ದೂರದೃಷ್ಠಿಯ ಕೇಂದ್ರ ಬಜೆಟ್: ಶಾಸಕ ಸುಭಾಷ್ ಆರ್ ಗುತ್ತೇದಾರ

0
8

ಆಳಂದ: ಕೇಂದ್ರ ಅರ್ಥ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಬಜೆಟ್ ದೂರದೃಷ್ಠಿಯ ಬಜೆಟ್ ಆಗಿದೆ ಕೈಗಾರಿಕಾ ಕ್ಷೇತ್ರ, ಆಳಂದ ಮೂಲಭೂತ ಸೌಕರ್ಯ ಮತ್ತು ತಂತ್ರಜ್ಞಾನ ಅಳವಡಿಕೆ ಮೂಲಕ ಎಲ್ಲಾ ವರ್ಗದ ಜನರ ಜೀವನಮಟ್ಟ ಸುಧಾರಣೆಗೆ ಒತ್ತು ನೀಡಲಾಗಿರುವುದನ್ನು ಸ್ವಾಗತಿಸುತ್ತೇನೆ ಎಂದು ಶಾಸಕ ಸುಭಾಷ್ ಆರ್ ಗುತ್ತೇದಾರ ಬಣ್ಣಿಸಿದ್ದಾರೆ.

ಬಜೆಟ್ ಕುರಿತು ಮಾಧ್ಯಮಗಳಿಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಗ್ರಾಮೀಣ ಕುಡಿಯುವ ನೀರಿಗೆ ಸಂಬಂಧಿಸಿದಂತೆ ಜೆ.ಜೆ.ಎಂ. ಯೋಜನೆಗೆ ೨೦೨೧-೨೨ ಸಾಲಿನಲ್ಲಿ ೫೦ ಸಾವಿರ ಕೋಟಿ ಇದ್ದು, ಅದನ್ನು ೨೦೨೨-೨೩ನೇ ಸಾಲಿನಲ್ಲಿ ೬೦ ಸಾವಿರ ಕೋಟಿಗೆ ಏರಿಸಲಾಗಿದ್ದು, ಹೊಸದಾಗಿ ೩.೮ ಕೋಟಿ ಮನೆಗಳಿಗೆ ನಳದ ಮೂಲಕ ಕುಡಿಯುವ ನೀರಿಗೆ ಆದ್ಯತೆ ನೀಡಲಾಗಿದೆ ಎಂದು ಆಳಂದ ಶಾಸಕ ಸುಭಾಷ್ ಆರ್ ಗುತ್ತೇದಾರ ತಿಳಿಸಿದ್ದಾರೆ.

Contact Your\'s Advertisement; 9902492681

ಆಧುನಿಕ ತಂತ್ರಜ್ಞಾನವನ್ನೊಳಗೊಂಡ ಇ-ಪಾಸ್‌ಪೋರ್ಟ್ ನೀಡುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ನಿರ್ಧಾರದಿಂದ ನಾಗರಿಕರು ಕಚೇರಿಗಳಿಗೆ ಅಲೆದಾಡದೆ ಸುಲಭವಾಗಿ ಪಾಸ್‌ಪೋರ್ಟ್ ಸೇವೆ ಪಡೆಯಲು ಸಾಧ್ಯವಾಗಲಿದೆ. ತಂತ್ರಜ್ಞಾನದ ಸದ್ಬಳಕೆಗೆ ಇದು ಮಾದರಿ ಎಂದು ತಿಳಿಸಿದ್ದಾರೆ.

ಗ್ರಾಮೀಣಾಭಿವೃದ್ಧಿ ಹಾಗೂ ನಗರಾಭಿವೃದ್ಧಿ ಎರಡು ಕ್ಷೇತ್ರಗಳ ಅಭಿವೃದ್ಧಿಗೆ ಪೂರಕವಾಗಿದೆ. ಡಿಜಿಟಲೀಕರಣ ಮತ್ತು ಸ್ವಾವಲಂಬನೆಗೆ ಒತ್ತು ನೀಡಿದ್ದು, ವಿಶೇ?ವಾಗಿ ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ದೇಶದ ಆರ್ಥಿಕ ಅಭಿವೃದ್ಧಿಗೆ ಪೂರಕವಾದ ಬಜೆಟ್ ಆಗಿದೆ ಎಂದಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here