ಕಲಬುರಗಿ: ವಿಜ್ಞಾನ ಮತ್ತು ತಂತ್ರಜ್ಞಾನದ ಕ್ಷೇತ್ರದಲ್ಲಿ ವಿಶ್ವಕ್ಕೆ ಭಾರತದ ಕೊಡುಗೆ ಮರೆಯುವಂತಿಲ್ಲ. ಗಣಿತ, ಭೌತಶಾಸ್ತ್ರ, ರಾಸಾಯನಶಾಸ್ತ್ರ, ಪ್ರಾಣಿಶಾಸ್ತ್ರ, ಭೂಗರ್ಭಶಾಸ್ತ್ರಗಳಲ್ಲಿ ಅಪಾರವಾದ ಜ್ಞಾನ, ಸಾಧನೆ, ಸಂಶೋಧನೆ ಮೂಲಕ ವಿಜ್ಞಾನ ಕೇತ್ರಕ್ಕೆ ಸತ್ಯೇಂದ್ರನಾಥ ಬೋಸ್ ಅವರು ಅವಿಸ್ಮರಣೀಯವಾದ ಕೊಡುಗೆಯನ್ನು ನೀಡಿದ್ದಾರೆ ಎಂದು ಉಪನ್ಯಾಸಕ ಎಚ್.ಬಿ.ಪಾಟೀಲ ಅಭಿಪ್ರಾಯಪಟ್ಟರು.
ನಗರದ ನ್ಯೂ ರಾಘವೇಂದ್ರ ಕಾಲನಿಯಲ್ಲಿರುವ ’ಮುತ್ತಾ ಟ್ಯೂಟೋರಿಯಲ್ಸ್’ನಲ್ಲಿ ’ಬಸವೇಶ್ವರ ಸಮಾಜ ಸೇವಾ ಬಳಗ’ದಿಂದ ಹಮ್ಮಿಕೊಳ್ಳಲಾಗಿದ್ದ ’ಸತ್ಯೇಂದ್ರನಾಥ ಬೋಸ್ ಅವರ ಸ್ಮರಣೋತ್ಸವ’ದಲ್ಲಿ ಭಾವಚಿತ್ರಕ್ಕೆ ನಮನಗಳನ್ನು ಸಲ್ಲಿಸಿ ಅವರು ಮಾತನಾಡುತ್ತಿದ್ದರು.
ಸಂಸ್ಥೆ ಮುಖ್ಯಸ್ಥ ಶಿವಕುಮಾರ ಮುತ್ತಾ ಮಾತನಾಡಿ, ವಿದ್ಯಾರ್ಥಿ ದೆಸೆಯಿಂದಲೇ ವಿದ್ಯಾರ್ಥಿಗಳು ಇಂತಹ ಮಹಾನ ಸಾಧಕರ ಬಗ್ಗೆ ತಿಳಿದುಕೊಳ್ಳಬೇಕು. ಇದು ನಿಮಗೆ ಸಾಧನೆ ಮಾಡಲು ಸ್ಪೂರ್ತಿ ದೊರೆಯುತ್ತದೆ. ವಿಶ್ವಕ್ಕೆ ನಮ್ಮ ದೇಶದ ಗಣಿತಶಾಸ್ತ್ರಜ್ಞರು, ವಿಜ್ಞಾನಿಗಳ ಕೊಡುಗೆ ಮರೆಯುವಂತಿಲ್ಲ ಎಂದರು. ’ಓಂ ಶ್ರೀ ಜ್ಯೋತಿ ಶಿಕ್ಷಣ ಸಂಸ್ಥೆ’ಯ ಅಧ್ಯಕ್ಷ ಚನ್ನಬಸಪ್ಪ ಗಾರಂಪಳ್ಳಿ, ಆಳಂದ ತಾಲೂಕಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ನರಸಪ್ಪ ಬಿರಾದಾರ ದೇಗಾಂವ, ಸಂಸ್ಥೆಯ ಸಹ ಶಿಕ್ಷಕರಾದ ಪ್ರಮೋದ ಕುಲಕರ್ಣಿ, ಲಕ್ಷ್ಮೀ, ಭೀಮಾಶಂಕರ ಸೇರಿದಂತೆ ವಿದ್ಯಾರ್ಥಿಗಳು ಇದ್ದರು.
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…