ಉಡುಪಿ: ಫೆಬ್ರವರಿ 1, ವಿಶ್ವ ಹಿಜಾಬ್ ದಿನಾಚರಣೆಯ ಅಂಗವಾಗಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಉಡುಪಿ ಜಿಲ್ಲಾ ಸಮಿತಿ ವತಿಯಿಂದ ಉಡುಪಿಯ ದುರ್ಗಾ ಇಂಟರ್ನ್ಯಾಷನಲ್ ಸಭಾಂಗಣದಲ್ಲಿ ವಿಚಾರ ಸಂಕಿರಣ ನಡೆಯಿತು.
ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಸಮಿತಿ ಸದಸ್ಯರಾದ ಆಯಿಷ ಮುರ್ಶಿದ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿ ಇಂದು ಹಿಜಾಬ್ ಮುಸ್ಲಿಂ ಮಹಿಳೆಯರ ಘನತೆ ಹಾಗೂ ರಕ್ಷಣೆಯ ಕವಚವಾಗಿದೆ. ಆದರೆ ಸಂಘ ಪರಿವಾರ ಇಂದು ತನ್ನ ರಾಜಕೀಯ ಷಡ್ಯಂತ್ರದ ಭಾಗವಾಗಿ ಮುಸ್ಲಿಂ ಮಹಿಳೆಯರ ಶಿಕ್ಷಣವನ್ನು ಮೊಟಕುಗೊಳಿಸುವ ಹುನ್ನಾರವಿದೆ ಎಂದು ಆರೋಪಿಸಿದರು. ನ್ಯಾಷನಲ್ ವಿಮೆನ್ಸ್ ಫ್ರಂಟ್ ಕರ್ನಾಟಕ ರಾಜ್ಯ ಸಮಿತಿ ಸದಸ್ಯೆಯಾದ ನಸೀಮ್ ಉಡುಪಿ ಹಾಗೂ ಕ್ಯಾಂಪಸ್ ಫ್ರಂಟ್ ಉಡುಪಿ ಜಿಲ್ಲಾ ಮುಖಂಡರಾದ ಝಮ್ ಝಮ್ ಕಪ್ತಿ ಹಾಗೂ ಅಡ್ವೊಕೇಟ್ ಶಹನಾಝ್ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ವಿವಿಧ ಕಾಲೇಜಿನ ಹಲವಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು. ನಿದಾ ಅಫ್ರಾ ಸ್ವಾಗತಿಸಿ, ಸುಹಾ ನಝ್ಮ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…