ಕೃಷಿ, ಕಾರ್ಮಿಕ ಕ್ಷೇತ್ರಗಳಲ್ಲಿ ಡಾ. ಬಾಬು ಜಗಜೀವರಾಂ ಅವರ ಕೊಡುಗೆ ಅಪಾರ: ಶಶೀಲ್ ಜಿ. ನಮೋಶಿ

0
12

ಕಲಬುರಗಿ: ದೇಶ ಕಂಡ ಅಪರೂಪದ ರಾಜಕಾರಣಿ ಮತ್ತು ಹಸಿರು ಕ್ರಾಂತಿಯ ಹರಿಕಾರರಾಗಿರುವ ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನರಾಂ ಅವರ ಕೊಡುಗೆ ಕೃಷಿ ಮತ್ತು ಕಾರ್ಮಿಕ ಕ್ಷೇತ್ರದಲ್ಲಿ ಅಪಾರವಾಗಿದೆ ಎಂದು ವಿಧಾನ ಪರಿ?ತ್ ಸದಸ್ಯ ಶಶೀಲ್ ಜಿ. ನಮೋಶಿ ಅವರು ಹೇಳಿದರು.

ಮಂಗಳವಾರ ಇಲ್ಲಿನ ಟೌನ್ ಹಾಲ್ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಮಹಾನಗರ ಪಾಲಿಕೆ, ಜಿಲ್ಲಾ ನಾಗರಾಭಿವೃದ್ಧಿ ಕೋಶ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರುಗಳ ಸಂಯುಕ್ತಾಶ್ರಯದಲ್ಲಿ ನಡೆದ ಹಸಿರು ಕ್ರಾಂತಿ ಹರಿಕಾರ, ದೀನ ದಲಿತೋದ್ಧಾರಕ ಹಾಗೂ ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನರಾಂ ಅವರ ೧೧೫ನೇ ಜಯಂತೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

Contact Your\'s Advertisement; 9902492681

ಒಂದು ಕಡೆ ಡಾ.ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನ ರಚಿಸಿ ಶೋಷಿತರನ್ನು ಮೇಲೆತ್ತುವ ಕೆಲಸ ಮಾಡಿದರೆ, ಇನ್ನೊಂದೆಡೆ ಡಾ.ಬಾಬು ಜಗಜೀವನರಾಂ ಅವರು ಕಾರ್ಮಿಕರು ಹಾಗೂ ದಲಿತರ ಸಮಸ್ಯೆಗಳ ವಿರುದ್ಧ ಧ್ವನಿ ಎತ್ತಿ ಅವರ ಹಕ್ಕುಗಳನ್ನು ಲಭಿಸುವಂತೆ ಹೋರಾಡಿದವರು. ಬರಗಾಲದ ಸಂದರ್ಭದಲ್ಲಿ ಆಹಾರ ಧಾನ್ಯದ ಕೊರತೆ ನೀಗಿಸಿದ ಮಹಾನ್ ಚೇತನ ಡಾ.ಬಾಬು ಜಗಜೀವನರಾಂ ಅವರರಾಗಿದ್ದಾರೆ ಎಂದರು.

