ಅಂಬೇಡ್ಕರ್, ಜಗಜೀವನರಾಮ ಜಯಂತಿ : ಅದ್ದೂರಿ ಆಚರಣೆ

ಶಹಾಬಾದ: ತಾಲೂಕಾಡಳಿತ ಮತ್ತು ನಗರಸಭೆಯಿಂದ ಎಪ್ರಿಲ್ ೧೪ ರಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ೧೩೧ನೇ ಜಯಂತಿ ಹಾಗೂ ಎಪ್ರಿಲ್ ೫ ರಂದು ಹಸಿರು ಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನರಾಮ ಅವರ ೧೧೫ನೇ ಜಯಂತಿ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಚರಿಸಲು ತೀರ್ಮಾನಿಸಲಾಯಿತು.

ತಹಸೀಲ್ದಾರ ಸುರೇಶ ವರ್ಮಾ, ನಗರಸಭೆಯ ಪೌರಾಯುಕ್ತ ಡಾ.ಕೆ.ಗುರಲಿಂಗಪ್ಪ , ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಬಸಲಿಂಗಪ್ಪ ಡಿಗ್ಗಿ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ವಿವಿಧ ಸಂಘಟನೆಗಳ ಮುಖಂಡರು, ಅಧಿಕಾರಿಗಳೊಂದಿಗೆ ನಡೆದ ಪೂರ್ವಭಾವಿ ಸಭೆಯಲ್ಲಿ ಈ ತೀರ್ಮಾನಕ್ಕೆ ಬರಲಾಗಿದೆ.

ದಸಂಸ ಮುಖಂಡ ಕೃಷ್ಣಪ್ಪ ಕರಣಿಕ್ ಮಾತನಾಡಿ,ಎರಡು ವರ್ಷದಿಂದ ಕೋವಿಡ್ ಇರುವ ಕಾರಣ ಜಯಂತಿ ಅದ್ದೂರಿಯಾಗಿ ಆಚರಿಸಲು ಸಾಧ್ಯವಾಗಿಲ್ಲ.ಆದ್ದರಿಂದ ಈ ಬಾರಿ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲಾಗುತ್ತದೆ ಎಂದರು. ತಾಲೂಕಾಡಳಿತ ಮತ್ತು ನಗರಸಭೆಯಿಂದ ಆಚರಿಸಬೇಕೋ ಅಥವಾ ಸಮಾಜದಿಂದ ಜಯಂತಿಯನ್ನು ಆಚರಿಸಬೇಕೋ ಎಂದು ತಹಸೀಲ್ದಾರರು ಕೇಳಿದಕ್ಕೆ ಮುಖಂಡರು ಸಮಾಜದ ವತಿಯಿಂದಲೇ ಆಚರಿಸುತ್ತೆವೆ ಎಂದರು.

ನಂತರ ತಹಸೀಲ್ದಾರರು ಮಾತನಾಡಿ, ಎಪ್ರಿಲ್ ೧೪ ರಂದು ಅಂಬೇಡ್ಕರ್ ಅವರ ಮತ್ತು ಎಪ್ರಿಲ್ ೫ ರಂದು ಬಾಬು ಜಗಜೀವನರಾಮ ಅವರ ಜಯಂತಿಯನ್ನು ಎಂದಿನಂತೆ ಸರಕಾರಿ ಕಚೇರಿಗಳಲ್ಲಿ ಸರಳವಾಗಿ ಆಚರಿಸಲಾಗುತ್ತದೆ. ಮುಂದಿನ ದಿನಾಂಕ ನಿಗದಿಪಡಿಸಿ ಸಮಾಜದಿಂದ ಜಯಂತಿಗಳನ್ನು ಅದ್ದೂರಿಯಾಗಿ ಆಚರಿಸಲು ತಿಳಿಸಿದರು.

ದಸಂಸ ರಾಜ್ಯ ಸಂಘಟನಾ ಸಂಚಾಲಕ ಮರೆಪ್ಪ ಹಳ್ಳಿ ಮಾತನಾಡಿ, ಯಾವುದೇ ಜಯಂತಿಗಳಾಗಲಿ ಎಲ್ಲಾ ಸಮಾಜದವರನ್ನು ಕರೆದು ಸಭೆ ನಡೆಸಬೇಕು.ಅಲ್ಲದೇ ಎಲ್ಲಾ ಜಯಂತಿಗಳಲ್ಲಿ ಎಲ್ಲಾ ಸಮಾಜದವರು ಭಾಗವಹಿಸುವಂತಾದರೆ ಜಯಂತಿಗೆ ಅರ್ಥ ಬರುತ್ತದೆ ಎಂದು ಹೇಳಿದರು.ಇದಕ್ಕೆ ಎಲ್ಲರೂ ಸಮ್ಮತಿಸಿದರು.

ಈ ಸಂದರ್ಭದಲ್ಲಿ ಮುಖಂಡರಾದ ಗಿರೀಶ ಕಂಬಾನೂರ, ರಾಜೇಶ ಯನಗುಂಟಿಕರ, ನಾಗರಾಜ ಕರಣಿಕ್,ಪ್ರವೀಣ ರಾಜನ್,ಡಿ.ಡಿ.ಓಣಿ, ನಾಗಪ್ಪ ಬೆಳಮಗಿ, ಸ್ನೇಹಲ್ ಜಾಯಿ, ಬಸವರಾಜ ಮಯೂರ,ನರಸಿಂಹಲೂ ರಾಯಚೂರಕರ್,ಮಹಾದೇವ ತರನಳ್ಳಿ, ಪೂಜಪ್ಪ ಮೇತ್ರೆ, ಅಶೋಕ ತುತಾರೆ,ಸುಭಾಷ ಸಾಕ್ರೆ,ಸಂತೋಷ ಹುಲಿ, ಮಲ್ಲಣ್ಣ ಮಸ್ಕಿ, ಪಿಎಸ್‌ಐ ಸುವರ್ಣಾ ಮಲಶೆಟ್ಟಿ ಸೇರಿದಂತೆ ಸಮಾಜದ ಮುಖಂಡರು ಇದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

9 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

18 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

18 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

19 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago