ಶಹಾಬಾದ: ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ಮಂಗಳವಾರ ಕರ್ನಾಟಕ ಪ್ರಾಂತ ರೈತ ಸಂಘದ ತಾಲೂಕಾ ಸಮಿತಿ ವತಿಯಿಂದ ಹೊನಗುಂಟಾ ಗ್ರಾಪಂ ಕಾರ್ಯದರ್ಶಿಗಳಿಗೆ ಮನವಿ ಪತ್ರ ಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಪ್ರತಿಭಟನಾಕಾರರು, ಹೊನಗುಂಟಾ ಗ್ರಾಮದ ಕೂಲಿ ಕಾರ್ಮಿಕರು ಕೆಲಸಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ.ಆದರೂ ಉದ್ಯೋಗ ಖಾತ್ರಿಯಲ್ಲಿ ಕೆಲಸ ನೀಡುತ್ತಿಲ್ಲ.ಇದರಿಂದ ಕೂಲಿಕಾರರ ಬದುಕಿನ ಮೇಲೆ ಪರಿಣಾಮ ಬೀರುತ್ತಿದೆ. ಕೂಡಲೇ ಕೆಲಸ ನೀಡುವಂತಾಗಬೇಕು. ಗ್ರಾಪಂ ವ್ಯಾಪ್ತಿಗೆ ಬರುವ ಅಂಗನವಾಡಿ, ಆರೋಗ್ಯ ಕೇಂದ್ರಗಳಿಗೆ ಹಾಗೂ ಸರಕಾರಿ ಶಾಲೆಗಳಿಗೆ ಶೌಚಾಲಯ ಹಾಗೂ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಿಕೊಡಬೇಕು.
ಗ್ರಾಮದಲ್ಲಿ ಚರಂಡಿಗಳನ್ನು ಶುಚಿಗೊಳಿಸಬೇಕು.ಅಲ್ಲದೇ ಚರಂಡಿ ನೀರನ್ನು ನದಿಗೆ ಸೇರದಂತೆ ನೋಡಿಕೊಳ್ಳಬೇಕು. ಸರಿಯಾದ ವಿದ್ಯುತ್ ದೀಪಗಳ ಕೊರತೆ ಇದೆ.ಇದರಿಂದ ಸಾರ್ವಜನಿಕರು ಕತ್ತಲಲ್ಲಿ ಓಡಾಡುವಂತಾಗಿದೆ.ಕೂಡಲೇ ಬೀದಿ ದೀಪಗಳ ನಿರ್ವಹಣೆ ಮಾಡಬೇಕು.ಇಲ್ಲದಿದ್ದರೇ ಗ್ರಾಪಮ ಎದುರುಗಡೆ ಪ್ರತಿಭಟನೆ ಮಾಡಲಾಗುವದೆಂದು ಎಚ್ಚರಿಕೆ ನೀಡಿದರು. ನಂತರ ಗ್ರಾಪಂ ಕಾರ್ಯದರ್ಶಿಗಳಿಗೆ ಮನವಿ ಪತ್ರ ಸಲ್ಲಿಸಿದರು.
ಕರ್ನಾಟಕ ಪ್ರಾಂತ ರೈತ ಸಂಘದ ತಾಲೂಕಾ ಸಮಿತಿ ಸಂಚಾಲಕ ರಾಯಪ್ಪ ಹುರಮುಂಜಿ,ಭೂತಾಳಿ ಪೂಜಾರಿ, ಸಾಯಬಣ್ಣ ಪೂಜಾರಿ, ಶರಣು ಬನ್ನೆಪ್ಪ, ಉಮೇಶ, ವಿಶ್ವರಾಜ ಫಿರೋಜಬಾದ ಇತರರು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…