ಬಿಸಿ ಬಿಸಿ ಸುದ್ದಿ

ನ್ಯಾಯಾಧೀಶ, ಅವಮಾನ ಮಾಡಿದ ಅಧಿಕಾರಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಮತ್ತು ಸಂವಿಧಾನಿಕ ಹುದ್ದೆಗೆ ಅವಮಾನ ಮಾಡಿದ ರಾಯಚೂರು ಜಿಲ್ಲಾ ನ್ಯಾಯಾಧೀಶ ಹಾಗೂ ಕಲಬುರಗಿ ಜಿಲ್ಲಾಡಳಿತದಿಂದ ಕೂಡ ಅವಮಾನ ಮಾಡಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೋಳಬೇಕೆಂದು ಅಖಿಲ ಕರ್ನಾಟಕ ಭೋವಿ(ವಡ್ಡರ) ಯುವ ವೇದಿಕೆ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರುಗಡೆ ಪ್ರತಿಭಟನೆ ನಡೆಸಿದರು.

ಜನೇವರಿ ೨೬ ರಂದು ರಾಯಚೂರು ಜಿಲ್ಲಾ ಕೋರ್ಟ್ ಆವರಣದಲ್ಲಿ ನಡೆದ ಸಂವಿಧಾನ ದಿನಾಚರಣೆ| ಗಣರಾಜ್ಯೋತ್ಸವದ ದಿನದಂದು ರಾಯಚೂರಿನ ಮಲ್ಲಿಕಾರ್ಜುನ ಗೌಡ ಎನ್ನುವ ಪ್ರಧಾನ ಜಿಲ್ಲಾ ನ್ಯಾಯಾಧೀಶ ನನ್ನ ಅಪ್ಪಣೆ ಇಲ್ಲದೇ ಅಂಬೇಡ್ಕರ್ ರವರ ಭಾವಚಿತ್ರವನ್ನು ಇಡಲಾಗಿದೆ. ಅವರ ಭಾವಚಿತ್ರವನ್ನು ತೆಗೆದರೆ ಮಾತ್ರ ನಾನು ಧ್ವಜಾರೋಹಣ ಮಾಡುತ್ತೇನೆ ಇಲ್ಲವಾದರೆ ಬರುವುದಿಲ್ಲವೆಂದು ಹೇಳಿ, ನಂತರ ಬಾಬಾ ಸಾಹೇಬ್ ಅಂಬೇಡ್ಕರ್ ರವರ ಭಾವಚಿತ್ರವನ್ನು ತಮ್ಮ ಪ್ರಭಾವ ಬಳಿಸಿ ಕಾರ್ಯಕ್ರಮದ ಮುಖ್ಯಸ್ಥಳದಿಂದ ತೆಗೆಸಿರುತ್ತಾರೆ. ಭಾರತದ ಪ್ರಜಾಪ್ರಭುತ್ವದ ಬಹುಮುಖ್ಯ ಅಂಗ ನ್ಯಾಯಾಂಗ ಅಂತಹ ಶ್ರೇಷ್ಠ ನ್ಯಾಯಾಂಗದ ಮುಖ್ಯ ಜಿಲ್ಲಾ ನ್ಯಾಯಾಧೀಶರಾಗಿ ಭಾರತ ಸಂವಿಧಾನದ ಅನುಚ್ಛೇದ ೨೩೩ ರ ಅಡಿಯಲ್ಲಿ ಜಿಲ್ಲಾ ನ್ಯಾಯಾಧೀಶರ ನೇಮಕಾತಿಯ ಪ್ರಕ್ರಿಯೆಯಿಂದ ಆಯ್ಕೆಯಾದ ಮಲ್ಲಿಕಾರ್ಜುನ ಗೌಡರವರ ಈ ನಡೆ ನಾಗರೀಕ ಸಮಾಜಕ್ಕೆ ತೀವ್ರ ಆತಂಕ ಮತ್ತು ನೋವು ತಂದೊಡ್ಡಿದೆ.

