ಬಿಸಿ ಬಿಸಿ ಸುದ್ದಿ

ಭಕ್ತರ ಸುಖ ಸಂತೋಷವೇ ಶ್ರೀಗಿರಿ ಮಠದ ಆಶಯವಾಗಿದೆ: ಚನ್ನಮಲ್ಲಿಕಾರ್ಜು ಶಿವಾಚಾರ್ಯ

ಸುರಪುರ: ಶ್ರೀಗಿರಿ ಮಠದ ಮುಖ್ಯ ಆಶಯವೆಂದರೆ ಭಕ್ತರಿಗೆ ಸುಖ ಸಂತೋಷ ನೆಮ್ಮದಿ ಕಲ್ಪಿಸುವುದಾಗಿದೆ ಎಂದು ಶ್ರೀಗಿರಿ ಮಠದ ಪೀಠಾಧಿಪತಿ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಆಶೀರ್ವಚನ ನೀಡಿದರು.

ತಾಲೂಕಿನ ಲಕ್ಷ್ಮೀಪುರ ಬಿಜಾಸಪುರ ಬಳಿಯ ಶ್ರೀ ಮರಡಿ ಮಲ್ಲಿಕಾರ್ಜುನ ದೇವರ ಜಾತ್ರಾ ಮಹೋತ್ಸವದ ಅಂಗವಾಗಿ ಶ್ರೀಗಿರಿ ಮಠದ ಆವರಣದಲ್ಲಿ ನಡೆದ ಅಬ್ಬೆತುಮಕೂರಿನ ಸಿದ್ಧಿಪುರುಷ ವಿಶ್ವರಾಧ್ಯರ ಪುರಾಣ ಕಾರ್ಯಕ್ರಮದ ಸಾನಿಧ್ಯವಹಿಸಿ ಮಾತನಾಡಿ,ಭಕ್ತರಿಂದಲೇ ಇಂದು ಇಷ್ಟೆಲ್ಲ ಕಾರ್ಯ ಮಾಡಲು ಸಾಧ್ಯವಾಗಿದೆ.ಇದೆಲ್ಲವು ಭಕ್ತರಿಂದ ಭಕ್ತರಿಗಾಗಿ ನಡೆಯುವ ಕಾರ್ಯವಾಗಿದೆ ಎಂದರು.ಮಾನವ ಕಲ್ಯಾಣವೇ ಶ್ರೀಮಠದ ಮುಖ್ಯ ಉದ್ದೇಶವಾಗಿದ್ದು ತಾವೆಲ್ಲರು ನಡೆಸುವುದರಿಂದ ಪ್ರತಿ ವರ್ಷವು ಮಲ್ಲಿಕಾರ್ಜುನ ದೇವರ ಜಾತ್ರೆ ಹಾಗು ಎಲ್ಲಾ ಕಾರ್ಯಕ್ರಮಗಳು ನಡೆಯುತ್ತವೆ.ಅದರಂತೆ ಮಲ್ಲಿಕಾರ್ಜುನ ದೇವರ ಮತ್ತು ಮೂಕಪ್ಪಯ್ಯ ತಮ್ಮೆಲ್ಲರಿಗೂ ಆರೋಗ್ಯ ಭಾಗ್ಯ ಕರುಣಿಸುತ್ತಾರೆ ಎಂದರು.

ಇದೇ ಸಂದರ್ಭದಲ್ಲಿ ಹಸನಾಪುರ ಯುಕೆಪಿ ಕ್ಯಾಂಪ್ ಕಚೇರಿಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಸಂತೋಷಜಿ ಮಾತನಾಡಿ,ಜನರು ನೆಲ ಜಲದ ಬಗ್ಗೆ ತುಂಬಾ ಜಾಗೃತಿ ವಹಿಸಬೇಕು ಎಂದರು.

ನೆಲವನ್ನು ಹಾಳುಮಾಡಬೇಡಿ.ಈಗ ನಮ್ಮ ರೈತರು ಭತ್ತ ಬೆಳೆಯಲು ನಿತ್ಯವು ಜಮೀನಲ್ಲಿ ನೀರು ನಿಲ್ಲಿಸುವುದ ಹಾಗು ಬೆಳೆಗಳಿಗಾಗಿ ರಸಗೊಬ್ಬರ,ಕ್ರಿಮಿನಾಶ ಹೆಚ್ಚು ಸಿಂಪಡಣೆಯಿಂದ ತಿನ್ನುವ ಅನ್ನವು ವಿಷಯುಕ್ತವಾಗಿದೆ,ಅಲ್ಲದೆ ಭೂಮಿಯು ಹಾಳಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು.ಅಲ್ಲದೆ ತಾವೆಲ್ಲರು ಸಾಧ್ಯವಾದಷ್ಟು ಸಾವಯವ ಕೃಷಿಗೆ ಒತ್ತು ನೀಡುವಂತೆ ಸಲಹೆ ನೀಡಿದರು.

ಇದೇ ಸಂದರ್ಭದಲ್ಲಿ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಶ್ರೀಗಳಿಗೆ ಭಕ್ತರಿಂದ ತುಲಾಭಾರ ನಡೆಸಲಾಯಿತು.ಅಲ್ಲದೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಎಲ್ಲಾ ಗಣ್ಯರಿಗೆ ಶ್ರೀಮಠದಿಂದ ಸನ್ಮಾನಿಸಿ ಗೌರವಿಸಲಾಯಿತು.ಅಲ್ಲದೆ ಲಕ್ಷ್ಮೀಪುರ ಬಿಜಾಸಪುರ ಗ್ರಾಮ ಪಂಚಾಯತಿ ಸದಸ್ಯರಿಂದ ಶ್ರೀಗಳಿಗೆ ವಿಶೇಷ ಸನ್ಮಾನ ನಡೆಸಲಾಯಿತು ಹಾಗು ಎಲ್ಲಾ ಗ್ರಾಮ ಪಂಚಾಯತಿ ಸದಸ್ಯರಿಗೂ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಮುಖಂಡರಾದ ಚಂದ್ರಶೇಖರ ದಂಡಿನ್,ಕೆಜೆಯು ಜಿಲ್ಲಾ ಅಧ್ಯಕ್ಷ ಡಿ.ಸಿ ಪಾಟೀಲ್,ಕೆಜೆಯು ತಾಲೂಕು ಅಧ್ಯಕ್ಷ ರಾಜು ಕುಂಬಾರ,ಪಿಎಸ್‌ಐ ಕೃಷ್ಣಾ ಸುಬೇದಾ,ಹೋರಾಟಗಾರ್ತಿ ಮಹಾದೇವಮ್ಮ ಬೇವಿನಾಳಮಠ,ಕರವೇ ಜಿಲ್ಲಾಧ್ಯಕ್ಷ ಬಸವರಾಜ ಅಂಗಡಿ,ರವಿಚಂದ್ರಸಾಹು ಆಳ್ದಾಳ,ಪ್ರಶಾಂತ ಮುದನೂರ ಸೇರಿದಂತೆ ಅನೇಕರು ಭಾಗವಹಿಸಿದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

5 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

15 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

15 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

15 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago