ಬಿಸಿ ಬಿಸಿ ಸುದ್ದಿ

ಸಮ್ಮಿಶ್ರ ಸರ್ಕಾರ ಪತನ ನಿಶ್ಚಿತ: ಸಂಸದ ಡಾ. ಜಾಧವ್

ಕಲಬುರಗಿ: ಅಲ್ಪಮತಕ್ಕೆ ಕುಸಿದಿರುವ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ನೇತೃತ್ವದ ಜಾತ್ಯಾತೀತ ಜನತಾದಳ ಹಾಗೂ ಕಾಂಗ್ರೆಸ್ ಮೈತ್ರಿಕೂಟದ ಸರ್ಕಾರ ಪತನವಾಗುವುದು ನಿಶ್ಚಿತ ಎಂದು ಬಿಜೆಪಿ ಸಂಸದ ಡಾ. ಉಮೇಶ್ ಜಾಧವ್ ಅವರು ಇಲ್ಲಿ ಹೇಳಿದರು.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಹುಮತ ಇಲ್ಲದೇ ಅಲ್ಪಮತಕ್ಕೆ ಕುಸಿದರೂ ಸಹ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ರಾಜೀನಾಮೆ ಕೊಡದೇ ಕೇವಲ ಕಾಲಹರಣ ಮಾಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ವಿಧಾನಸಭಾಧ್ಯಕ್ಷ ರಮೇಶಕುಮಾರ್ ಅವರ ನಡೆಯೂ ಸಹ ತೃಪ್ತಿಕರವಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಈಗಾಗಲೇ ನಾನು ಮುಂಬಯಿಗೆ ಹೋದಾಗ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿರುವ ೧೫ ಜನ ಶಾಸಕರನ್ನು ಭೇಟಿ ಮಾಡಿರುವೆ. ಅವರಿಗೆ ಎಲ್ಲ ರೀತಿಯ ಧೈರ್ಯವನ್ನು ತುಂಬಿ ಬಂದಿರುವೆ. ಆ ಶಾಸಕರಿಗೆ ರಾಜ್ಯದ ಸಮ್ಮಿಶ್ರ ಸರ್ಕಾರದ ಕುರಿತು ಸಮಾಧಾನ ಇಲ್ಲ. ತಮ್ಮ, ತಮ್ಮ ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ ಎಂಬ ಅಸಮಾಧಾನ ಇದೆ. ಅದಕ್ಕಾಗಿಯೇ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಾರೆ. ಈ ಕುರಿತು ವಿಧಾನಸಭಾಧ್ಯಕ್ಷರು ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದು ಅವರು ಹೇಳಿದರು.

ನಾನೂ ಸಹ ನನ್ನ ಚಿಂಚೋಳಿ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳು ಆಗದೇ ಇದ್ದುದರಿಂದ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಹಸ್ತಕ್ಷೇಪದಿಂದ ಬೇಸತ್ತು ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದೆ. ಆ ಸಂದರ್ಭದಲ್ಲಿಯೂ ಸಹ ಕಾಂಗ್ರೆಸ್ಸಿಗರು ನನ್ನ ವಿರುದ್ಧ ಮಾರಾಟದ ಕುರಿತು ಆರೋಪ ಮಾಡಿ ಪ್ರತಿಭಟನೆ ಸಹ ಮಾಡಿದರು. ಆದಾಗ್ಯೂ, ನನ್ನ ಶಾಸಕ ಸ್ಥಾನದ ರಾಜೀನಾಮೆ ಅಂಗೀಕಾರಗೊಂಡು ನಾನು ಬಿಜೆಪಿಯಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದೆ. ಮತದಾರರು ಒಂದು ಲಕ್ಷಕ್ಕಿಂತ ಅಧಿಕ ಮತಗಳಿಂದ ನನಗೆ ಗೆಲ್ಲಿಸಿದರು. ಮತದಾರರು ಜಾಣರು ಎಂದು ಅವರು ತಿಳಿಸಿದರು.

ಈಗಂತೂ ರಾಜ್ಯದ ಸಮ್ಮಿಶ್ರ ಸರ್ಕಾರವು ಸಂಪೂರ್ಣ ಬಹುಮತ ಕಳೆದುಕೊಂಡಿದೆ. ವಿಶ್ವಾಸಮತವನ್ನು ಕೋರಿರುವ ಮುಖ್ಯಮಂತ್ರಿಗಳು ಕಾಲಹರಣ ಮಾಡುತ್ತಿದ್ದಾರೆ. ವಿಶ್ವಾಸಮತ ಕೇಳಿದ ತಕ್ಷಣವೇ ಸರ್ಕಾರ ಪತನವಾಗಲಿದೆ. ಆ ಭೀತಿಯಿಂದಲೇ ಮಿತಿಮೀರಿದ ಚರ್ಚೆಗಳನ್ನು ಮೈತ್ರಿಕೂಟದವರಿಂದಲೇ ಮಾಡಿಸಲಾಗುತ್ತಿದೆ ಎಂದು ಅವರು ಆರೋಪಿಸಿದರು.

ಮುಂಬಯಿಗೆ ಹೋಗಿರುವ ಮೈತ್ರಿಕೂಟದ ಶಾಸಕರು ಹಣಕ್ಕಾಗಿ ಹೋದವರಲ್ಲ. ಅವರೆಲ್ಲರೂ ಶ್ರೀಮಂತರೇ. ಶಾಸಕರಾಗಿ ಕ್ಷೇತ್ರದ ಕೆಲಸಗಳನ್ನು ಮಾಡಲಾಗುತ್ತಿಲ್ಲ ಎಂಬ ಅಸಮಾಧಾನ ಅವರಲ್ಲಿದೆ ಎಂದು ಅವರು ಹೇಳಿದರು.

emedialine

View Comments

Recent Posts

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

33 mins ago

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

2 hours ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

5 hours ago

ಶರಣ ಮಾರ್ಗಕ್ಕೆ ನಿಮ್ಮೆಲ್ಲರ ಸಹಾಯ ಸಹಕಾರ ಅಗತ್ಯ: 10ನೇ ವರ್ಷದ ಹೊಸ್ತಿಲಲ್ಲಿ ನಿಂತು ನಿಮ್ಮೊಂದಿಗಿಷ್ಟು

ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀ ಕುಟುಂಬದ ಬಂಧು ಬಾಂಧವರಿಗೆ ಒಂದೆಡೆ ದುಃಖ, ತಳವಳ,…

6 hours ago

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

19 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

19 hours ago