“ದೇಶಕ್ಕೆ ಬಾಬುಜೀ ಕೊಡುಗೆ ಅಪಾರ : ಸೋಮಶೇಖರ್ ಲಮಾಣಿ ಅಭಿಮತ”

0
72

ಕೊಪ್ಪಳ (ಕುಕನೂರ) : ‘ಡಾ.ಬಾಬು ಜಗಜೀವನ ರಾಮ್ ಅವರು ತಮ್ಮ ಬದುಕಿನುದ್ದಕ್ಕೂ ಎಲ್ಲಾ ಕ್ಷೇತ್ರಗಳಿಗೆ ಅಪಾರ ಕೊಡುಗೆ ನೀಡಿದ ಮಹಾನ್ ನಾಯಕರಾಗಿದ್ದಾರೆ’ ಎಂದು ವಿದ್ಯಾನಂದ ಗುರುಕುಲ ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಸೋಮಶೇಖರ್ ಲಮಾಣಿ ಹೇಳಿದರು.

ಅವರು ಪಟ್ಟಣದ ವಿದ್ಯಾನಂದ ಗುರುಕುಲ ಪ್ರೌಢಶಾಲೆಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಡಾ.ಬಾಬು ಜಗಜೀವನ ರಾಮ್ ಅವರ 115ನೇ ಜಯಂತ್ಸೋತ್ಸವದಲ್ಲಿ ಕಾರ್ಯಕ್ರಮದಲ್ಲಿ ಬಾಬುಜೀ ಅವರ ಭಾವ ಚಿತ್ರಕ್ಕೆ ಪೂಜೆ ಸಲ್ಲಿಸಿ ಹೂ ಮಾಲೆ ಅರ್ಪಿಸಿ ಅವರು ಮಾತನಾಡಿದರು.

Contact Your\'s Advertisement; 9902492681

‘ಸಮಾಜದಲ್ಲಿನ ಅಸ್ಪೃಶ್ಯತೆಯನ್ನು ಹೋಗಲಾಡಿಸುವಲ್ಲಿ ಬಾಬೂಜಿ ಕೊಡುಗೆ ಅಪಾರವಾಗಿದೆ. ಜಾತಿ ವ್ಯವಸ್ಥೆಯನ್ನು ತೊಡೆದುಹಾಕಿ ಎಲ್ಲರಲ್ಲೂ ಸಮಾನತೆ ತರುವುದು ಅವರ ಮುಖ್ಯ ಉದ್ದೇಶವಾಗಿತ್ತು. ದೇಶದಲ್ಲಿ ಸಮರ್ಪಕವಾಗಿ ಎಲ್ಲರಿಗೂ ಆಹಾರ ದೊರೆಯದೇ ಇದ್ದಾಗ ಕೇಂದ್ರದಲ್ಲಿ ಕೃಷಿ ಸಚಿವರಾಗಿ ಕೃಷಿಯಲ್ಲಿ ಗಣನೀಯ ಬದಲಾವಣೆ ತಂದರು. ಹಸಿರು ಕ್ರಾಂತಿ ರೂಪಿಸಿ ರೈತರನ್ನು ಆರ್ಥಿಕವಾಗಿ ಸ್ವಾವಲಂಬಿಯಾಗಿಸಿದರು. ಆಹಾರ ಉತ್ಪಾದನೆ ಹೆಚ್ಚಿಸಿದರು’ ಎಂದು ಬಣ್ಣಿಸಿದರು.

‘ಅಭಿವೃದ್ಧಿ ಹೊಂದುತ್ತಿರುವ ದೇಶಗಳ ಪಟ್ಟಿಗೆ ಭಾರತವನ್ನು ಸೇರಿಸುವಲ್ಲಿ ಜಗಜೀವನ ರಾಮ್ ಅವರ ಪಾತ್ರ ಮಹತ್ವದ್ದಾಗಿದೆ. ಸಾಮಾಜಿಕ ಸುಧಾರಣೆ, ಹಸಿರು ಕ್ರಾಂತಿ ಅಲ್ಲದೇ ಇನ್ನೂ ಹಲವಾರು ಕ್ಷೇತ್ರಗಳ ಅಭಿವೃದ್ಧಿಯಲ್ಲಿ ತಮ್ಮ ಛಾಪನ್ನು ಮೂಡಿಸಿದ್ದಾರೆ’ ಎಂದು ಹೇಳಿದರು.

ಈ ಸಂದರ್ಭದಲ್ಲಿ ಶಾಲಾ ಶಿಕ್ಷಕ ಸಿಬ್ಬಂದಿಗಳಾದ ರಾಜು ಪೂಜಾರಿ,ಗಿರೀಶ್ ನಿಲೋಗಲ್, ಆರ್. ಎಂ. ದೇವರೆಡ್ಡಿ, ಗೀತಾ ಪದಕಿ, ಶ್ರೀಲತಾ ಕೆ., ಉಮಾ ದೇಸಾಯಿ, ಅರುಂದತಿ ಬಟನೂರ, ಉದಯ ನಿಂಗಾಪುರ ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here