ಕಲಬುರಗಿ: ಕಲಬುರಗಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಚುನಾಯಿತ ಸದಸ್ಯರುಗಳ ವಾರ್ಡ್ ಸಮಿತಿಗಳನ್ನು ರಚಿಸುವ ಕುರಿತು ಆಸಕ್ತಿಯುಳ್ಳ ಸಾರ್ವಜನಿಕರಿಂದ ಅರ್ಜಿ ಸಲ್ಲಿಕೆ ಅವಧಿಯನ್ನು ೨೦೨೨ರ ಮೇ ೧೦ರ ಸಂಜೆ ೫ ಗಂಟೆಯವರೆಗೆ ವಿಸ್ತರಿಸಲಾಗಿದೆ ಎಂದು ಕಲಬುರಗಿ ಮಹಾನಗರ ಪಾಲಿಕೆಯ ಆಯುಕ್ತರು ತಿಳಿಸಿದ್ದಾರೆ.
ಸಾಕಷ್ಟು ಅರ್ಜಿಗಳು ಸಲ್ಲಿಕೆಯಾಗದ ಕಾರಣ ಹಾಗೂ ಸಾರ್ವಜನಿಕರ ಮತ್ತು ಆಡಳಿತ ಹಿತದೃಷ್ಟಿಯಿಂದ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದೆ. ಇನ್ನುಳಿದ ಷರತ್ತುಗಳು ಮೊದಲಿನಂತೆ ಇರುತ್ತದೆ. ಸಾರ್ವಜನಿಕರು ಇದರ ಸದುಪಯೋಗ ಪಡೆಯಬೇಕು. ಈ ಹಿಂದೆ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕವನ್ನು ೨೦೨೨ರ ಏಪ್ರಿಲ್ ೫ ರಂದು ಸಂಜೆ ೫ ಗಂಟೆಯವರೆಗೆ ನಿಗದಿಪಡಿಸಲಾಗಿತ್ತೆಂದು ಅವರು ತಿಳಿಸಿದ್ದಾರೆ.