ಕಲಬುರಗಿ : ಜೇವರಗಿ ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಯ್ಯ ಇನಾಂದಾರ ಅವರು ತಮ್ಮ ವರ್ಗಾವಣೆಯನ್ನು ಪ್ರಶ್ನಿಸಿ ಕೆಎಟಿಗೆ ಸಲ್ಲಿಸಿದ ಅರ್ಜಿ ವಜಾಗೊಂಡ ಹಿನ್ನೆಲೆಯಲ್ಲಿ ಅವರನ್ನು ಹುದ್ದೆಯಿಂದ ಬಿಡುಗಡೆ ಮಾಡುವಂತೆ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಸಾರ್ವಜನಿಕ ಶಿಕ್ಷಣ ಇಲಾಖೆ ಅಪರ ಅಯುಕ್ತರಿಗೆ ಮನವಿ ಸಲ್ಲಿಸಲಾಯಿತು. ಎಂ.ಎಸ್ ಪಾಟೀಲ ನರಿಬೋಳ ಶರಣು ಪೂಜಾರಿ, ಚಂದ್ರಶೇಖರ ಹಿರೇಮಠ ಸೇರಿದಂತೆ ಹಲವರಿದ್ದರು.