ಕಲಬುರಗಿ: ಕುಟುಂಬದ ಜಗಳವನ್ನು ನಕಲಿ ವಿಡಿಯೋ ಚಿತ್ರಿಕರಿಸಿ ದೊಡ್ಡಮಟ್ಟದ ಹಣದ ಆಮೀಷವೊಡ್ಡಿ ಮಹಿಳೆಗೆ ನಿರಂತರ ಕಿರುಕುಳ ನೀಡುತ್ತಿರುವ ಖಾಸಗಿ ಸಾಮಾಜಿಕ ಮಾಧ್ಯಮದ ಚಾಲನ್‌ವೊಂದರ ಸಂಚಾಲಕರಾದ ಸೇರಿ ಇತರ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ನುಜಹತ್ ಸುಲ್ತಾನ್ ಅವರು ಆಗ್ರಹಿಸಿದ್ದಾರೆ
ನಗರದ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಫೇಸ್‌ಬುಕ್ ಹಾಗೂ ಯೂಟ್ಯೂಬ್ ಚಾನೆಲ್‌ಗಳು ಸುಳ್ಳು ವಿಡಿಯೋ ಸೃಷ್ಟಿಸಿ ಹಣ ಲಪಟಾಯಿಸುವಂತಹ ಕೃತ್ಯಗಳು ಮಾಡುತ್ತಿದ್ದಾರೆ. ಈ ಕುರಿತು ಮಹಿಳಾ ಪೊಲೀಸ ಠಾಣೆಯಲ್ಲಿ ನಾಲ್ವರ ವಿರುದ್ಧ ದೂರು ನೀಡಿದ್ದೇನೆ. ಕೂಡಲೇ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಿ, ಮಾನ್ಯತೆ ಪಡೆಯದ ಅವರುಗಳ ಚಾನೆಲ್ ಹಾಗೂ ಪೇಜ್‌ಗಳನ್ನು ರದ್ದುಪಡಿಸಬೇಕೆಂದು ಪಟ್ಟು ಹಿಡಿದು ಒತ್ತಾಯಿಸಿದರು.
ಈ ಕುರಿತು ನನ್ನ ಮೇಲೆ ವೈಯಕ್ತಿಕ ಹರಣ ಮಾಡಿದ್ದರಿಂದ ಅವರ ವಿರುದ್ಧ ಜನೆವರಿ ೮ ರಂದು ನಗರ ಮಹಿಳಾ ಪೊಲೀಸ ಠಾಣೆಯಲ್ಲಿ ಪ್ರಮುಖ ಆರೋಪಿಗಳಾದ ವಸೀಂ ಸಲೀಂ ಗೌಂಡಿ( ಗುಲಬರ್ಗಾ ಹೆಡ್‌ಲೈನ್ಸ್), ಮೋಸಿನ್ ಅಹ್ಮದ್ (ಗುಲಬರ್ಗಾ ೨೪), ಮೋಸೀನ್ ಶಾಬಾದ (ಗುಲಬರ್ಗಾ ಟೈಮ್ಸ್) ಹಾಗೂ ರಾಪಿಯಾ ಶೀರಿನ್ ಖಾನ ( ಗುಲಬರ್ಗಾ ನ್ಯೂಸ್) ಎಂಬುವವರ ವಿರುದ್ಧ ಪ್ರಕರಣ ದಾಖಲಿಸಿದ್ದು, ಇಲ್ಲಿಯವರೆಗೆ ಆರೋಪಿಗಳನ್ನು ಬಂಧಿಸಿ ಅವರ ಮೇಲೆ ಕ್ರಮ ಕೈಗೊಂಡಿಲ್ಲ, ಕೂಡಲೇ ಅವರ ವಿರುದ್ಧ ಕ್ರಮ ಜರುಗಿಸಬೇಕು, ಇಲ್ಲದಿದ್ದರೆ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟಿಸುವುದಾಗಿ ಎಚ್ಚರಿಸಿದರು.
ಸಾಮಾಜಿಕ ಮಾಧ್ಯಮ ಚಾನೆಲ್ ಹೊಂದಿದ ನಾಲ್ವರೂ ಸಹ ನಿತ್ಯ ಕಲಬುರಗಿ ನಗರದಲ್ಲಿ ಜನಸಾಮಾನ್ಯರ ವಿಡಿಯೋಗಳನ್ನು ಸೃಷ್ಟಿಸಿ ನ್ಯಾಯ ಕೊಡಿಸುವ ಆಮೀಷವೊಡ್ಡಿ ಅವರಿಂದ ಸಾವಿರಾರು ರೂಪಾಯಿಗಳು ದೋಚುತ್ತಿದ್ದಾರೆ. ಈ ಪ್ರಕರಣ ಕುರಿತು ಗಂಭೀರ ಪರಿಗಣಿಸಿ ಆರೋಪಿಗಳ ವಿರುದ್ಧ ಕ್ರಮ ಜರುಗಿಸಬೇಕೆಂದು ನುಜಹತ್ ಸುಲ್ತಾನ್ ಅವರು ಆಗ್ರಹಿಸಿದರು.
ಈ ಕುರಿತು ನಗರ ಮಹಿಳಾ ಪೊಲೀಸ್ ಠಾಣೆಗೆ ಸಂಪರ್ಕಿಸಿದಾಗ ಪ್ರಕರಣ ದಾಖಲಿಸಿ, ಹೆಚ್ಚಿನ ವಿಚಾರಣೆ ನಡೆಯುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…