ಕಲಬುರಗಿ: ಹಸಿರು ಕ್ರಾಂತಿಯ ಹರಿಕಾರ, ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನರಾಮ್ ಅವರ ೧೧೫ನೇ ಜಯಂತೋತ್ಸವದ ಪ್ರಯುಕ್ತ ಅಖಿಲ ಕರ್ನಾಟಕ ಬೀದಿಬದಿ ವ್ಯಾಪಾರಿಗಳ ಸಂಘದ ವತಿಯಿಂದ ೩೫ ಅಡಿ ಎತ್ತರ ಹಾಗೂ ೮ ಅಡಿ ಅಗಲದ ಬೃಹತ ಭಾವಚಿತ್ರದ ಕಟೌಟ್ ಸ್ಥಾಪಿಸಿ, ಪೂಜೆ ಮತ್ತು ಪುಷ್ಪ ನಮನ ಸಲ್ಲಿಸುವ ಮೂಲಕ ಜಯಂತಿಯನ್ನು ಆಚರಿಸಲಾಯಿತು.
ಸಾರ್ವಜನಿಕ ಉದ್ಯಾಯನವನದ ಟೌನ್ ಹಾಲ್ ಬಳಿಯ ಡಾ.ಬಾಬು ಜಗಜೀವನರಾಂ ಪ್ರತಿಮೆ ಹತ್ತಿರ ಸ್ಥಾಪಿಸಲಾದ ಡಾ.ಬಾಬುಜೀ ಅವರ ಬೃಹತ ಕಟೌಟ್ ಗೆ ಅತಿಥಿಗಣ್ಯಮಾನ್ಯರು ಕ್ರೇನ್ ಮೂಲಕ ಪುಷ್ಪ ಅರ್ಚನೆ ನೆರವೇರಿಸಿ ಡಾ.ಬಾಬು ಜಗಜೀವನರಾಂ ಅವರಿಗೆ ನಮನ ಸಲ್ಲಿಸಿದರು.
ಕಾರ್ಯಕ್ರಮದ ಆಯೋಜಕರಾದ ಅಖಿಲ ಕರ್ನಾಟಕ ಬೀದಿಬದಿ ವ್ಯಾಪಾರಿಗಳ ಸಂಘದ ಅಧ್ಯಕ್ಷ ಜಗನ್ನಾಥ ಎಸ್.ಸೂರ್ಯವಂಶಿ, ವಿಧಾನ ಪರಿಷತ್ ಮಾಜಿ ಸದಸ್ಯ ಅಲ್ಲಮಪ್ರಭು ಪಾಟೀಲ ನೆಲೋಗಿ, ಮಾಜಿ ಸಚಿವರು ಮತ್ತು ಶಾಸಕರಾದ ಪ್ರೀಯಾಂಕ ಖರ್ಗೆ, ಶಾಸಕರಾದ ಬಸವರಾಜ ಮತ್ತಿಮಡು, ಜೈಕನ್ನಡಿಗರ ಸೇನೆ ಅಧ್ಯಕ್ಷ ದತ್ತು ಭಾಸಗಿ, ಧರಂರಾಜ, ವಿನಯಕುಮಾರ, ರಾಜು ಕಟ್ಟಿಮನಿ, ರಾಮಾ ಪೂಜಾರಿ, ಡಾ. ವೇದಮೂರ್ತಿ, ವೆಂಕಟೇಶ ಕಾಂಬಳೆ, ರಾಘವೇಂದ್ರ ಕುಲಕರ್ಣಿ, ಮನೋಹರ ಬಿದನೂರ, ಬಾಬು ಶೇಖ ಪರೀಟ ಸೇರಿದಂತೆ ಹಲವರು ಭಾಗವಹಿಸಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…