ಸಂವಿಧಾನದ ಬಗ್ಗೆ ಸಂವಿಧಾನ ನಿರ್ಮಾತೃಗಳ ಬಗ್ಗೆ ಇಷ್ಟು ಪೂ ಪೀಡಿತ ಮನಸ್ಥಿತಿ ಇರುವ ನ್ಯಾಯಾಧೀಶರಿಂದ ನಿಷ್ಪಕ್ಷಪಾತ ನ್ಯಾಯಾದಾನವನ್ನು ನೀರಿಕ್ಷಿಸಲು ಹೇಗೆ ಸಾಧ್ಯ? ನ್ಯಾಯಾಲಯದ ಮೇಲೆ ನಾಗರೀಕ ಸಮಾಜ ಇಟ್ಟಿರುವ ನಂಬಿಕೆ ಉಳಿಸಿಕೊಳ್ಳಲು ಮತ್ತು ರಾಷ್ಟ್ರ ನಿರ್ಮಾಣಕ್ಕೆ ಸಂವಿಧಾನ ರಚನೆಗೆ ತಮ್ಮ ಸರ್ವಸ್ವವನ್ನೇ ತ್ಯಾಗ ಮಾಡಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ರವರ ಘನತೆಯನ್ನು ಎತ್ತಿಹಿಡಿಯಲು.

ಈ ಪ್ರಕರಣವನ್ನು ಕರ್ನಾಟಕ ರಾಜ್ಯ ಉಚ್ಛನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳ ಗಮನಕ್ಕೆ ತಂದು ಮಲ್ಲಿಕಾರ್ಜುನಗೌಡ ಎಂಬ ಜಿಲ್ಲಾ ನ್ಯಾಯಾಧೀಶರನ್ನು ನ್ಯಾಯಾಧೀಶರ ವಿಚಾರಣಾ ಕಾಯಿದೆ ೧೯೬೮ ” ಮತ್ತು ನ್ಯಾಯಾಧೀಶರ ವಿಚಾರಣೆ ಅಧಿನಿಯಮ ೧೯೬೯ ” ರ ನಿಯಮಗಳ ಅನುಸಾರ ಅಸಮರ್ಥತೆ ಮತ್ತು ಅನುಚಿತ ಮತ್ತು ಆಧಾರದಲ್ಲಿ ಅವರನ್ನು ನ್ಯಾಯಾಧೀಶರ ಹುದ್ದೆಯಿಂದ ವಜಾ ಮಾಡಬೇಕು ಮತ್ತು ಇದರ ಜೊತೆಗೆ ಕಲಬುರಗಿ ಜಿಲ್ಲೆಯಲ್ಲಿ ಜಿಲ್ಲಾಡಳಿತದಿಂದ ಡಾ.ಬಿ.ಆರ್. ಅಂಬೇಡ್ಕರ ಮತ್ತು ಮಹಾತ್ಮ ಗಾಂಧಿ ರವರ ಫೋಟೋವನ್ನು ಇಡಲಾರದೇ ಅವಮಾನ ದೂರು ದಾಖಲಿಸಿ ಸದರಿ ಅಧಿಕಾರಿಗಳನ್ನು ವಜಾಮಾಡಬೇಕೆಂದು.

ಈ ಸಂದರ್ಭದಲ್ಲಿ ವೇದಿಕೆ ರಾಜ್ಯಾಧ್ಯಕ್ಷ ಜಿ.ಎಂ.ಬಡಿಗೇರ, ಕಲ್ಲಾಣ ಕರ್ನಾಟಕ ಅಧ್ಯಕ್ಷ ಜಿ.ಶಿವಶಂಕರ, ಜಿಲ್ಲಾಧ್ಯಕ್ಷ ಕೃಷ್ಣಾ ಕುಶಾಳಕರ್, ಮುಖಂಡರಾದ ಮನೋಜ ರಾಠೋಡ, ಮೌನೇಶ ಸಾತಖೇಡ, ನಾಗೇಶ ಗೊಬ್ಬೂರ, ಅರ್ಜುನ ಬೇಲೂರ, ಗಿರೇಪ್ಪ ಬೇಲೂರ, ರಾಮ ಸ್ವಾಮಿ, ಸುರೇಶ ಕುಶಾಳಕರ್, ಯಲ್ಲಪ್ಪ, ಬ್ರಹ್ಮಾ ಸುಲ್ತಾನಪೂರ, ದಿಗಂಬರ, ಬಸವರಾಜ, ವಿಜಯಕುಮಾರ ಇದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

5 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

15 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

15 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

15 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago