ಶಹಾಬಾದ: ಕರ್ನಾಟಕ ರಾಜ್ಯ ಸರಕಾರಿ ನೌಕರರಿಗೆ ಶೇ ೨.೭೫% ತುಟ್ಟಿ ಭತ್ಯೆಯನ್ನು ಮಂಜೂರು ಮಾಡಿ ಆದೇಶ ಹೊರಡಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಕ್ಷರಿ ಅವರಿಗೆ ಅಭಿನಂದಿಸುತ್ತೆವೆ ಎಂದು ಸರಕಾರಿ ನೌಕರರ ಸಂಘದ ತಾಲೂಕಾಧ್ಯಕ್ಷ ಈರಣ್ಣ ಕೆಂಭಾವಿ ತಿಳಿಸಿದ್ದಾರೆ.
ಕರ್ನಾಟಕ ರಾಜ್ಯ ಸರಕಾರಿ ನೌಕರರಿಗೆ ದಿ.೦೧-೦೧-೨೦೨೨ರಿಂದ ಬಾಕಿ ಇದ್ದ ತುಟ್ಟಿ ಭತ್ಯೆಯನ್ನು ಬಿಡುಗಡೆ ಮಾಡಲು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘವು ಸಲ್ಲಿಸಿದ ಮನವಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ಪಂದಿಸಿ ಸರಕಾರಿ ನೌಕರರಿಗೆ ಶೇ ೨.೭೫% ತುಟ್ಟಿ ಭತ್ಯೆಯನ್ನು ಮಂಜೂರು ಮಾಡಿ ಆದೇಶ ಹೊರಡಿಸಿದ್ದಾರೆ. ಸಂಘವು ಸಲ್ಲಿಸಿದ ಮನವಿಗೆ ಶೀಘ್ರವಾಗಿ ಸ್ಪಂದಿಸಿ ತುಟ್ಟಿ ಭತ್ಯೆಯನ್ನು ಮಂಜೂರು ಮಾಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಶ್ರಮಿಸಿದ ಸಿ.ಎಸ್.ಷಡಕ್ಷರಿ ಅವರಿಗೆ ರಾಜ್ಯದ ಎಲ್ಲಾ ಸರಕಾರಿ ನೌಕರರ ಪರವಾಗಿ ಅಭಿನಂದಿಸುತ್ತೆವೆ ಎಂದು ಹೇಳಿದರು.