ಕಲಬುರಗಿ: ಜಿಲ್ಲಾ ಪತ್ರಿಕಾ ಭವನದ ನಿರ್ವಹಣೆಯನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮಾಡಲಿದ್ದು, ಸಂಘ-ಸಂಸ್ಥೆಗಳು/ಪದಾಧಿಕಾರಿಗಳು ಹಾಗೂ ಇನ್ನಿತರರು ಎಂದಿನಂತೆ, ನಿಗದಿತ ಶುಲ್ಕ ಪಾವತಿಸಿ ಪತ್ರಿಕಾಗೋಷ್ಠಿಗಳ ಸಮಯವನ್ನು ಮೊದಲೇ ಕಾಯ್ದಿರಿಸಿಕೊಳ್ಳಬಹುದಾಗಿದೆ ಎಂದು ಜಿಲ್ಲಾ ಪತ್ರಿಕಾ ಭವನ ಸಮಿತಿಯ ಸದಸ್ಯರೂ ಆಗಿರುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪ ನಿರ್ದೇಶಕÀ ಸಿದ್ದೇಶ್ವರಪ್ಪ.ಜಿ.ಬಿ ಅವರು ತಿಳಿಸಿದ್ದಾರೆ.
ಪ್ರತಿ ಪತ್ರಿಕಾಗೋಷ್ಠಿಗೆ 1,000 ರೂಪಾಯಿ ನಿಗದಿ ಪಡಿಸಲಾಗಿದ್ದು, ಕಚೇರಿಗೆ ಒಂದು ದಿನ ಮುಂಚಿತವಾಗಿ ಬಂದು ಶುಲ್ಕ ಸಂದಾಯ ಮಾಡಿ ಪತ್ರಿಕಾಗೋಷ್ಠಿಗಳ ಸಮಯ ಬುಕ್ ಮಾಡಿಕೊಳ್ಳಬಹುದು. ಪತ್ರಿಕಾಗೋಷ್ಠಿಗಳ ಮಾಹಿತಿ ಹಾಗೂ ಕಾಯ್ದಿರಿಸುವಿಕೆಗಾಗಿ ಈ ಕಚೇರಿ ಸಿನಿ ಚಾಲಕರಾದ ಶ್ರೀ ಉಮಾಶಂಕರ್ ಮೊಬೈಲ್ ಸಂಖ್ಯೆ- 70195 73201 ಗೆ ಕರೆ ಮಾಡಬಹುದು ಎಂದು ಅವರು ತಿಳಿಸಿದ್ದಾರೆ.
ಈ ಮೊದಲು ಪತ್ರಿಕಾ ಭವನ ನಿರ್ವಹಣೆ ಮಾಡುತ್ತಿದ್ದ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ಕಲಬುರಗಿ ಜಿಲ್ಲಾ ಘಟಕ ಸದ್ಯ ಅಸ್ತಿತ್ವದಲ್ಲಿಲ್ಲ. ಹಾಗಾಗಿ ಜಿಲ್ಲಾ ಪತ್ರಿಕಾ ಭವನ ಸಮಿತಿಯ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಯಶವಂತ್.ವಿ. ಗುರುಕರ್ ಅವರ ನಿರ್ದೇಶನ ಮೇರೆಗೆ ನಿರ್ವಹಣೆಗೆ ಕ್ರಮಕೈಗೊಳ್ಳಲಾಗಿದೆ. ಪತ್ರಿಕಾಗೋಷ್ಠಿಯೊಂದಕ್ಕೆ ಒಂದು ಸಾವಿರ ರೂಪಾಯಿ ಮಾತ್ರ ಶುಲ್ಕ ಸಂಗ್ರಹಿಸಲಾಗುವುದು. ಯಾವುದೇ ಹೆಚ್ಚುವರಿ ಹಣ ಪಾವತಿಸುವಂತಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಪತ್ರಿಕಾಗೋಷ್ಠಿಗೆ ಆಗಮಿಸುವ ಮಾಧ್ಯಮ ಪ್ರತಿನಿಧಿಗಳ ಔತಣ/ಸತ್ಕಾರಕ್ಕಾಗಿ ಪತ್ರಿಕಾಗೋಷ್ಠಿ ನಡೆಸುವ ಆಯಾ ಸಂಘ-ಸಂಸ್ಥೆಗಳ ಪ್ರತಿನಿಧಿಗಳೇ ನಿಗದಿ ಪಡಿಸಿದ ಸಮಯದಲ್ಲಿ ತಮ್ಮ ಸ್ವಂತ ಖರ್ಚಿನಲ್ಲಿ ಚಹಾ/ಕಾಫಿ/ಉಪಹಾರ ವ್ಯವಸ್ಥೆ ಮಾಡಿಕೊಳ್ಳಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…