ರಾಯಚೂರು ನ್ಯಾಯಾಧೀಶರ ವಜಾಕ್ಕೆ ಆಗ್ರಹಿಸಿ ಗೋರಸೇನಾ ಪ್ರತಿಭಟನೆ

0
8

ಸುರಪುರ: ಗಣರಾಜ್ಯೋತ್ಸವ ಆಚರಣೆ ವೇಳೆ ರಾಯಚೂರು ನ್ಯಾಯಾಲಯದಲ್ಲಿ ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ಎನ್ನುವವರು ಸಂವಿಧಾನ ಶಿಲ್ಪಿ ಡಾ:ಬಾಬಾ ಸಾಹೇಬ್ ಅಂಬೇಡ್ಕರರ ಭಾವಚಿತ್ರವನ್ನು ತೆಗೆಯಿಸಿ ಅಪಮಾನಿಸಿದ್ದಾರೆ ಎಂದು ಗೋರಾ ಸೇನಾ ರಾಷ್ಟ್ರೀಯ ಸಂಘಟನೆ ತಾಲೂಕು ಅಧ್ಯಕ್ಷ ಕಾಂತೇಶ ನಾಯಕ ಆರೋಪಿಸಿದರು.

ಗೋರಾ ಸೇನಾ ಸಂಘಟನೆಯಿಂದ ತಹಸೀಲ್ ಕಚೇರಿ ಮುಂದೆ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿ,ರಾಯಚೂರು ನ್ಯಾಯಾಲಯದ ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ಅವರು ಈ ದೇಶಕ್ಕೆ ಸಂವಿಧಾನವನ್ನು ರಚಿಸಿಕೊಟ್ಟ ಮಹಾನ್ ಪುರುಷ ಡಾ:ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರವನ್ನು ತೆಗೆಯಿಸಿ ಸಂವಿಧಾನಕ್ಕೆ ಮತ್ತು ರಾಷ್ಟ್ರನಾಯಕನಿಗೆ ಅಪಮಾನಿಸಿದ್ದಾರೆ.

Contact Your\'s Advertisement; 9902492681

ಆದ್ದರಿಂದ ಮಾನ್ಯ ಹೈಕೋರ್ಟ್ ನ್ಯಾಯಮೂರ್ತಿಗಳು ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ಅವರ ವಿರುದ್ಧ ರಾಷ್ಟ್ರದ್ರೋಹದ ಪ್ರಕರಣದಡಿ ಅವರನ್ನು ಸೇವೆಯಿಂದ ವಜಾಗೊಳಿಸುವ ಮೂಲಕ ಕ್ರಮ ಕೈಗೊಳ್ಳಬೇಕು,ಇಲ್ಲವಾದಲ್ಲಿ ಗೋರಾಸೇನಾ ಸಂಘಟನೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಿದೆ ಎಂದರು.

ನಂತರ ರಾಜ್ಯಪಾಲರಿಗೆ ಬರೆದ ಮನವಿಯನ್ನು ತಹಸೀಲ್ ಸಿರಸ್ತೆದಾರರ ಮೂಲಕ ಸಲ್ಲಿಸಿದರ.ಈ ಸಂದರ್ಭದಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ರವಿಕುಮಾರ ಜಾಧವ್,ಸಂತೋಷ ರಾಠೋಡ,ಶ್ರೀಕಾಂತ ರಾಠೋಡ,ವಿನೋದ ರಾಠೋಡ,ವೆಂಕಟೇಶ ನಾಯಕ,ಗಣೇಶ ಚವ್ಹಾಣ,ಭೀಮಾನಾಯಕ ರಾಠೋಡ,ಶಂಕರ ಚವ್ಹಾಣ,ಸುನೀಲ ರಾಠೋಡ,ನಾಗರಾಜ ಬಡಿಗೇರ,ಸಂತೋಷಕುಮಾರ ನಾಯಕ,ಕೃಷ್ಣಾ ರಾಠೋಡ ಸೇರಿ ಅನೇಕರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here