ಆಳಂದ ಜೆಪಿ ಶಾಲೆಯ ಪರೀಕ್ಷಾ ಕೇಂದ್ರದ ಅಪಪ್ರಚಾರ: ಸತ್ಯಕ್ಕೆ ದೂರ

ಆಳಂದ: ಪಟ್ಟಣದ ಲೋಕನಾಯಕ ಜಯ ಪ್ರಕಾಶ ನಾರಾಯಣ ಪ್ರೌಢಶಾಲೆಯಲ್ಲಿನ ೧೦ನೇ ತರಗತಿ ಪರೀಕ್ಷಾ ಕೇಂದ್ರದ ಇಂಗ್ಲಿಷ್ ಪರೀಕ್ಷೆಯ ದಿನದಂದು ಹೊರಗಿನಿಂದ ಯಾರೋ ದುರುದ್ದೇಶದಿಂದ ವಿಡಿಯೂ ಚಿತ್ರಿಕರಣ ಮಾಡಿ, ಸಂಸ್ಥೆಯ ಅಧ್ಯಕ್ಷರ ಹೆಸರು ಬಳಸಿ ಮಾಧ್ಯಮಗಳ ಮೂಲಕ ಅಪಪ್ರಚಾರ ಕೈಗೊಂಡಿರುವುದು ಹುರುಳಿಲ್ಲ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಚಿತ್ರಶೇಖರ ದೇಗುಲಮಡಿ ಅವರು ಮಾಧ್ಯಮಗಳ ವರದಿಯನ್ನು ತಳ್ಳಿಹಾಕಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಅವರು, ಪರೀಕ್ಷಾ ಕೇಂದ್ರಕ್ಕೆ ಸುಸರ್ಜಿತ ಕಟ್ಟಡ ಹೊಂದಿರುವ ಲೋಕ ಜಯ ಪ್ರಕಾಶ ನಾರಾಯಣ ಪ್ರೌಢಶಾಲೆಯ ಪ್ರಸಕ್ತ ಈ ಪರೀಕ್ಷಾ ಕೇಂದ್ರಕ್ಕೆ ಸಂಸ್ಥೆಯಿಂದ ಕುಡಿಯುವ ನೀರು, ಡೆಸ್ಕ್, ಸಿಸಿ ಕ್ಯಾಮಿರಾ ಸೇರಿದಂತೆ ಮೂಲಸೌಲಭ್ಯ ಸಹಕಾರ ದೊರೆತಿದೆ. ಅಲ್ಲದೆ, ನಕಲಿಗೆ ಆಸ್ಪದ ವಿಲ್ಲದಂತೆ ಸುವ್ಯವಸ್ಥಿತವಾಗಿ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳ ಸಹಕಾರದಿಂದ ಪರೀಕ್ಷೆ ಸುಗವಾಗಿ ನಡೆಯುತ್ತಿವೆ ಎಂದು ಅವರು ಹೇಳಿದರು.

ಪರೀಕ್ಷಾ ಕೇಂದ್ರದಲ್ಲಿ ನಕಲಿಗೆ ಆಸ್ಪದ ನೀಡದೆ ಸುವ್ಯವಸ್ಥಿತವಾಗಿ ಪರೀಕ್ಷೆ ನಡೆದ ಮೇಲೂ ಯಾರೂ ದುರುದ್ದೇಶದಿಂದ ಪರೀಕ್ಷಾ ಕೇಂದ್ರದ ಹೊರಗಿನಿಂದ ವಿಡಿಯೂ ಚಿತ್ರ್ರೀಕರಣ ಮಾಡಿ ಅಪಪ್ರಚಾರ ಕೈಗೊಂಡಿರುವುದು ಸರಿಯಲ್ಲ. ಏ.೪ರಂದು ನಡೆಯಲಿರುವ ಗಣಿತ, ೬ರಂದು ಸಮಾಜ ವಿಜ್ಞಾನ ೮ ರಂದು ಹಿಂದಿ ೧೧ರಂದು ವಿಜ್ಞಾನ ವಿಷಯದ ಪರೀಕ್ಷೆ ನಡೆಯಲಿದ್ದು, ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಪೊಲೀಸ್ ಬೀಗಿ ಭದ್ರತೆ ಒದಗಿಸು ಅಡೆ, ತಡೆ ಆಗದಂತೆ ನೋಡಿಕೊಳ್ಳಲಾಗುವುದು. ಇದಕ್ಕೆ ಪೊಲೀಸ್ ಅಧಿಕಾರಿಗಳು ಮತ್ತು ಪಾಲಕರ ಸಹಕಾರ ನೀಡಬೇಕು ಎಂದು ಅವರು ತಿಳಿಸಿದ್ದಾರೆ. ಈ ವೇಳೆ ಎಲ್‌ಎನ್‌ಜೆಪಿ ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕ ರಾಮಚಂದ್ರ ಕಟ್ಟಿ ಇದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

6 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

16 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

16 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

16 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago