ಡಾ:ಬಾಬು ಜಗಜೀವನರಾಮ್ ಜಯಂತಿ ಆಚರಣೆ:ಶಾಸಕ ರಾಜುಗೌಡ ಚಾಲನೆ

ಸುರಪುರ:ತಾಲೂಕು ಆಡಳಿತ ದಿಂದ ಭಾರತದ ಮಾಜಿ ಉಪ ಪ್ರಧಾನಿ ಡಾ:ಬಾಬು ಜಗಜೀವನರಾಮ್ ಅವರ ೧೧೫ನೇ ಜಯಂತಿ ಹಮ್ಮಿಕೊಳ್ಳಲಾಗಿತ್ತು.ನಗರದ ಡಾ:ಬಿ,ಆರ್ ಅಂಬೇಡ್ಕರ್ ವೃತ್ತದಲ್ಲಿ ಹಮ್ಮಿಕೊಳ್ಳಲಾಗಿದ್ದ ಮೆರವಣಿಗೆಗೆ ಶಾಸಕ ನರಸಿಂಹ ನಾಯಕ (ರಾಜುಗೌಡ) ಚಾಲನೆ ನೀಡಿದರು.

ನಗರದ ಪ್ರಮುಖ ಬೀದಿಗಳ ಮೂಲಕ ತಹಸೀಲ್ ಕಚೇರಿ ವರೆಗೆ ಮೆರವಣಿಗೆಯನ್ನು ನಡೆಸಲಾಯಿತು.ನಂತರ ನಡೆದ ಉಪನ್ಯಾಸ ಕಾರ್ಯಕ್ರಮಕ್ಕೆ ಜ್ಯೋತಿ ಬೆಳಗಿಸುವ ಮೂಲಕ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಪ್ರಕಾಶ ಸಜ್ಜನ್ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಉಪನ್ಯಾಸಕರಾಗಿ ಭಾಗವಹಿಸಿದ್ದ ಉಪ ಖಜಾನಾಧಿಕಾರಿ ಡಾ:ಮೋನಪ್ಪ ಶಿರವಾಳ ಮಾತನಾಡಿ,ದೇಶದ ಉಪ ಪ್ರಧಾನಿಯಾಗಿದ್ದ ಡಾ:ಬಾಬು ಜಗಜೀವನರಾಮ್ ಅವರು ಈ ದೇಶಕಂಡ ಮಹಾನ್ ವ್ಯಕ್ತಿಯಾಗಿದ್ದಾರೆ.ಅವರು ಕೃಷಿ ಸಚಿವರಾಜಿ,ರಕ್ಷಣಾ ಸಚಿವರಾಗಿ ಅನೇಕ ಸುಧಾರಣೆಗಳನ್ನು ಮಾಡುವ ಮೂಲಕ ಇಂದಿಗೂ ಎಲ್ಲರ ನೆನಪಲ್ಲಿ ಉಳಿದಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಅಬಕಾರಿ ಉಪ ನಿರೀಕ್ಷಕಿ ಪೂಜಾ ಖರ್ಗೆ ಮಾತನಾಡಿ,ಮಹಾತ್ಮರು ಹಾಗು ಮಹಾನ್ ಪುರುಷರ ಜಯಂತಿ ಆಚರಣೆ ಯಾವುದೇ ಒಂದು ಸಮುದಾಯಕ್ಕೆ ಸೀಮಿತಗೊಳಿಸದೆ ಎಲ್ಲರು ಸೇರಿ ಆಚರಿಸಬೇಕು ಮತ್ತು ಅವರು ನೀಡಿರುವ ಆದರ್ಶ ಸಂದೇಶಗಳನ್ನು ಎಲ್ಲರು ಬದುಕಿನಲ್ಲಿ ಅಳವಡಿಸಿಕೊಳ್ಳುವುದಲ್ಲೆ ಮಕ್ಕಳಿಗು ತಿಳಿಸಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ತಹಸೀಲ್ದಾರ್ ಸುಬ್ಬಣ್ಣ ಜಮಖಂಡಿ ಮಾತನಾಡಿ,ಎಲ್ಲ ಮಹಾನ್ ಪುರುಷರು ನೀಡಿದ ಸಂದೇಶಗಳನ್ನು ಎಲ್ಲರು ಪಾಲಿಸಿದರೆ ಸಮಾಜದಲ್ಲಿ ಬದಾಲವಣೆ ತರಲು ಸಾಧ್ಯವಿದೆ.ಡಾ:ಬಾಬು ಜಗಜೀವನರಾಮ್ ಅವರು ನೀರಾವರಿ ಯೋಜನೆಯನ್ನು ಜಾರಿಗೆ ತರುವುದರ ಜೊತೆಗೆ ಅವರು ಕೃಷಿ ಸಚಿವರಾಹಿ ಹೈನುಗಾರಿಕೆಗೆ ನೀಡಿದ ಕೊಡುಗೆಯಿಂದಾಗಿ ಅವರನ್ನು ಹಸಿರು ಕ್ರಾಂತಿಯ ಹರಿಕಾರ ಎನ್ನಲಾಗುತ್ತದೆ ಎಂದರು.

ವೇದಿಕೆ ಮೇಲಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ಮಹಾದೇವರಡ್ಡಿ ಮಾತನಾಡಿದರು. ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಸತ್ಯನಾರಾಯಣ ದರಬಾರಿ,ಸಮಾಜ ಕಲ್ಯಾಣಾಧಿಕಾರಿ ಸಲೀಂ ಇದ್ದರು.ಕಾರ್ಯಕ್ರಮದಲ್ಲಿ ಮುಖಂಡರಾದ ವೆಂಕಟೇಶ ಹೊಸ್ಮನಿ,ನಾಗಣ್ಣ ಕಲ್ಲದೇವನಹಳ್ಳಿ,ಭೀಮಾಶಂಕರ ಬಿಲ್ಲವ್,ಯಲ್ಲಪ್ಪ ಹುಲಿಕಲ್,ದಾನಪ್ಪ ಕಡಿಮನಿ,ಮೂರ್ತಿ ಬೊಮ್ಮನಹಳ್ಳಿ,ಹಣಮಂತ ಕಟ್ಟಿಮನಿ,ಮಾಳಪ್ಪ ಕಿರದಳ್ಳಿ,ರಾಹುಲ್ ಹುಲಿಮನಿ,ಮಾನಪ್ಪ ಕಟ್ಟಿಮನಿ,ಚಂದ್ರು ದೊಡ್ಮನಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಅನೇಕ ಮುಖಂಡರು ಭಾಗವಹಿಸಿದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

7 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

17 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

17 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

17 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago