ಕಲಬುರಗಿ: 73 ನೇ ಗಣರಾಜ್ಯೋತ್ಸವ ಧ್ವಜಾರೋಹಣ ಸಂದರ್ಭದಲ್ಲಿ ರಾಯಚೂರ ಜಿಲ್ಲಾ ನ್ಯಾಯಾಲಯದಲ್ಲಿ ಡಾ:ಬಿ ಆರ್ ಅಂಬೇಡ್ಕರ್ ಭಾವಚಿತ್ರ ತೆಗೆಸಿ ವಿಕೃತಿ ಮೆರೆದ ನ್ಯಾಯಧೀಶ ಮಲ್ಲಿಕಾರ್ಜುನ ಗೌಡ ನನ್ನು ಸೇವೆಯಿಂದ ವಜಾಗೊಳಿಸಿ ಶಿಕ್ಷಿಸುವಂತೆ ಮತ್ತು ಕಲಬುರಗಿ ಜಿಲ್ಲಾಡಳಿತದಿಂದ ಪೋಲಿಸ ಪರೇಡ ಮೈದಾನದಲ್ಲಿ ಗಾಂಧೀಜಿ ಹಾಗೂ ಅಂಬೇಡ್ಕರ್ ರವರ ಭಾವಚಿತ್ರಗಳನ್ನು ಇಡದೆ ಅಕ್ಷಮ್ಯ ಅಪರಾಧ ಎಸಗಿದ ಜಿಲ್ಲಾ ಉಸ್ತುವಾರಿ ಮಂತ್ರಿ ಮುರುಗೇಶ ನಿರಾಣಿ/ಜಿಲ್ಲಾಧಿಕಾರಿ ವಿರುದ್ಧ ಕ್ರಮ ಜರುಗಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು.ಗ್ರಾಮೀಣ ಯುವ ಕಾಂಗ್ರೆಸ್ ಸಂಯೋಜಕರು ಹಾಗೂ ಭಾರತೀಯ ದಲಿತ ಪ್ಯಾಂಥರ್ ವಿ ಒಕ್ಕೂಟ ಉಪಾಧ್ಯಕ್ಷರಾದ ಶಿವಾನಂದ ಆರ್ ಕಿಳ್ಳಿ ಸರಡಗಿ ಆಗ್ರಹಿಸಿದರು.
ರಾಜ್ಯದ ಎಲ್ಲಾ ನ್ಯಾಯಾಲಯಗಳಲ್ಲಿ/ನ್ಯಾಯಾಲಯ ಕಛೇರಿಗಳಲ್ಲಿ ಕಡ್ಡಾಯವಾಗಿ ಡಾ:ಬಿ ಆರ್ ಅಂಬೇಡ್ಕರ್ ರವರ ಭಾವಚಿತ್ರ ಹಾಕುವಂತೆ ಈ ಸಂದರ್ಭದಲ್ಲಿ ಆಗ್ರಹಿಸಿದರು.
ಕುರುಬ ಸಮಾಜದ ಅಧ್ಯಕ್ಷ ಸಿದ್ದಪ್ಪ ಪೂಜಾರಿ, ರಾಜು ಪೂಜಾರಿ ಗ್ರಾಮ ಪಂಚಾಯತ್ ಸದಸ್ಯರಾದ ರಾಜು ಶ್ರೀಗನ್, ರುಕ್ಕಪ್ಪಾ ಮೀಸಿ, ನಾಗೂ ಫೈಲ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…