ಶಹಾಬಾದ: ಶಾಲೆಗಳು ಮಕ್ಕಳ ಜ್ಞಾನಾಭಿವೃದ್ಧಿಗೆ ಕೆಲಸ ಮಾಡುವ ಹಾಗೇ ಕಲಿಕೆಯಲ್ಲಿ ಹಿಂದುಳಿದ ಮಕ್ಕಳಿಗೆ ಜ್ಞಾನವನ್ನು ನೀಡಿ ಕಲಿಕೆಯಲ್ಲಿ ನಿರಂತರತೆ ಕಾಪಾಡುವಲ್ಲಿ ಕೋಚಿಂಗ್ ಕೇಂದ್ರಗಳು ಸಹಾಯಕವಾಗಲಿವೆ ಶಿಶು ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ಶಕುಂತಲಾ. ಎಸ್. ಸಾಕ್ರೆ ಹೇಳಿದರು.
ಅವರು ನಗರದ ಲಕ್ಷ್ಮಿ ಗಂಜ್‌ನಲ್ಲಿ ಆಯೋಜಿಸಲಾದ ನೂತನ ಪ್ರಜ್ಞಾ ನವೋದಯ ಕೋಚಿಂಗ್ ಕೇಂದ್ರದ ಉದ್ಘಾಟನಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಕಲಿಕಾ ಮನೋಭಾವವನ್ನಿಟ್ಟುಕೊಂಡು ಹೆಚ್ಚು ಹೆಚ್ಚು ವಿಷಯಗಳನ್ನು ಸತತ ಪರಿಶ್ರಮದಿಂದ ಅಭ್ಯಾಸ ಮಾಡಿದರೆ ಮಾತ್ರ ನಿರ್ದಿಷ್ಟ ಗುರಿ ಮುಟ್ಟಲು ಸಾಧ್ಯ. ಬದುಕಿನ ಕೊನೆ ಉಸಿರಿರುವವರೆಗೂ ವಿದ್ಯೆಯನ್ನು ಸಂಪಾದಿಸುತ್ತಲೇ ಇರಬೇಕು.ಕಲಿತ ವಿದ್ಯೆಯನ್ನು ಸಮಾಜದ ಹಿತಕ್ಕೆ ಬಳಸಬೇಕು. ಆಗ ಮಾತ್ರ ಬದುಕಿನ ಸಾರ್ಥಕತೆ ದೊರೆಯುತ್ತದೆ.ಈ ಭಾಗದ ಮಕ್ಕಳು ಬೇಸಿಗೆಯಲ್ಲಿ ಕಾಲಹರಣ ಮಾಡದೇ ನಿರಂತರವಾಗಿ ಅಭ್ಯಾಸ ಮಾಡಲು ಕೋಚಿಂಗ್ ಕೇಂದ್ರ ಸಹಾಯಕವಾಗಲಿದೆ. ಇದರ ಲಾಭವನ್ನು ವಿದ್ಯಾರ್ಥಿಗಳು ಹಾಗೂ ಪಾಲಕರು ಪಡೆದಕೊಳ್ಳಬೇಕೆಂದು ಹೇಳಿದರು.
ಕೋಚಿಂಗ್ ಕೇಂದ್ರದ ನಿರ್ದೇಶಕರಾದ ಪಿ.ಎಸ್.ಮೇತ್ರೆ ಮಾತನಾಡಿ, ವಿದ್ಯಾರ್ಥಿಗಳಿಗೆ ಈ ಸ್ಪರ್ಧಾತ್ಮಕ ಜಗತ್ತಿನಲ್ಲಿ ಯಶಸ್ಸು ಗಳಿಸಲು, ಕಲಿಕೆಯ ಪೂರಕ ವಾತಾವರಣದಲ್ಲಿ ಮೌಲ್ಯಾಧಾರಿತ ಹಾಗೂ ಅತ್ಯುತ್ತಮ ಗುಣಮಟ್ಟದ ಕೋಚಿಂಗ್ ನೀಡುವುದೇ ನಮ್ಮಧ್ಯೇಯವಾಗಿದೆ ಎಂದು ಹೇಳಿದರು.
ಸುರೇಖಾ.ಪಿ.ಮೇತ್ರೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಶಿಕ್ಷಕರಾದ ರಸಿಕಾ.ಎಸ್, ಪ್ರೀತಿ.ಎಸ್, ಐಶ್ವರ್ಯ.ಎಮ್ ಇತರರು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…