ಡಾ. ಬಾಬು ಜಗಜೀವನರಾಂ ಅವರು ಹಾಕಿಕೊಟ್ಟ ಮಾರ್ಗದರ್ಶನದಲ್ಲಿ ನಾವೆಲ್ಲರೂ ನಡೆಯಬೇಕಿದೆ. ಸಂವಿಧಾನದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯಕ್ಕೆ ನೀಡಿರುವ ಮೀಸಲಾತಿಯನ್ನು ಸರಿಯಾಗಿ ಅನು?ನಗೊಳಿಸಬೇಕು. ೩೭೧(ಜೆ) ವಿಶೇಷ ಮೀಸಲಾತಿ ಕಲ್ಯಾಣ ಕರ್ನಾಟಕ ಭಾಗಕ್ಕೆ ದೊಡ್ಡ ಅಸ್ತ್ರವಾಗಿದ್ದು, ಹಿಂದುಳಿದ, ಶೋಷಿತರಿಗೆ ಇದು ವರದಾನವಾಗಿ ಮಾರ್ಪಡಲಿ ಎಂದು ಅವರು ಆಶಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್ ಅವರು ಮಾತನಾಡಿ, ಡಾ. ಬಾಬು ಜಗಜೀವನರಾಂ ಅವರೊಬ್ಬ ಉತ್ತಮ ಸಂಸದೀಯ ಪಟುವಾಗಿದ್ದರು. ತಮ್ಮ ಇಡೀ ಜೀವನ ಶೋಷಿತರ ವರ್ಗದ ಕಲ್ಯಾಣಕ್ಕಾಗಿ ಮುಡುಪಾಗಿಟ್ಟ ಧೀಮಂತ ವ್ಯಕ್ತಿಯಾಗಿದ್ದರು. ಇವರ ಆದರ್ಶ ಗುಣಗಳನ್ನು ನಾವೆಲ್ಲರೂ ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕಾಗಿದೆ ಎಂದು ಕರೆ ನೀಡಿದರು.
ಸದ್ಯ ದೇಶದಲ್ಲಿ ಆತ್ಮ ನಿರ್ಭರ ಯೋಜನೆ ಮೂಲಕ ಸಾಕ? ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ. ಆದರೆ ಅಂದು ಬಾಬು ಜಗಜೀವನರಾಂ ಅವರು ರೈತರೊಂದಿಗೆ ಸೇರಿ ದೇಶದಲ್ಲಿ ಹಸಿರು ಕ್ರಾಂತಿ ಮೂಲಕ ಮೊದಲ ಆತ್ಮ ನಿರ್ಭರ ಮಾಡಿದರು ಎಂದರೆ ತಪ್ಪಾಗುವುದಿಲ್ಲ. ವಿದ್ಯಾರ್ಥಿಗಳಿಗೆ ಹಾಗೂ ಯುವಕರಿಗೆ ಜಗಜೀವನರಾಂ ಅವರ ಆದರ್ಶ ತತ್ವಗಳನ್ನುಇ ಪಾಲಿಸಬೇಕೆಂದು ತಿಳಿಸಿದರು.

ಅಫಜಲಪೂರ ತಾಲೂಕಿನ ಕರ್ಜಗಿಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಮಲ್ಲಿಕಾರ್ಜುನ ಎಂ. ಸಾವರಕರ್ ಅವರು ಡಾ.ಬಾಬು ಜಗಜೀವನರಾಂ ಅವರ ಕುರಿತು ವಿಶೇ? ಉಪನ್ಯಾಸ ನೀಡಿದರು.

೨ ಲಕ್ಷ ರೂ. ಮಂಜೂರಾತಿ ಆದೇಶ ವಿತರಣೆ: ಇದೇ ಸಂದರ್ಭದಲ್ಲಿ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ಕೆಲಸದ ಸಂದರ್ಭದಲ್ಲಿ ಅಪಘಾತಗೊಂಡು ಮರಣ ಹೊಂದಿದ ಕಾರ್ಮಿಕ ಅರ್ಜುನ್ ಅವರ ಪತ್ನಿ ನಾಗಮ್ಮ ಅವರಿಗೆ ೨ ಲಕ್ಷ ರೂ. ಹಾಗೂ ಕಾರ್ಮಿಕ ಮರಿಲಿಂಗಯ್ಯ ಅವರ ಮಗನ ಮದುವೆ ಖರ್ಚಿಗಾಗಿ ೫೦ ಸಾವಿರ ರೂ. ಧನಸಹಾಯ ಮಂಜೂರಾತಿ ಪತ್ರವನ್ನು ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್ ಅವರು ಫಲಾನುಭವಿಗಳಿಗೆ ನೀಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ದಿಲೀ? ಸಾಸಿ, ಜಿಲ್ಲಾ ಪೊಲೀಸ್ ವರಿ?ಧಿಕಾರಿ ಇಶಾ ಪಂತ್, ಡಿ.ಸಿ.ಪಿ ಅಡ್ಡೂರು ಶ್ರೀನಿವಾಸಲು, ಮಹಾನಗರ ಪಾಲಿಕೆಯ ಆಯುಕ್ತ ಡಾ. ಶಂಕರ ವಣಿಕ್ಯಾಳ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಸಂತೋ? ಕುಮಾರ್, ಡಾ. ಬಾಬು ಜಗಜೀವನರಾಂ ಜಿಲ್ಲಾ ಜಯಂತೋತ್ಸವ ಸಮಿತಿ ಅಧ್ಯಕ್ಷ ದಶರಥ ಕಲಗುರ್ತಿ ಸೇರಿದಂತೆ ಸಮಾಜದ ಮುಖಂಡರು, ವಿವಿಧ ಇಲಾಖೆಯ ಅಧಿಕಾರಿಗಳು, ಸಾರ್ವಜನಿಕರು ಭಾಗವಹಿಸಿದ್ದರು.

ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಎಂ.ಅಲ್ಲಾಬಕಷ್ ಅವರು ಸ್ವಾಗತಿಸಿದರು. ಜಿಲ್ಲಾ ಸಮನ್ವಯಾಧಿಕಾರಿ ಶಿವರಾಂ ಚವ್ಹಾಣ ವಂದಿಸಿದರು.ಕೊರಳ್ಳಿ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆ ಪ್ರಾಂಶುಪಾಲ ಡಾ.ರಾಜಶೇಖರ ಮಾಂಗ್ ನಿರೂಪಿಸಿದರು.

ಜಗಜೀವನರಾಂ ಪುತ್ತಳಿಗೆ ಮಾಲಾರ್ಪಣೆ, ನಮನ ಸಲ್ಲಿಕೆ: ಇದಕ್ಕೂ ಮುನ್ನ ಟೌನ್ ಹಾಲ್‌ನಲ್ಲಿರುವ ಡಾ.ಬಾಬು ಜಗಜೀವನರಾಂ ಅವರ ಪುತ್ಥಳಿಗೆ ಶಾಸಕ ಬಸವರಾಜ ಮತ್ತಿಮಡು, ವಿಧಾನ ಪರಿ?ತ್ ಸದಸ್ಯ ಶಶೀಲ್ ಜಿ. ನಮೋಶಿ, ಮಾಜಿ ವಿಧಾನ ಪರಿಷತ್ ಸದಸ್ಯ ಅಲ್ಲಮಪ್ರಭು ಪಾಟೀಲ, ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಇಶಾ ಪಂತ್, ಡಿ.ಸಿ.ಪಿ. ಅಡ್ಡೂರ ಶ್ರೀನಿವಾಸಲು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ದಿಲೀಶ ಸಾಸಿ, ಮಹಾನಗರ ಪಾಲಿಕೆ ಆಯುಕ್ತ ಡಾ. ಶಂಕರ ವಣಿಕ್ಯಾಳ್, ಕಲಬುರಗಿ ಸಹಾಯಕ ಆಯುಕ್ತೆ ಮೋನಾ ರೋಟ್, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಎಂ.ಎಸ್. ಅಲ್ಲಾಬಕಷ್, ಡಿ.ಡಿ.ಪಿ.ಐ ಅಶೋಕ ಬಜಂತ್ರಿ, ಜಯಂತ್ಯೋತ್ಸವ ಸಮಿತಿ ಅಧ್ಯಕ್ಷ ದಶರಥ ಕಲಗುರ್ತಿ, ಮಾಜಿ ಮಹಾಪೌರರಾದ ಚಂದ್ರಿಕಾ ಪರಮೇಶ್ವರ, ಮುಖಂಡರಾದ ರಾಜು ವಾಡೇಕರ, ಶ್ಯಾಮ ನಾಟೇಕರ್, ರಾಜು ಕಟ್ಟಿ ಅವರು ಬಾಬು ಜಗಜೀವನರಾಂ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here