಯನ ಪೀಠ ಸ್ಥಾಪನೆ ಹಾಗೂ ಸರ್ಕಾರದ ವತಿಯಿಂದಲೇ ಜಯಂತಿ ಆಚರಿಸಬೇಕು ಎಂದು ಮನವಿ ಮಾಡಲಾಗಿತ್ತು. ಸಂಘದ ಈ ಬೇಡಿಕೆಗಳಲ್ಲಿ ಒಂದನ್ನು ಈಡೇರಿಸಲಾಗಿದೆ. ಬರುವ ದಿನಗಳಲ್ಲಿ ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಸಾವಿತ್ರಿಬಾಯಿ ಅಧ್ಯಯನ ಪೀಠ ಸ್ಥಾಪಿಸಬೇಕು. ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಬೇಡಿಕೆ ಮಂಡಿಸಲಾಗುತ್ತದೆ ಎಂದರು.

ಮಹಿಳಾ ನೌಕರರನ್ನು ಇತರ ಸರ್ಕಾರಿ ಸಂಘ ಸಂಸ್ಥೆಗಳಲ್ಲಿ ಹೆಚ್ಚಿನ ಪ್ರಾತಿನಿಧ್ಯ ಸಿಗಬೇಕು. ಸಮಾನತೆಯ ಹಕ್ಕುಗಳಿಗಾಗಿ ಹೋರಾಟ ಕೈಗೊಳ್ಳಲಾಗುವುದು ಎಂದರು. ಸಮಗ್ರ ಕರ್ನಾಟಕ ಉಪಾಧ್ಯಾಯರ ಪ್ರಗತಿಪರ ಸಂಘದ ರಾಜ್ಯಧ್ಯಕ್ಷ ಗುರುಪಾದ ಕೋಗನೂರ ಅಧ್ಯಕ್ಷತೆ ವಹಿಸಿ, ಸಂಘದ ಕಾರ್ಯ ಚಟುವಟಿಕೆಗಳ ಕುರಿತು ವಿವರಿಸಿದರು.

ಸಾವಿತ್ರಿಬಾಯಿ ಫುಲೆ ಸಂಘದ ಜಿಲ್ಲಾಧ್ಯಕ್ಷೆ ಸೇವಂತಾ ಚವ್ಹಾಣ, ಪ್ರಧಾನ ಕಾರ್ಯದರ್ಶಿ ಸಾವಿತ್ರಿ ಪಾಟೀಲ, ಲಲಿತಾ ದೇಸಾಯಿ, ಸ್ಕೂಪ್ಸ್ ರಾಜ್ಯ ಉಪಾಧ್ಯಕ್ಷ ಧರ್ಮಣ್ಣ ಎಚ್ ಧನ್ನಿ, ಮುಖಂಡರಾದ ವೆಂಕಟರೆಡ್ಡಿ ಕರೆಡ್ಡಿ, ಜಾಕೀರ ಹುಸೇನ ಕುಪನೂರ, ಪ್ರೇಮಸಿಂಗ ಚವ್ಹಾಣ ಭಾಗವಹಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here